Ration Supply : ಇನ್ನು ಮುಂದೆ ಮನೆ ಬಾಗಿಲಿಗೆ ಪಡಿತರ ಪೂರೈಕೆ.? / ರೇಷನ್ ಕಾರ್ಡ್ ಇದ್ದವರ ಗಮನಕ್ಕೆ

Ration Supply : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ ಸಿಹಿಸುದ್ಧಿ. ಮನೆ ಬಾಗಿಲಿಗೆ ಪಡಿತರ. 75 ವರ್ಷ ದಾಟಿದವರ ಮನೆ ಬಾಗಿಲಿಗೆ ಅನ್ನಭಾಗ್ಯ ಯೋಜನೆಯ ಅಡಿ ಪಡಿತರ ತಲುಪಿಸಲು ಆಹಾರ ಇಲಾಖೆ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಡಿತರ ವಿತರಣೆಯಲ್ಲಿ ಹಿರಿಯ ನಾಗರಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಆಹಾರ ಇಲಾಖೆ ಈ ಕ್ರಮ ಕೈಗೊಂಡಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಅಜ್ಜ-ಅಜ್ಜಿಯರು ಇನ್ನು ಪೆನ್ಷನ್ ಬಂದಿಲ್ಲ ಅಂದರೆ ಈ ಕೆಲಸವನ್ನ ಕಡ್ಡಾಯವಾಗಿ ಮಾಡಿಕೊಳ್ಳಬೇಕು.

ನ್ಯಾಯಬೆಲೆ ಅಂಗಡಿಗಳಿಗೆ ಹೋಗುವ ಮೊದಲು ಮನೆ ಬಾಗಿಲಲ್ಲೇ ಪಡಿತರ ನೀಡಲು ಹಿರಿಯ ನಾಗರಿಕರಿಗೆ ಸ್ನೇಹಿನೀತಿಯನ್ನ ಆಹಾರ ಇಲಾಖೆ ಜಾರಿಗೊಳಿಸಲು ಮುಂದಾಗಿದೆ. ಪಡಿತರ ಚೀಟಿ ಹೊಂದಿರುವ ಕುಟುಂಬದ ಸದಸ್ಯರೊಬ್ಬರು ನ್ಯಾಯಬೆಲೆ ಅಂಗಡಿಗೆ ಹೋಗಿ ಬಯೋಮೆಟ್ರಿಕ್ ನೀಡಿದ ನಂತರ ತಮ್ಮ ಕುಟುಂಬಕ್ಕೆ ನಿಗದಿ ಪಡಿಸಿದ ಅಕ್ಕಿ ಸೇರಿ, ಪಡಿತರ ಪಡೆದುಕೊಳ್ಳಬೇಕಿದೆ. ಹಿರಿಯರು ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಹೋಗಲು ತೊಂದರೆ ಅನುಭವಿಸುವ ಹಿನ್ನೆಲೆಯಲ್ಲಿ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಯೋಜನೆ ರೂಪಿಸಲಾಗಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಬಂದಿಲ್ವಾ.? 2 ನೇಯ ಕಂತಿನ ಹಣ ಬಿಡುಗಡೆಗೆ ಕ್ಷಣಗಣನೆ.!

ಪಡಿತರ ಚೀಟಿಯಲ್ಲಿ ನಮೂದಿಸಿದಂತೆ 75 ವರ್ಷದ ಒಳಗಿನ ಸದಸ್ಯರು, 75 ವರ್ಷ ದಾಟಿದ ವೃದ್ಧ ದಂಪತಿಗಳಿಗೆ ಮನೆ ಬಾಗಿಲಿಗೆ ಪಡಿತರ ಪೊರೈಸಲಾಗುವುದು. ಪಡಿತರ ಚೀಟಿಯಲ್ಲಿ 75 ವರ್ಷದೊಳಗಿನ ಸದಸ್ಯರ ಹೆಸರು ನಮೂದಿಸಲಾಗಿದ್ದರೂ ಅವರ ಕೆಲಸ ಕಾರ್ಯಗಳ ನಿಮಿತ್ತ ವಲಸೆ ಹೋಗಿದ್ದಲ್ಲಿ, ಅಂತಹ ಕುಟುಂಬಗಳ ವೃದ್ದರು ಮನವಿ ಮಾಡಿದ್ದಲ್ಲಿ ಅವರ ಮನೆ ಬಾಗಿಲಿಗೂ ಪಡಿತರ ತಲುಪಿಸಲಾಗುವುದು ಎಂದು ಹೇಳಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply