ಲೈಂಗಿಕ ಕಿರುಕುಳದಿಂದ ಬೇಸತ್ತ ಬಾಲಕಿ ಆತ್ಮಹತ್ಯೆ ಯತ್ನ…?

ಯಾದಗಿರಿ: ಯುವಕರಿಬ್ಬರು ಲೈಂಗಿಕ ಕಿರುಕುಳ ನೀಡಿದ್ದರಿಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ ಆರೋಪ ಕೇಳಿ ಬಂದಿದೆ.

ಯಾದಗಿರಿ ಜಿಲ್ಲೆ ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 19 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಗೆ ಯುವಕರಿಬ್ಬರು ಕಿರುಕುಳ ನೀಡುತ್ತಿದ್ದರೆನ್ನಲಾಗಿದ್ದು, ಮಾರ್ಚ್ 19 ರಂದು ಬಟ್ಟೆ ತೊಳೆಯಲು ಹೋಗಿದ್ದ ಬಾಲಕಿಯನ್ನು ಬೆನ್ನಟ್ಟಿ ಬಂದಿದ್ದಾರೆ.
ಇದರಿಂದ ಭಯಗೊಂಡ ಬಾಲಕಿ ಮನೆಗೆ ವಾಪಸ್ ಆಗಿ, ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ

Leave a Reply