Varthur Santhosh : ಹುಲಿ ಉಗುರು ಧರಿಸಿದ್ದ ನಟ ದರ್ಶನ್ ಹಾಗು ವಿನಯ್ ಗುರೂಜಿ ಅರೆಸ್ಟ್ ಆಗ್ತಾರಾ.? ಶಾಕ್ ಆದ ಅಭಿಮಾನಿಗಳು

Varthur Santhosh : ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಕನ್ನಡ ಸೀಸನ್ ೧೦ರ ಸ್ಪರ್ಧಿ ವರ್ತೂರು ಸಂತೋಷ್(Varthur Santhosh) ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟ ಹಾಗು ಪ್ರಮುಖ ನಾಯಕರಿಗೂ ಸಂಕಷ್ಟ ಎದುರಾಗಿದೆ.

Whatsapp Group Join
Telegram channel Join

ಹುಲಿ ಉಗುರು ಧರಿಸಿದ ಆರೋಪದ ಮೇಲೆ ಇದೀಗ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ವಿರುದ್ಧ ಕೂಡ ದೂರು ದಾಖಲಾಗಿದೆ. ಅಲ್ಲದೇ ವಿನಯ್ ಗುರೂಜಿ(Vinay Guruji) ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಇಬ್ಬರ ವಿರುದ್ಧ ಸರ್ವ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ.

ಇದನ್ನೂ ಕೂಡ ಓದಿ : Loan waiver : ಬೆಳೆ ಸಾಲ ಪಡೆದಿರುವ ರೈತರಿಗೆ ಸಿಹಿಸುದ್ಧಿ.! ಬೆಳೆ ಪರಿಹಾರ ಹಣ ರೈತರ ಖಾತೆಗೆ ನೇರ ಜಮಾ.!

Whatsapp Group Join
Telegram channel Join

ನಟ ದರ್ಶನ್ ಹುಲಿ ಉಗುರು ಧರಿಸಿದ್ದ ಫೋಟೋ ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ನಟ ದರ್ಶನ್(Darshan) ವಿರುದ್ಧ ದೂರು ದಾಖಲಾಗಿದೆ.ಹುಲಿಯ ಉಗುರು ಇದ್ದ ಕಾರಣಕ್ಕೆ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಲ್ಲಿ ಬಂಧಿಸಲಾಗಿದೆ. ವಿನಯ್ ಗುರೂಜಿ(Vinay Guruji) ಕೂಡ ಹುಲಿಯ ಚರ್ಮದ ಮೇಲೆ ಕುಳಿತಿದ್ದಾರೆ.

ವರ್ತೂರು ಸಂತೋಷ್ ರೀತಿಯೇ ವಿನಯ್ ಗುರೂಜಿ ಹಾಗು ನಟ ದರ್ಶನ್ ಅವರನ್ನು ಕರೆಸಿ ವಿಚಾರಿಸಬೇಕು. ಅವರು ಧರಿಸಿರುವ ಹುಲಿ ಉಗುರು ಪೆಂಡೆಂಟ್ ಹಾಗು ಹುಲಿ ಚರ್ಮ ಅಸಲಿಯಾ.? ಅಥವಾ ನಕಲಿಯಾ.? ಎನ್ನುವುದು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಆಗ್ರಹಿಸಲಾಗಿದೆ.

ಇದನ್ನೂ ಕೂಡ ಓದಿ : RBI New Updates : ಬ್ಯಾಂಕ್ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ಧಿ.! ಆರ್ ಬಿಐನಿಂದ ಹೊಸ ನಿಯಮ ಜಾರಿಗೆ

ಈ ಮೂಲಕ ವಿನಯ್ ಗುರೂಜಿ ಹಾಗು ನಟ ದರ್ಶನ್ ಅವರಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. ಈ ಹಿಂದೆ ದರ್ಶನ್ ಹಾಗು ರಾಕ್ ಲೈನ್ ವೆಂಕಟೇಶ್ ಅವರು ಹುಲಿ ಉಗುರಿನ ಲಾಕೆಟ್ ಧರಿಸಿದ್ದರು. ಈ ಕುರಿತು ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅವರ ವಿರುದ್ಧವು ಕಾನೂನು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಪ್ರಕರಣ ಎಲ್ಲಿಗೆ ಹೋಗಿ ಮುಟ್ಟುತ್ತೋ.? ಕಾದುನೋಡಬೇಕಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply