ಬೈಕ್ & ಕಾರು ಇದ್ದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ – ಇಂತಹ ವಾಹನ ರಸ್ತೆಗೆ ತರುವಂತಿಲ್ಲ ₹2000 ದಂಡ ಫಿಕ್ಸ್.!

ಸ್ವಂತ ಬೈಕ್ ಅಥವಾ ಕಾರ್ ಇದ್ದವರಿಗೆ ರಾಜ್ಯ ಸರ್ಕಾರದಿಂದ ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ ಇಂತಹ ಬೈಕ್ ಮತ್ತು ಕಾರ್ ಇದ್ದವರಿಗೆ ₹1000 ದಂಡ. ಇದೇ ಫೆಬ್ರವರಿ ಹದಿನೇಳರಿಂದ ರಾಜ್ಯದಾದ್ಯಂತ ಹೊಸ ರೂಲ್ಸ್ ಜಾರಿಗೊಳಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಜಾರಿ. ಸ್ವಂತ ಕಾರು ಅಥವಾ ಬೈಕ್ ಇದ್ದವರು ನೋಡಲೇಬೇಕಾದ ವಿಷಯ. ಯಾಕೆ ₹2000 ದಂಡ ಹಾಕಲಾಗುತ್ತದೆ.? ಎಂತಹ ಕಾರು ಮತ್ತು ಬೈಕ್ ಗಳಿಗೆ ಹಾಕಲಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ದೇಶದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಯನ್ನು ಹತೋಟಿಗೆ ತರಲು ಹಾಗೂ ಸಾರಿಗೆ ಸಂಚಾರ ನಿಯಮದಲ್ಲಿ ಮತ್ತಷ್ಟು ಬಿಗಿ ಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರ ಮೇಲಿಂದ ಮೇಲೆ ಹೊಸ ಹೊಸ ನಿಯಮಗಳನ್ನ ಜಾರಿಗೊಳಿಸುತ್ತ ಬರುತ್ತಿದೆ. ಆದರೆ ರಾಜ್ಯ ಸರ್ಕಾರದಿಂದ ಈ ಬಾರಿ ಜಾರಿಗೊಳಿಸಿರುವ ಈ ಹೊಸ ರೂಲ್ಸ್ ಕೇಳಿದ್ರೆ ನೀವು ಕೂಡ ಶಾಕ್ ಆಗೋದು ಗ್ಯಾರಂಟಿ. ಹೌದು, ಇದೇ ಫೆಬ್ರವರಿ ಹದಿನೇಳರ ನಂತರ ₹2000 ದಂಡ ವಿಧಿಸಲು ಈಗಾಗಲೇ ಟ್ರಾಫಿಕ್ ಪೊಲೀಸರಿಗೆ ಸೂಚನೆಯನ್ನು ಹೊರಡಿಸಲಾಗಿದೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : Govt Scheme Updates : ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ – ಹಣ ಜಮಾ ಆಗುವುದಿಲ್ಲ – ಬಿಗ್ ಶಾಕಿಂಗ್ ನ್ಯೂಸ್, ಹೊಸ ರೂಲ್ಸ್ ಜಾರಿಗೆ.!

ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಸುವಂತೆ ಫೆಬ್ರವರಿ ಹದಿನೇಳರ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಹೌದು, ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ ಹದಿನೇಳು ಕೊನೆಯ ದಿನವಾಗಿದ್ದು, ನಿಗದಿತ ದಿನದೊಳಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.

WhatsApp Group Join Now
Telegram Group Join Now

ಕರ್ನಾಟಕ ರಾಜ್ಯದಲ್ಲಿ ಒಂದನೇ ಎಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು ಸೇರಿದಂತೆ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ. 2019 ಏಪ್ರಿಲ್ 1 ಕ್ಕಿಂತ ಹಳೆಯದಾದ ವಾಹನಗಳಿಗೆ ಹೈ ಸೆಕ್ಯೂರಿಟಿ ರೆಜಿಸ್ಟ್ರೇಷನ್ ಪ್ಲೇಟ್(HSRP) ಹಾಕಿಸಿಕೊಳ್ಳುವಂತೆ ಸಾರಿಗೆ ಇಲಾಖೆ ನೀಡಿರುವ ಗಡುವು ಫೆಬ್ರವರಿ ೧೭ ಕ್ಕೆ ಮುಕ್ತಾಯವಾಗಲಿದೆ.

ಇದನ್ನೂ ಕೂಡ ಓದಿ : eShram Card Benifits : ಈ-ಶ್ರಮ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್/ ಪ್ರತಿ ತಿಂಗಳಿಗೆ ₹3000 ಹಣ

WhatsApp Group Join Now
Telegram Group Join Now

ನಂಬರ್ ಪ್ಲೇಟ್ ಬದಲಾವಣೆಗೆ ಹಲವು ವಾಹನ ಮಾಲೀಕರು ಆಸಕ್ತಿ ತೋರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಸಿ ಮುಟ್ಟಿಸಲು ಇಲಾಖೆ ಮುಂದಾಗಿದೆ. ವಾಹನಗಳಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಸದೇ ಮೊದಲ ಬಾರಿಗೆ ಸಿಕ್ಕಿಬಿದ್ದರೆ ₹1,000ರೂಪಾಯಿ ದಂಡ ಹಾಗು ಎರಡನೇ ಬಾರಿಗೆ ಸಿಕ್ಕಿಬಿದ್ದರೆ ₹2,000ರೂಪಾಯಿ ದಂಡ ಹಾಕಲಾಗುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply