Dwarakish : ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಇಂದು (ಏಪ್ರಿಲ್ 16) ನಿಧನ ಹೊಂದಿದ್ದಾರೆ.
‘ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ’ ಎಂದು ದ್ವಾರಕೀಶ್(Dwarakish) ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ.

ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ದ್ವಾರಕೀಶ್ ಅವರು ಹಲವು ದಿಗ್ಗಜರ ಜೊತೆ ನಟಿಸಿ ಫೇಮಸ್ ಆಗಿದ್ದರು.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : ಸ್ವಂತ ವಾಹನ ಇರುವ ಎಲ್ಲರಿಗೂ ಬಿಗ್ ಶಾಕ್ | ಈ ಹೊಸ ರೂಲ್ಸ್ ಎಲ್ಲರಿಗೂ ಕಡ್ಡಾಯ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

ದ್ವಾರಕೀಶ್(Dwarakish) ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ದ್ವಾರಕೀಶ್(Dwarakish) ಅವರು ಮೃತಪಟ್ಟ ಬಗ್ಗೆ ಈ ಮೊದಲು ಹಲವು ಬಾರಿ ವದಂತಿ ಹಬ್ಬಿತ್ತು. ಈ ಬಾರಿಯೂ ಸಾವಿನ ಸುದ್ದಿ ಫೇಕ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಈಗ ಅವರ ಕುಟುಂಬದ ಕಡೆಯಿಂದಲೇ ಈಗಾಗಲೇ ಇದಕ್ಕೆ ಸ್ಪಷ್ಟನೆ ನೀಡಲಾಗಿದೆ.

WhatsApp Group Join Now
Telegram Group Join Now

Leave a Reply