Chetan Ahimsa : ಹಿಂದುತ್ವದ ಬಗ್ಗೆ ಕೆಟ್ಟ ಪೋಸ್ಟ್! ಚೇತನ್ ಅಹಿಂಸಾ ಅರೆಸ್ಟ್.!

Chetan Ahimsa : ನಟ ಚೇತನ್‌ ಕುಮಾರ್‌ ಇತ್ತೀಚೆಗೆ ಒಂದಲ್ಲ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿ ಇರುತ್ತಾರೆ. ಇದೀಗ ಮತ್ತೊಂದು ವಿವಾದದ ಸುಳಿಯಲ್ಲಿ ಸಿಲುಕಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್‌ ನನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಚೇತನನ್ನು ಕೋರ್ಟ್‌ ಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ನಟ ಚೇತನ್‌ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿತ್ತು. ಐಪಿಸಿ ಸೆಕ್ಷನ್‌ 295A ಹಾಗೂ 505B ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಕೂಡ ಓದಿ : 22K Carat vs 24K Carat Gold Differences : 22 ಕ್ಯಾರೆಟ್ ಹಾಗು 24 ಕ್ಯಾರೆಟ್ ಚಿನ್ನದ ವ್ಯತ್ಯಾಸಗಳೇನು.?

”ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ.

ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು.

1992 ರಲ್ಲಿ : ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ -> ಇದು ಒಂದು ಸುಳ್ಳು.

ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ -> ಇದು ಕೂಡ ಒಂದು ಸುಳ್ಳು.

ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್ ಪೋಸ್ಟ್ ಒಂದನ್ನು ಫೇಸ್ ಬುಕ್ ಹಾಗೂ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಕೂಡ ಓದಿ : Nagamani : ನಾಗಮಣಿ ಕದ್ದ ವ್ಯಕ್ತಿಗೆ ಹೆಣ್ಣು ನಾಗರಹಾವು ಮಾಡಿದ್ದೇನು ಗೊತ್ತಾ.? ಭಯ ಪಡ್ತೀರಾ.!

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply