Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ – ಬರಪರಿಹಾರ 2ನೇ ಕಂತಿನ ಹಣ ಬಿಡುಗಡೆ

Drought Relief : ಕರ್ನಾಟಕದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್ ಈಗಾಗಲೇ ರಾಜ್ಯ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ ಹಣ ₹2000 ಮಾತ್ರ ರಾಜ್ಯ ಸರ್ಕಾರದಿಂದ ಹಾಕಲಾಗಿತ್ತು. ಆದರೆ ಮತ್ತೊಮ್ಮೆ ರಾಜ್ಯ ಸರ್ಕಾರದಿಂದ 628 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯದ ಬರ ಪೀಡಿತ ಜಿಲ್ಲೆಗಳ ಎಲ್ಲ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದಿಂದ ಎಲ್ಲ ಬರ ಪೀಡಿತ ರೈತರಿಗೆ ಗುಡ್ ನ್ಯೂಸ್ ನೀಡಿದೆ.

ಬರ ಪೀಡಿತ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಬರುವ ರೈತರು ರಾಜ್ಯ ಸರ್ಕಾರದಿಂದ ಎರಡನೇ ಕಂತಿನ ಬರ ಪರಿಹಾರ ಹಣವನ್ನ ಪಡೆದುಕೊಳ್ಳಬಹುದಾಗಿದೆ. ಇನ್ನು ಕೂಡ ನಿಮ್ಮ ಖಾತೆಗೆ ಎರಡನೇ ಕಂತಿನ ರಾಜ್ಯ ಸರ್ಕಾರದ ಹಣ ವರ್ಗಾವಣೆ ಆಗಿಲ್ಲ ಅಂದ್ರೆ ತಪ್ಪದೆ ಈ ಲೇಖನವನ್ನ ಕೊನೆವರೆಗೂ ನೋಡಿ.

ಇದನ್ನೂ ಕೂಡ ಓದಿ : Pan Card : ನಿಮ್ಮ ಪ್ಯಾನ್ ಕಾರ್ಡ್ ಕ್ಯಾನ್ಸಲ್ ಆಗುತ್ತೆ – ಬೇಗ ಈ ಕೆಲಸವನ್ನು ಮಾಡಿ..!

ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿತು. 628 ಕೋಟಿ ರೂಪಾಯಿ ಹಣವನ್ನ ಬರ ಪರಿಹಾರವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ 2000 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಿತ್ತು. ಈಗಾಗಲೇ ರವಾನಿಸಲಾಗಿದೆ.

33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ. 1.5 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗೆ ಹಣ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ರಾಜ್ಯದ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ಗಳ ಖಾತೆಯಿಂದ 870 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಕೂಡ ಓದಿ : BPL APL AAY : ರೇಷನ್ ಕಾರ್ಡ್ ವಿತರಣೆ – ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಆರಂಭ.!

ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ಅರ್ಹ ಫಲಾನುಭವಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ ಹೆಸರು ಸೇರ್ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಇಷ್ಟಕ್ಕೂ ನಿಮ್ಮ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರದಿಂದ ಹಣ ಇನ್ನು ಕೂಡ ಮೊದಲನೇ ಕಂತಿನ 2000 ಮತ್ತು ಎರಡನೇ ಕಂತಿನ ಹಣವು ಕೂಡ ಬಂದಿಲ್ಲ ಅಂದ್ರೆ ಈ ಕೂಡಲೇ ನಿಮ್ಮ ಆಧಾರ್ ಸಂಖ್ಯೆಯು ಯಾವ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿದೆ ಎಂದು ಪರಿಶೀಲಿಸಿಕೊಳ್ಳಿ. ಇಲ್ಲವಾದರೆ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ನ ಲಿಂಕ್ ಮಾಡಿಸಿಕೊಳ್ಳಿ ಹಾಗೂ ಇ ಕೆವೈಸಿ ಮಾಡಿಸಿಕೊಳ್ಳಿ. ಮುಂದಿನ ಮೂರು ಕೆಲಸದ ದಿನಗಳಲ್ಲಿ ಹಣ ವರ್ಗಾವಣೆಯಾಗುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply