ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಪರಿಚಿತಳಾದ ಯುವತಿಯನ್ನು ಮದುವೆಯಾಗುವುದಾಗಿ ಹೇಳಿ, ಮತ್ತೊಬ್ಬ ಯುವತಿ ಮನೆ ಬಿಟ್ಟು ಹೋದ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಫೇಸ್ ಬುಕ್ ಮೂಲಕ ಮಹಾರಾಷ್ಟ್ರ ಮೂಲದ ಯುವತಿಯೊಂದಿಗೆ ಗೆಳತನ ಬೆಳೆಸಿದ ಬೆಂಗಳೂರಿನ ಯುವತಿ, ಆಕೆಯನ್ನೇ ಮದುವೆಯಾಗುವುದಾಗಿ ಮನೆಯಲ್ಲಿ ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಬೈದಾಡಿದ್ದರಿಂದ ಯುವತಿ ಮನೆ ಬಿಟ್ಟು ಹೋಗಿದ್ದಾಳೆ.
ಮಹಾರಾಷ್ಟ್ರದ ಯುವತಿಯನ್ನು ಮದುವೆಯಾಗುವುದಾಗಿ ಆಕೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ನೊಂದ ಪೋಷಕರು ಕೋರಮಂಗಲ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.