Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!

Small Farmers : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಅದರಲ್ಲೂ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್. ಅನ್ನದಾತ ರೈತರಿಗೆ ಈಗಾಗಲೇ ರಾಜ್ಯದ 226 ತಾಲೂಕುಗಳಿಗೆ ಬರ ಪರಿಹಾರದ ಹಣವನ್ನು ನೀಡಲಾಗಿತ್ತು.

ಅದೇ ರೀತಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದಾಗಿ ರೈತರ ಖಾತೆಗಳಿಗೆ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ಮಾತ್ರ ₹3,000 ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ಬಿಡುಗಡೆಗೊಳಿಸಿರುವ ಹಣ ಎಂತಹ ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ.? ಯಾವ ಜಿಲ್ಲೆಗಳ ಮತ್ತು ತಾಲ್ಲೂಕುಗಳ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳಲು ಮತ್ತು ಈ ಹಣ ಜಮಾವಣೆ ಆಗಿಲ್ಲ ಅಂದ್ರೆ ಯಾರನ್ನ ಸಂಪರ್ಕಿಸಬೇಕು ಎನ್ನುವ ಬಗ್ಗೆ ತಿಳಿಯೋಣ.

ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

ಸಣ್ಣ, ಮತ್ತು ಅತೀ ಸಣ್ಣ ರೈತ ಕುಟುಂಬಕ್ಕೆ ಜೀವನ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಗರಿಷ್ಠ ₹2,874/- ರೂಪಾಯಿ ಜೀವನೋಪಾಯ ನಷ್ಟ ಪರಿಹಾರ ವಿತರಿಸಲು ಮುಂದಾಗಿದೆ. ರಾಜ್ಯದಲ್ಲಿ ಅರ್ಹ ಎಂದು ಗುರುತಿಸಲಾದ 19,82,677 ರೈತರನ್ನು ಒಳಗೊಂಡ 17,84,398 ಸಣ್ಣ, ಅತೀ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ ಪರಿಹಾರ ವಿತರಣೆ ಪ್ರಕ್ರಿಯೆಗೆ ಚಾಲನೆ ನೀಡುತ್ತಿದೆ. ಸದ್ಯದಲ್ಲಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ. ಕಳೆದ ವರ್ಷ ತೀವ್ರ ಬರದಿಂದಾಗಿ 223 ತಾಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿತ್ತು.

ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

ಬರದಿಂದ ಆರ್ಥಿಕವಾಗಿ ಹಿಂದುಳಿದ ಸಣ್ಣ, ಅತೀ ಸಣ್ಣ ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಆ ಕುಟುಂಬದವರ ಜೀವನೋಪಾಯಕ್ಕೆ ಆರ್ಥಿಕ ನೆರವನ್ನು ನೀಡಿ ಸಹಾನುಭೂತಿ ನೀಡುವ ನಿಟ್ಟಿನಲ್ಲಿ ಜೀವನೋಪಾಯ ನಷ್ಟ ಪರಿಹಾರ ವಿತರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಕಾರಣ ಸಣ್ಣ, ಅತೀ ಸಣ್ಣ ರೈತರು ವಾರ್ಷಿಕ ನಷ್ಟದಿಂದ ತುಂಬಾ ಕಂಗಾಲಾಗಿದ್ದು, ಅವರ ಜೀವನೋಪಾಯ ನಷ್ಟ ಭರಿಸುವುದಕ್ಕೆ ಸುಮಾರು 18 ಲಕ್ಷ ರೈತರಿಗೆ ತಲಾ ₹3,000/- ಗಳಂತೆ 5 ಕೋಟಿ ರೂಪಾಯಿ ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply