ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಯ್ಕೆ

ಬೆಂಗಳೂರು : ಜಾತ್ಯತೀತ ಜನತಾದಳದ(ಜೆಡಿಎಸ್) ಶಾಸಕಾಂಗ ಪಕ್ಷದ ಮುಂದಿನ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಕಛೇರಿಯಲ್ಲಿ ಹಂಗಾಮಿ ಸ್ಪೀಕರ್ ಆಗಿರುವ ಮಾಜಿ ಸಚಿವ ಆರ್ ವಿ ದೇಶಪಾಂಡೆ ಅವರಿಂದ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಡೆದ ಜಾತ್ಯತೀತ ಜನತಾದಳ(ಜೆಡಿಎಸ್) ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಇದನ್ನು ಕೂಡ ಓದಿ : Breaking News : ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ / ಸಿಎಂ ಸಿದ್ದರಾಮಯ್ಯರಿಂದ ಭರ್ಜರಿ ಗಿಫ್ಟ್

ಜೆಡಿಎಸ್ ಸಭೆಯಲ್ಲಿ ಕುಮಾರಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಪಕ್ಷದ ಎಲ್ಲಾ 19 ನೂತನ ಶಾಸಕರು ಸಭೆಯಲ್ಲಿ ಇಂದು ಭಾಗವಹಿಸಿದ್ದರು. ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಜನಪರ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸೋತಿದೆಯೆಂದು ಎದೆಗುಂದದೆ, ತಳಮಟ್ಟದಲ್ಲಿ ಪಕ್ಷವನ್ನ ಸಂಘಟಿಸಿ ಕಾರ್ಯಕರ್ತರಿಗೆ ಪ್ರೋತ್ಸಾಹಿಸಬೇಕು ಎಂದು ನೂತನ ಚುನಾಯಿತ ಜೆಡಿಎಸ್ ಶಾಸಕರಿಗೆ ಎಚ್ ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply