Drought Relief Payment : ಅರ್ಹ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣ ಜಮಾ – ನೀವು ಲಿಸ್ಟ್ ಚೆಕ್ ಮಾಡಿಕೊಳ್ಳಿ

Drought Relief Payment : ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮೆ ಆಗಿದೆ. ಯಾವ ಯಾವ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ.? ಎಷ್ಟು ಜಮೆ ಆಗಿದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.,

ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಕಳೆದ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರದ ಹಣ ಕೈಸೇರಲಿದೆ. ಕೇಂದ್ರದಿಂದ ಬಂದಿರುವ ₹3,454 ಇನ್ ಪುಟ್ ಸಬ್ಸಿಡಿಗೆ ಪೂರ್ಣ ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ರೈತರಿಗೆ ನೀಡಿರುವ ಗರಿಷ್ಟ ₹2,000 ರೂಪಾಯಿ ಪರಿಹಾರ ಮೊತ್ತವನ್ನ ಕಡಿತ ಮಾಡಿಕೊಂಡು ಬಾಕಿ ಮೊತ್ತವನ್ನ ಡಿಬಿಟಿ ಮೂಲಕ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.

ಇದನ್ನೂ ಕೂಡ ಓದಿ : Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಎಸ್ ಡಿಆರ್ ಎಫ್(SDRF) ಮಾರ್ಗಸೂಚಿಯಂತೆ ಖುಷ್ಕಿ, ನೀರಾವರಿ, ತೋಟಗಾರಿಕಾ ಬೆಳೆಗಳಿಗೆ ನಿಗದಿಯಾಗಿರುವ ಮೊತ್ತವನ್ನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಶುಕ್ರವಾರ ಮೊದಲಿಗೆ ೧೫ ಲಕ್ಷ ರೈತರಿಗೆ ಜಮಾ ಮಾಡುವ ಪ್ರಕ್ರಿಯೆ ನಡೆದಿದೆ. ಉಳಿದ ರೈತರಿಗೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪರಿಹಾರದ ಹಣ ತಲುಪಲಿದೆ ಎಂದು ಕಂದಾಯ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಬಂದಿದೆ.

ರಾಜ್ಯದಲ್ಲಿ ಎರಡನೇ ಹಂತದ ಚುನಾವಣಾ ವೇಳೆಗೆ ಬಹುತೇಕ ರೈತರಿಗೆ ಬೆಳೆ ನಷ್ಟ ಪರಿಹಾರ ತಲುಪುವಂತೆ ವ್ಯವಸ್ಥೆ ಮಾಡಲಾಗಿತ್ತು. ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಲಿದೆ ಎನ್ನುವುದನ್ನ ತಿಳಿಯೋಣ.

ಇದನ್ನೂ ಕೂಡ ಓದಿ : Bara Parihara : ಯಾವ ಜಿಲ್ಲೆಗೆ ಬರ ಪರಿಹಾರದ ಹಣ ಜಮಾ – ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ತಿಳಿಯೋಣ

  • ಮಳೆಯಾಶ್ರಿತ ಬೆಳೆಗೆ – ₹8,500/-
  • ನೀರಾವರಿ ಬೆಳೆಗಳಿಗೆ – 17,000/-
  • ಬಹುವಾರ್ಷಿಕ ಬೆಳೆಗಳಿಗೆ – ₹22,500/-

ಬರ ಪರಿಹಾರ ಮೊತ್ತ ಚೆಕ್ ಮಾಡಿಕೊಳ್ಳಿ :- ಪರಿಹಾರ ಹಣ ಸಂದಾಯ ವರದಿ (Parihara Payment Report)

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply