Drought Relief : ಬರಪೀಡಿತ ರೈತರಿಗೆ 2ನೇ ಕಂತಿನ ಹಣ ಬಿಡುಗಡೆ – NDRF ಮತ್ತು SDRF ವರದಿ ₹22,500 ಹಣ

Drought Relief : ಸಿಎಂ ಸಿದ್ದರಾಮಯ್ಯನವರು ರಾಜ್ಯದ 223 ತಾಲೂಕುಗಳು ಸೇರಿದಂತೆ ಮತ್ತೆ ಇನ್ನಿತರ ತಾಲೂಕುಗಳು ಕೂಡ ಬರಪೀಡಿತ ತಾಲೂಕು ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್(NDRF) ತಂಡವು ಕೂಡ ಬರ ಪರಿಸ್ಥಿತಿಯನ್ನು ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಈಗಾಗಲೇ ಸಲ್ಲಿಸಲಾಗಿತ್ತು. ರಾಜ್ಯ ಸರ್ಕಾರವು ಕೂಡ ಈಗಾಗಲೇ ಬರ ಪೀಡಿತ ತಾಲೂಕುಗಳು ಮತ್ತು ಜಿಲ್ಲೆಗಳು ಎಂದು ಘೋಷಿಸಲಾಗಿದೆ.

ಕೇಂದ್ರದಿಂದ ಎನ್‌ಡಿಆರ್‌ಎಫ್(NDRF) ತಂಡವು ಸಹ ರಾಜ್ಯದಲ್ಲಿ ಬರ ಪೀಡಿತ ತಾಲೂಕುಗಳಲ್ಲಿಯೂ ಕೂಡ ಸಂಚರಿಸಿ ಎಷ್ಟು ಪ್ರಮಾಣದ ಬೆಳೆ ಹಾನಿ ಉಂಟಾಗಿದೆ.? ಎಷ್ಟು ಬರ ಪರಿಸ್ಥಿತಿ ಎದುರಾಗಿದೆ.? ಎನ್ನುವ ಸಂಪೂರ್ಣ ಮಾಹಿತಿಯನ್ನ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಈಗಾಗಲೇ ಸಲ್ಲಿಸಲಾಗಿತ್ತು. ಅದಕ್ಕೆ ತಕ್ಕಂತೆ ಪ್ರತಿ ಹೆಕ್ಟೇರ್ ಜಮೀನಿಗೆ ₹22,500 ಹಣವನ್ನ ಬಿಡುಗಡೆ ಗೊಳಿಸಬೇಕೆಂದು ವರದಿಯಲ್ಲಿಯೂ ಕೂಡ ಈಗಾಗಲೇ ತಿಳಿಸಲಾಗಿದೆ. ಇದಕ್ಕೆ ತಕ್ಕಂತೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ರೈತರ ಖಾತೆಗಳಿಗೆ ಎಸ್‌ಡಿಆರ್‌ಎಫ್(SDRF) ವರದಿಯಂತೆ ಮೂರು ಕಂತುಗಳಲ್ಲಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಕ್ರಮ ತೆಗೆದುಕೊಳ್ಳಲಾಗಿತ್ತು.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : Actor Darshan : ಹುಟ್ಟುಹಬ್ಬಕ್ಕೆ ಡಿಬಾಸ್ ದರ್ಶನ್ ಮಾಡಿದ ಮನವಿ ಏನು ಗೊತ್ತಾ.?

ರಾಜ್ಯ ಸರ್ಕಾರದಿಂದ ಈಗಾಗಲೇ ರೈತರ ಖಾತೆಗಳಿಗೆ ಮೊದಲನೇ ಕಂತಿನ ಹಣವನ್ನಾಗಿ ₹2000 ಜಮಾ ಆಗಿದೆ. ಕೇಂದ್ರ ಸರ್ಕಾರವು ಇನ್ನು ಕೂಡ ಎನ್‌ಡಿಆರ್‌ಎಫ್(NDRF) ವರದಿಯಂತೆ ರಾಜ್ಯ ಸರ್ಕಾರಕ್ಕೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಈ ಕುರಿತು ರೈತರಿಗೆ ತುಂಬಾ ಅನ್ಯಾಯ ಉಂಟಾಗುತ್ತಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯದ ರೈತರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನ ಜಮಾ ಮಾಡಿದೆ. 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನ ಜಮಾ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : ಸಂಪ್ರದಾಯದಡಿ ಹೆಣ್ಣಿನ ಜನನಾಂಗಕ್ಕೆ ಕತ್ತರಿ – ಜೀವನಶೈಲಿ

ರಾಜ್ಯಕ್ಕೆ ಬರಗಾಲ ಬಂದರು ಕೇಂದ್ರದಿಂದ ನಮ್ಮ ಪಾಲಿನ ನಯಾಪೈಸೆ ಪರಿಹಾರದ ಹಣ ಇದುವರೆಗೂ ಬಂದಿಲ್ಲ. ಆದರೆ ರಾಜ್ಯ ಸರ್ಕಾರ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನ ಜಮಾ ಮಾಡಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನ ವಿರೋಧಿಸಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನ ಎಸಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್‌ಡಿಆರ್‌ಎಫ್(NDRF) ನಿಂದ ₹4,663 ಕೋಟಿ ಮೊತ್ತವನ್ನು ನೀಡಲು ಮನವಿ ಸಲ್ಲಿಸಿ ನಾಲ್ಕು ತಿಂಗಳು ಕಳೆದಿದ್ದರೂ, ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ. ಈ ಎಲ್ಲಾ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದ್ದು, ನಾನು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now

Leave a Reply