ಇಸ್ಲಾಮಿಕ್ ಬ್ಯಾಂಕಿಂಗ್ ಸಿಸ್ಟಮ್ ಜಾರಿಗೆ ತರಲು ಆರ್.ಬಿ.ಐ ಚಿಂತನೆ


ಮುಸ್ಲಿಂ ಸಮುದಾಯದಲ್ಲಿ ಬಡ್ಡಿ ವ್ಯವಹಾರಕ್ಕೆ ನಿಷೇದ ಇರುವುದರಿಂದ ಬಹಳಷ್ಟು ಮುಸ್ಲಿಂ ಸಮುದಾಯದವರು ಬ್ಯಾಂಕಿಂಗ್ ವ್ಯವಹಾರಗಳಿಂದ ದೂರ ಉಳಿದಿದ್ದಾರೆ ಎಂದು ಹೇಳಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಬ್ಯಾಂಕಿಂಗ್ ವ್ಯವಹಾರಕ್ಕೆ ಮುಸ್ಲಿಂ ಸಮುದಾಯದವರನ್ನು ಹೆಚ್ಚಾಗಿ ಸೆಳೆಯುವ ಉದ್ದೇಶದಿಂದ ಇಸ್ಲಾಮಿಕ್ ಬ್ಯಾಂಕಿಂಗ್ ಸಿಸ್ಟಮ್ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರವೇ ಕಾರ್ಯರೂಪಕ್ಕೆ ತರಲು ಯೋಚಿಸಲಾಗಿದೆ. ಭಾರತದಲ್ಲಿ ಅತೀ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿರುವ ಮುಸ್ಲಿಂ ಸಮುದಾಯವನ್ನು ಹಣಕಾಸು ಕ್ಷೇತ್ರದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಉದ್ದೇಶ ಹೊಂದಲಾಗಿದೆ. 

ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ವಾರ್ಷಿಕ ವರದಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದು, ಈ ಕುರಿತಂತೆ ಕೇಂದ್ರ ಸರಕಾರದೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದೆ. ನಿರ್ಗಮಿತ ಆರ್.ಬಿ.ಐ ಗವರ್ನರ್ ರಘುರಾಮ್ ರಾಜನ್ ವಾರ್ಷಿಕ ವರದಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ.

Leave a Reply