2024 SSLC Result Announcement : ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ ಮಾಡುವ ಕುರಿತು ಬ್ರೇಕಿಂಗ್ ಮಾಹಿತಿ ಲಭ್ಯವಾಗಿದ್ದು, ಎಸ್ಎಸ್ಎಲ್ ಸಿ ರಿಸಲ್ಟ್ ಯಾವಾಗ ಬರುತ್ತದೆ? ಹೇಗೆ ಚೆಕ್ ಮಾಡುವುದು ವೆಬ್ ಸೈಟ್ ಲಿಂಕ್ ಯಾವುದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ.
ಹೌದು, ಈ ವರ್ಷ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆಯನ್ನ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಸಲಾಯಿತು. ಮತ್ತು ಸುಮಾರು 8.90 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಕಳೆದ ವರ್ಷ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶಗಳನ್ನ ಮೇ ಎಂಟರಂದು ಪ್ರಕಟಿಸಲಾಯಿತು. ಒಟ್ಟಾರೆ ಶೇಕಡ 83.89 ರಷ್ಟು ಉತ್ತೀರ್ಣರಾಗಿದ್ದರು. ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಹತ್ತನೇ ತರಗತಿ ಪರೀಕ್ಷೆಗಳ ಫಲಿತಾಂಶಗಳನ್ನ ಈ ತಿಂಗಳ ಅಂತ್ಯದ ವೇಳೆಗೆ ಅಥವಾ ಮೇ 2024 ರ ಮೊದಲ ವಾರದೊಳಗೆ ಪ್ರಕಟಿಸುವ ಸಾಧ್ಯತೆ ಇದೆ.
ಈ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು, ಫಲಿತಾಂಶಗಳನ್ನು ಪ್ರಕಟಿಸಿದ ನಂತರ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಫಲಿತಾಂಶಗಳನ್ನು ಪರಿಶೀಲಿಸಬಹುದು ಹಾಗು ಆನ್ಲೈನ್ ನಲ್ಲಿ ಮಾರ್ಕ್ಸ್ ಶೀಟ್ ಡೌನ್ಲೋಡ್ ಮಾಡಬಹುದು.
ಅಧಿಕೃತ ಎಸ್ಎಸ್ಎಲ್ ಸಿ ಫಲಿತಾಂಶ ವೆಬ್ಸೈಟ್ ಲಿಂಕ್ :- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..