Vijaya Raghavendra : ಮಗನಿಗಾಗಿ ವಿಶೇಷ ಪ್ರಾರ್ಥನೆ ಮಾಡಿದ ನಟ ವಿಜಯ ರಾಘವೇಂದ್ರ.! ಚಿತ್ರೀಕರಣದಲ್ಲಿ ಬ್ಯುಸಿಯಾದ ನಟ

Vijaya Raghavendra : ನಟ ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನ ನಿಧನದ ಬಳಿಕ ಮಗ ಶೌರ್ಯನ ಭವಿಷ್ಯದ ಬಗ್ಗೆ ಸಾಕಷ್ಟು ಕನಸು ಕಟ್ಟಿಕೊಂಡಿದ್ದಾರೆ. ಇದೀಗ ಇದ್ದಕ್ಕಿದ್ದಂತೆ ವಿಜಯ ರಾಘವೇಂದ್ರ ಅವರು ಮಗನನ್ನ ಕರೆದುಕೊಂಡು ಎಲ್ಲಿಗೆ ಹೋಗಿದ್ದಾರೆ ಗೊತ್ತಾ.? ಮಗನಿಗಾಗಿ ಕೆಲಸ ಮಾಡಿದ್ದಾರೆ ಗೊತ್ತಾ.? ಅದರ ಬೆಗ್ಗೆ ಸಂಪೂರ್ಣವಾಗಿ ನೋಡೋಣ. ಹೌದು, ಇಂದು ನಟ ವಿಜಯ ರಾಘವೇಂದ್ರ ಅವರು ಬಿಳಿಗಿರಿ ರಂಗನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಪುತ್ರ ಶೌರ್ಯನ ಜೊತೆ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಮಗ ಶೌರ್ಯನ ಹೆಸರಲ್ಲಿ ಅರ್ಚನೆ ಮಾಡಿಸಿದ್ದಾರೆ ಚಿನ್ನಾರಿ ಮುತ್ತ ನಟ ವಿಜಯ ರಾಘವೇಂದ್ರ.

Whatsapp Group Join
Telegram channel Join

ಇದನ್ನೂ ಕೂಡ ಓದಿ : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತರ ಗಮನಕ್ಕೆ / ಹೊಸ ನಿಯಮ ಜಾರಿಗೆ.!

ವಿಜಯ ರಾಘವೇಂದ್ರ ಅವರ ಅಭಿನಯದ ಜೀನಿಯಸ್ ಮುತ್ತಾ ಸಿನಿಮಾದ ಚಿತ್ರೀಕರಣ ಎಳಂದೂರು ತಾಲೂಕಿನ ಬಿಳಿಗಿರಿ ರಂಗನಾಥ ಬೆಟ್ಟದಲ್ಲಿ ನಡೆಯುತ್ತಿದೆ. ನಿನ್ನೆ ನಟ ವಿಜಯ ರಾಘವೇಂದ್ರ ಹಾಗು ಸಹ ಕಲಾವಿದರು ಬಿಳಿಗಿರಿ ರಂಗನಾಥ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನದಲ್ಲಿ ನಟ ವಿಶೇಷ ಪೂಜೆ ಸಲ್ಲಿಸಿದ್ದರು. ಪುತ್ರ ಶೌರ್ಯ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದರು. ಬಳಿಕ ಹತ್ತು ನಿಮಿಷ ದೇವಾಲಯದಲ್ಲಿ ಕುಳಿತು ಧ್ಯಾನ ಮಾಡಿದರು. ಬಿಳಿಗಿರಿ ರಂಗನಾಥ ಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.

Whatsapp Group Join
Telegram channel Join

ಇದನ್ನೂ ಕೂಡ ಓದಿ : ಬಿಗ್ ಬಾಸ್ ನಲ್ಲಿ ರಾತ್ರೋರಾತ್ರಿ ನಡೆಯಿತು ಲವ್ವಿ ಡವ್ವಿ.! ಸಂಗೀತಾ-ಕಾರ್ತಿಕ್ ಮಾಡಿದ್ದೇನು ನೋಡಿ.?

ನಂತರ ದಾಸೋಹ ಭವನದಲ್ಲಿ ಪ್ರಸಾದ ಸೇವಿಸಿದರು. ನೆಚ್ಚಿನ ನಟನನ್ನು ಕಂಡ ಕೂಡಲೇ ಬಿಳಿಗಿರಿ ರಂಗನಾಥ ಬೆಟ್ಟಕ್ಕೆ ಬಂದಿದ್ದ ಭಕ್ತರು ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ನಿರ್ದೇಶಕ ನಾಗಾಭರಣ, ಹಿರಿಯ ಕಲಾವಿದೆ ಗಿರಿಜಾ ಲೋಕೇಶ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ನಟ ವಿಜಯ ರಾಘವೇಂದ್ರ ಗುರುತಿಸಿಕೊಂಡಿದ್ದಾರೆ. ಸದ್ಯ ಕೆಲ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಇದೀಗ ಚಾಮರಾಜನಗರದಲ್ಲಿ ಜೀನಿಯಸ್ ಮುತ್ತ ಚಿತ್ರೀಕರಣ ಭರದಿಂದ ಸಾಗುತ್ತಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply