BPL Ration Card : ಬಿಪಿಎಲ್ ಹಾಗು ಅಂತ್ಯೋದಯ ರೇಶನ್ ಕಾರ್ಡ್ ಇದ್ದವರಿಗೆ // ಅಕ್ಕಿ ಬದಲಿಗೆ ಹಣ ನೇರ ಖಾತೆಗೆ.!

BPL Ration Card : ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಇರುವ ಕರ್ನಾಟಕ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ ಪ್ರತಿಯೊಬ್ಬರಿಗೂ ಕೂಡ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ರಾಜ್ಯ ಸರ್ಕಾರದಿಂದ ಹಣ ಕೊಟ್ಟರು ಅಕ್ಕಿ ಕೊಡಲ್ಲ ಎಂದು ಕೇಂದ್ರ ಸರ್ಕಾರವು ಈಗಾಗಲೇ ತಿಲಿಸಲಾಗಿತ್ತು. ಕೊಟ್ಟ ಮಾತು ಉಳಿಸಿ ಕೊಳ್ಳಲು ರಾಜ್ಯದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಎಲ್ಲಾ ಪ್ರತಿಯೊಬ್ಬ ರೇಷನ್ ಕಾರ್ಡ್ ದಾರರಿಗೆ ಅಕ್ಕಿ ಬದಲಿಗೆ ನೇರವಾಗಿ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ. ಆದರೆ ಪ್ರತಿ ಕೆಜಿ ಅಕ್ಕಿಗೆ ಎಷ್ಟು ಹಣ ಹಾಕಲಾಗುತ್ತದೆ.? ಮತ್ತು ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬ ಸದಸ್ಯರ ಯಾರ ಖಾತೆಗೆ ಎಷ್ಟು ಹಣ ಹಾಕಲಾಗುತ್ತದೆ.? ಪ್ರತಿ ಕೆಜಿ ಗೆ ಎಷ್ಟು ಹಣ ಅಂತ ಲೆಕ್ಕ ಮಾಡಿ ಅಕೌಂಟ್ ಗೆ ಹಾಕಲಾಗುತ್ತದೆ. ಇದರ ಬಗ್ಗೆನೇ ಎಲ್ಲಾ ಸಂಪೂರ್ಣ ಮಾಹಿತಿಯನ್ನ ಇಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Rain News : ರಾಜ್ಯದಲ್ಲಿ ಮುಂದಿನ 2 ದಿನ ಈ ಜಿಲ್ಲೆಗಳಲ್ಲಿ ಭಯಂಕರ ಮಳೆ.!

BPL Ration Card
BPL Ration Card

ಪ್ರತಿ ಕೆಜಿ ಅಕ್ಕಿಗೆ 34/- ರೂಪಾಯಿಯಂತೆ ಬಿಪಿಎಲ್ ರೇಷನ್ ಕಾರ್ಡ್ ದಾರರಿಗೆ ಮಾಸಿಕ ತಲಾ 170/- ರೂಪಾಯಿ ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ನೂತನ ಆಹಾರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು. ಕಾಂಗ್ರೆಸ್ ಚುನಾವಣಾ ಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕು ಆಗಿರುವುದರಿಂದ 5 ಕೆಜಿ ಅಕ್ಕಿಯ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು. ಈ ಕುರಿತು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು. ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವರಾದ ಹೆಚ್. ಕೆ ಪಾಟೀಲ್ ಹಾಗು ಕೆ. ಹೆಚ್ ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನ ಪ್ರಕಟಪಡಿಸಿದರು. ಅಕ್ಕಿ ಬದಲು ಜನರಿಗೆ ಹಣ ನೀಡಲು ಸಂಪೂರ್ಣ ಸಂಪುಟ ಸಭೆ ತೀರ್ಮಾನಿಸಿದೆ. 5 ಕೆಜಿ ಅಕ್ಕಿ ಬದಲು ಜನರಿಗೆ ಹಣ ನೀಡಲು ನಿರ್ಧರಿಸಲಾಗಿದೆ. ಪ್ರತಿ ಕೆಜಿ ಅಕ್ಕಿ ಗೆ 34/- ರೂಪಾಯಿಯಂತೆ ಬಿಪಿಎಲ್ ಪಡಿತರದಾರರಿಗೆ ಮಾಸಿಕ 170/- ರೂಪಾಯಿಯಂತೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ ಎಂದಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..