ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!

ಕೊಪ್ಪಳದಲ್ಲಿ ಮಸೀದಿ ಮುಂದೆಯೇ ಹಿಂದೂ ಯುವಕನನ್ನು ಮುಸ್ಲಿಂ ಕೊಲೆ ಮಾಡಿದ್ದಾನೆ. ಭಾನುವಾರ ರಾತ್ರಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಪ್ರೀತಿ ವಿಚಾರಕ್ಕೆ ಮರ್ಡರ್ ಆಗಿದೆ ಎಂಬ ಶಾಕಿಂಗ್ ಸುದ್ಧಿ ಹೊರಬಂದಿದೆ.

ಕೊಪ್ಪಳದ ಸಾದಿಕ್ ಕೋಲ್ಕಾರ್​ ಎಂಬುವನಿಂದ ಗವಿಸಿದ್ದಪ್ಪ ನಾಯಕ್​​ನ ಕೊಲೆ ಮಾಡಲಾಗಿದೆ. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಕೊಲೆ ಬಳಿಕ ಸಾದಿಕ್​ ನೇರವಾಗಿ ಬಂದು ನಗರ ಠಾಣೆಗೆ ಶರಣಾಗಿದ್ದಾನೆ. ವಿವಿಧ ಸೆಕ್ಷನ್ ಅಡಿ ಆತನ ಮೇಲೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಗವಿಸಿದ್ದಪ್ಪ, ಗೌರಿ ಅಂಗಳ ಏರಿಯಾದ ಅಪ್ರಾಪ್ತ ಯುವತಿಯನ್ನು ಪ್ರೀತಿಸುತ್ತಿದ್ದನು. ಇಬ್ಬರು ಮನೆಬಿಟ್ಟು ಓಡಿ ಹೋಗಿದ್ದರು. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ. ಸಾದಿಕ್​ನೊಂದಿಗೆ ಲವ್ ಬ್ರೇಕಪ್ ಮಾಡಿಕೊಂಡ ಯುವತಿ ಗವಿಸಿದ್ದಪ್ಪನನ್ನು ಪ್ರೀತಿಸಲು ಶುರು ಮಾಡಿದ್ದಳು. ಇದ್ರಿಂದ ಕೋಪಗೊಂಡಿದ್ದ ಸಾದಿಕ್ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ.

ಕೊಲೆ ಮಾಡೋಕು ಮುನ್ನ ಸಾದಿಕ್​ ಮಚ್ಚು ಹಿಡಿದು ರೀಲ್ಸ್ ಮಾಡಿ ಬಿಲ್ಡಪ್ ಕೊಟ್ಟಿದ್ದ ಎನ್ನಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದನು ಬಳಿಕ ರಾತ್ರಿ 7.30 ಕ್ಕೆ ಗವಿಸಿದ್ದಪ್ಪನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇವನ ಜತೆ ಇನ್ನೂ ಮೂವರು ಭಾಗಿಯಾಗಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇನ್ನು, ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 12 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ನಡೆದಿತ್ತು. ಇದೀಗ ಘಟನೆಗೆ ಮುಖ್ಯ ಕಾರಣ ಏನು ಎಂಬುದು ಬೆಳಕಿಗೆ ಬಂದಿದೆ. ಗ್ರಾಮದ ಕೆಲ ಕಿಡಿಗೇಡಿಗಳು ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ (Poison) ಬೆರೆಸಿ ಮಕ್ಕಳನ್ನು ಕೊಲ್ಲಲು ಪ್ಲ್ಯಾನ್‌ ಮಾಡಿದ್ದರು ಎಂದು ತಿಳಿದು ಬಂದಿದೆ.

ಹೌದು, ಶಾಲೆಯ 12 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಬಳಿಕ ಸವದತ್ತಿ ಠಾಣಾ ಪೊಲೀಸರು ಶಾಲೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಗ ಟ್ಯಾಂಕರ್‌ ಬಳಿಕ ಒಂದು ಬಾಟಲಿ ಬಿದ್ದಿದನ್ನು ನೋಡಿದ ಅಧಿಕಾರಿಗಳು ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ವಿಷದ ಬಾಟಲಿ ಎಂದು ತಿಳಿದುಬಂದಿದೆ. ಇದು ಕಿಡಿಗೇಡಿ ಕೃತ್ಯ ಎಂದು ಅರಿತ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಟ್ಯಾಂಕರ್‌ನಲ್ಲಿದ್ದ ನೀರನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ.

ಈ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ 41ಮಕ್ಕಳು ಓದುತ್ತಾರೆ. ಹೊರಗಿನವರು ಬಂದು ಶಾಲೆಯ ನೀರಿನ ಟ್ಯಾಂಕ್​ನಲ್ಲಿ ವಿಷ ಹಾಕುವುದು ತುಂಬಾ ಕಷ್ಟ ಎಂದು ಪೊಲೀಸರು ಅರಿತು, ನಂತರ ಶಿಕ್ಷಕರಿಗೆ ಮಕ್ಕಳನ್ನು ವಿಚಾರಣೆ ನಡೆಸಿ ಎಂದು ಸೂಚನೆ ನೀಡಿದ್ದಾರೆ. ಪೊಲೀಸರ ಸೂಚನೆ ಮೇರೆಗೆ ಶಿಕ್ಷಕರು ಮಕ್ಕಳ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಒಬ್ಬ ಬಾಲಕ ಮುಂದೆ ಬಂದು ಅಂದು ನಾನು ಟ್ಯಾಂಕ್​ ಒಳಗೆ ಜ್ಯೂಸ್ ಹಾಕಿದ್ದೆ ಎಂದು ಹೇಳಿದ್ದಾನೆ.

Leave a Comment