Pahani : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಸರ್ಕಾರದಿಂದ ರಾಜ್ಯದಾದ್ಯಂತ ಇರುವ ಸ್ವಂತ ಜಮೀನಿರುವ ಎಲ್ಲ ರೈತರಿಗೆ ಮತ್ತೊಂದು ಹೊಸ ನಿಯಮ ಜಾರಿಗೆ. ನಿಮ್ಮ ಆಧಾರ್ ಕಾರ್ಡ್ ನಿಮ್ಮ ಜಮೀನಿನ ಪಹಣಿಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯ. ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ರಾಜ್ಯದ ಎಲ್ಲ ರೈತರಿಗೆ ಹೊಸ ನಿಯಮ ಜಾರಿ ಮಾಡಿ ಅಧಿಕೃತವಾಗಿ ಆದೇಶ ಪ್ರಕಟಿಸಿದ್ದಾರೆ.
ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ನಿಮ್ಮ ಜಮೀನಿನ ಪಹಣಿಯೊಂದಿಗೆ ಲಿಂಕ್ ಮಾಡಿಸದೆ ಹೋದರೆ ಸರ್ಕಾರದಿಂದ ದೊರೆಯುವ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ, ಗಂಗಾ ಕಲ್ಯಾಣ ಯೋಜನೆ, ಕೃಷಿ ಹೊಂಡ, ಪಂಪ್ಸೆಟ್ ಮತ್ತು ಸೋಲಾರ್ ವಿದ್ಯುತ್ ಸೇರಿದಂತೆ ಹೀಗೆ ಇನ್ನು ಅನೇಕ ಯೋಜನೆಗಳು ಸಿಗುವುದಿಲ್ಲ. ಸರ್ಕಾರದಿಂದ ನೀಡಲಾಗುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಲು ಈ ಕೂಡಲೇ ರೈತರು ತಮ್ಮ ಜಮೀನಿನ ಪಹಣಿ ಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವುದು ಕಡ್ಡಾಯ.
ಇದನ್ನೂ ಕೂಡ ಓದಿ : PM Kisan Samman Yojana : 17ನೇ ಕಂತಿನ ಹಣ ಬಿಡುಗಡೆ.! ರೈತರಿಗೆ ಬಂಪರ್ ಸುದ್ದಿ! ₹2000 ಹಣ ಬ್ಯಾಂಕ್ ಖಾತೆಗೆ ಜಮೆ.!
ಹಾಗಾದ್ರೆ ಎಲ್ಲಿ ಮಾಡಿಸಬೇಕು.? ಹೇಗೆ ಮಾಡಿಸಬೇಕು.? ಅಗತ್ಯವಾಗಿ ಬೇಕಾಗುವ ದಾಖಲೆಗಳೇನು.? ಎಷ್ಟು ದಿನಗಳಲ್ಲಿ ಮಾಡಿಸಬೇಕು? ಲಾಸ್ಟ್ ಡೇಟ್ ಯಾವಾಗ.? ಈ ಎಲ್ಲ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.
ರೈತರ ಜಮೀನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅನೇಕ ನಿಯಮವನ್ನ ಜಾರಿಗೊಳಿಸುತ್ತಿದೆ. ಇನ್ನು ರಾಜ್ಯದಲ್ಲಿ ರೈತರಿಗಾಗಿ ವಿಶೇಷ ಸೌಲಭ್ಯವನ್ನು ಕೂಡ ರಾಜ್ಯ ಸರ್ಕಾರ ನೀಡುತ್ತಿದೆ. ಸದ್ಯ ರೈತರ ಬರ ಪರಿಹಾರಕ್ಕಾಗಿ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಒಟ್ಟಾರೆ 70% ರಷ್ಟು ಸಣ್ಣ ರೈತರಿದ್ದಾರೆ. ಆದರೆ ಕೇಂದ್ರ ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಸಣ್ಣ ರೈತರ ಸಂಖ್ಯೆ ಶೇಕಡಾ 44 ರಷ್ಟು ಮಾತ್ರ. ಇದರಿಂದಾಗಿ ಕೇಂದ್ರದಿಂದ ಲಭ್ಯವಾಗುವ ಬರ ಪರಿಹಾರದಿಂದ ಸಾಕಷ್ಟು ರೈತರು ವಂಚಿತರಾಗುತ್ತಿದ್ದಾರೆ. ಈ ಸಮಸ್ಯೆಯನ್ನ ಪರಿಹರಿಸಿಕೊಳ್ಳಲು ರಾಜ್ಯದ ರೈತರು ತಮ್ಮ ಆರ್ಟಿಸಿ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
ಇದನ್ನೂ ಕೂಡ ಓದಿ : Annabhagya Scheme : ಜನವರಿ ಮತ್ತು ಫೆಬ್ರವರಿ ತಿಂಗಳ ಅಕ್ಕಿ ಹಣ ಬಂದಿಲ್ವಾ – ಈಗಲೇ ಈ ಕೆಲಸ ಮಾಡಿ ಹಣ ಜಮಾ ಆಗುತ್ತೆ ನೋಡಿ
ಆರ್ ಟಿಸಿ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿದರೆ, ರಾಜ್ಯದ ಸಣ್ಣ ರೈತರ ಅಂಕಿ ಅಂಶಗಳ ಬಗ್ಗೆ ಮಾಹಿತಿ ಲಭಿಸುತ್ತದೆ. ಹೀಗಾಗಿ ಎಲ್ಲ ರೈತರು ತಮ್ಮ ಆರ್ಟಿಸಿ ಜೊತೆ ಆಧಾರ್ ಲಿಂಕ್ ಮಾಡಿಕೊಳ್ಳುವ ಮೂಲಕ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಆರ್ಟಿಸಿ ಜೊತೆ ಆಧಾರ್ ಲಿಂಕ್ ಮಾಡಲು ಪ್ರತ್ಯೇಕ ಅಪ್ಲಿಕೇಶನ್ ಬಿಡುಗಡೆ. ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ ಶೇಕಡಾ 33 ರಷ್ಟು ಒಟ್ಟು ರೈತರ ಒಟ್ಟು ವಿಸ್ತೀರ್ಣ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ.
ಗ್ರಾಮ ಆಡಳಿತಾಧಿಕಾರಿಗಳಿಗೆ ತಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಯಾವ ರೈತನಿಗೆ ಎಷ್ಟು ಎಕರೆ ಜಮೀನಿದೆ ಎನ್ನುವ ಕನಿಷ್ಠ ಮಾಹಿತಿ ಇದ್ದೆ ಇರುತ್ತದೆ. ಅದನ್ನ ಮತ್ತೆ ರೈತರ ಬಳಿ ಕೇಳಿ, ದತ್ತಾಂಶದಲ್ಲಿ ನಮೂದಿಸಬೇಕು. ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ನಮೂದಿಸದಿದ್ದರೆ, ರೈತರಿಗೆ ಪರಿಹಾರ ನೀಡಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಆರ್ ಟಿಸಿ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಲಿಂಕ್ ಮಾಡಲು ಶೀಘ್ರದಲ್ಲಿಯೇ ಸರ್ಕಾರವು ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಲಾಗುವುದು ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..