ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi) ಯೋಜನೆಯಿಂದ ಮನೆಯ ಯಜಮಾನಿಗೆ ಪ್ರತೀ ತಿಂಗಳು ₹2,000/- ರೂಪಾಯಿ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ ಇನ್ನು ಅನೇಕ ಫಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ(Gruhalakshmi) ಹಣ ಜಮೆಯಾಗಿಲ್ಲ.

Gruhalakshmi : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi) ಯೋಜನೆಯಿಂದ ಮನೆಯ ಯಜಮಾನಿಗೆ ಪ್ರತೀ ತಿಂಗಳು ₹2,000/- ರೂಪಾಯಿ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ ಇನ್ನು ಅನೇಕ ಫಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ(Gruhalakshmi) ಹಣ ಜಮೆಯಾಗಿಲ್ಲ. ಇದುವರೆಗೂ ಸುಮಾರು 9.44 ಲಕ್ಷ ಫಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಿಲ್ಲ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮ ಪ್ರಕಟಣೆ ಮೂಲಕ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಕೂಡ ಓದಿ : BPL AAY APL : ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್.!
ಕಳೆದ ಆಗಸ್ಟ್ ತಿಂಗಳಿನಲ್ಲಿ ಈ ಗೃಹಲಕ್ಷ್ಮಿ(Gruhalakshmi) ಯೋಜನೆಗೆ 1.08 ಕೋಟಿ ಫಲಾನುಭವಿ ಮಹಿಳೆಯರು ಅರ್ಜಿಯನ್ನ ಸಲ್ಲಿಸಿದ್ದರು. ಗೃಹಲಕ್ಷ್ಮಿ ಯೋಜನೆಗಾಗಿ ಸರ್ಕಾರವು 2,169 ಕೋಟಿ ಹಣವನ್ನ 1.08 ಕೋಟಿ ಅರ್ಜಿದಾರರಿಗೆ ಬಿಡುಗಡೆ ಮಾಡಲಾಗಿತ್ತು. ಈ ಪೈಕಿ 1.08 ಕೋಟಿ ಫಲಾನುಭವಿಗಳಲ್ಲಿ 93 ಲಕ್ಷ ಫಲಾನುಭವಿ ಮಹಿಳೆಯರಿಗೆ ಇದುವರೆಗೆ ಹಣ ಜಮೆಯಾಗಿದೆ. ಇನ್ನು 5.5 ಲಕ್ಷ ಮಹಿಳೆಯರಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಚಾಲ್ತಿಯಲ್ಲಿದೆಯಂತೆ. ಬಾಕಿ 9.44 ಲಕ್ಷ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ(Gruhalakshmi) ಹಣ ಇನ್ನೂ ಜಮೆ ಆಗಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Ration Card Apply : ಒಂದೇ ಮನೆಯಲ್ಲಿರುವ, ಆದರೆ ಬೇರೆ ಬೇರೆ ಪಡಿತರ ಚೀಟಿ ಹೊಂದಿರುವ ಅತ್ತೆ ಹಾಗು ಸೊಸೆಗೆ ಇದೀಗ ಸರ್ಕಾರದಿಂದ ಹೊಸ ನಿಯಮ ಜಾರಿಗೆ
ಗೃಹಲಕ್ಷ್ಮಿ ಹಣ ಇನ್ನೂ ಯಾಕೆ ಜಮಾ ಆಗಿಲ್ಲ.?
ಇನ್ನೂ ಗೃಹಲಕ್ಷ್ಮಿ(Gruhalakshmi) ಹಣ ಬಾರದಿರುವ 9.44 ಲಕ್ಷ ಅರ್ಜಿದಾರರಲ್ಲಿ 3,082 ಮಹಿಳಾ ಅರ್ಜಿದಾರರು ಮರಣ ಹೊಂದಿದ್ದು, ಅವರನ್ನು ಗೃಹಲಕ್ಷ್ಮಿ ಯೋಜನೆಯಿಂದ ಅನರ್ಹಗೊಳಿಸಲಾಗಿದೆ. 1.59 ಲಕ್ಷ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆಯಂತೆ. 5.96 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಇನ್ನೂ ಜೋಡಣೆಯಾಗಿಲ್ಲ. 1.75 ಲಕ್ಷ ಫಲಾನುಭವಿಗಳ ಹೆಸರು ಹಾಗು ವಿಳಾಸದಲ್ಲಿ ವ್ಯತ್ಯಾಸ ಕಂಡು ಬಂದಿದೆಯಂತೆ. ಬಾಕಿ 9,766 ಅರ್ಜಿಯನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಇದೆ ಸಪ್ಟೆಂಬರ್ ತಿಂಗಳಿನಲ್ಲಿ 1.14 ಕೋಟಿಯಷ್ಟು ಗೃಹಲಕ್ಷ್ಮಿ(Gruhalakshmi) ಯೋಜನೆಯ ಫಲಾನುಭವಿಗಳಿದ್ದಾರೆ. ಸುಮಾರು 2,280 ಕೋಟಿ ಹಣವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ ಸರ್ಕಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..