Free Bus Scheme : ಉಚಿತ ಬಸ್ ಪ್ರಯಾಣ ಬಂದ್ ಮಾಡುತ್ತಾ ಸರ್ಕಾರ.? ಪ್ರತಿಭಟನೆಯ ಉದ್ದೇಶವೇನು ಗೊತ್ತಾ.?

Free Bus Scheme : ನಮಸ್ಕಾರ ಸ್ನೇಹಿತರೇ, ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ್ದ ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಕರ್ನಾಟಕ ಖಾಸಗಿ ಸಂಘಟನೆಗಳು ಮತ್ತೆ ಸಿಡಿದೆದ್ದಿದ್ದು, ಆಗಸ್ಟ್ ೧೯ ರಂದು ರಾಜ್ಯಾದ್ಯಂತ ಖಾಸಗಿ ಬಸ್, ಆಟೋ ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿವೆ. ಖಾಸಗಿ ಬಸ್, ಆಟೋ, ಟ್ಯಾಕ್ಸಿ ಚಾಲಕರಿಗೆ ಇದುವರೆಗೂ ರಾಜ್ಯ ಸರ್ಕಾರ ಯಾವುದೇ ಪರಿಹಾರ ನೀಡದಿರುವ ಹಿನ್ನೆಲೆಯಲ್ಲಿ ಸಂಘಟನೆಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ.

Whatsapp Group Join
Telegram channel Join

ಅಂದು ಆಟೋ, ಖಾಸಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಆಟೋ, ರಿಕ್ಷಾ ಸೇರಿ, ಸಾರ್ವಜನಿಕ ಸೇವೆಯ ಖಾಸಗಿ ವಾಹನ ಚಾಲಕರಿಗೆ ಮಾಸಿಕ ೧೦,೦೦೦/- ರೂಪಾಯಿ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು.

ಇದನ್ನೂ ಕೂಡ ಓದಿ : PM Kisan Scheme : ಎಲ್ಲಾ ವರ್ಗದ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ಅಡಿ ಉಚಿತ ಟ್ರಾಕ್ಟರ್.!

Whatsapp Group Join
Telegram channel Join

ಖಾಸಗಿ ಬಸ್, ಕ್ಯಾಬ್, ರಿಕ್ಷಾ ಚಾಲಕರಿಗೆ ಪರಿಹಾರ ಘೋಷಣೆ

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ನಷ್ಟಕ್ಕೆ ಒಳಗಾದ ಖಾಸಗಿ ಬಸ್, ಕ್ಯಾಬ್, ರಿಕ್ಷಾ ಚಾಲಕರಿಗೆ ಪರಿಹಾರ ಘೋಷಣೆ ಮಾಡುವ ಸಾಧ್ಯತೆಯಿದೆ. ಖಾಸಗಿ ಸಾರಿಗೆ ಉದ್ಯಮ ವಿವಿಧ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರ್ಕಾರದಿಂದ ಇದಕ್ಕಾಗಿ ಕೈಗೊಳ್ಳಬೇಕಿರುವ ಪರಿಹಾರ ಕ್ರಮಗಳು ಮತ್ತು ಸಾರಿಗೆ ಉದ್ಯಮದ ನಷ್ಟದ ಬಗ್ಗೆ ವರದಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದು, ವರದಿ ಆಧರಿಸಿ ಪರಿಹಾರ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಕೂಡ ಓದಿ : Farmer Scheme : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! // ಉಚಿತ ಕೃಷಿ ಯಂತ್ರೋಪಕರಣಗಳು, ಕೊಳವೆ ಬಾವಿ, ಉಚಿತ ಪಂಪ್ ಸೆಟ್

ಕೊರೋನಾ ಸೇರಿ ವಿವಿಧ ಕಾರಣಗಳಿಂದ ಮೂರ್ನಾಲ್ಕು ವರ್ಷಗಳಿಂದ ಸಾರೋಯಿಜ್ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರದ ಶಕ್ತಿ ಯೋಜನೆಯ ಉಚಿತ ಪ್ರಯಾಣದಿಂದ ಸಮಸ್ಯೆ ಹೆಚ್ಚಾಗಿದೆ. ಖಾಸಗಿ ಬಸ್, ಕ್ಯಾಬ್ ಆಟೋಗಳಿಗೆ ಪ್ರಯಾಣಿಕರ ತೀವ್ರ ಕೊರತೆ ಎದುರಾಗಿ ನಷ್ಟಕ್ಕೊಳಗಾಗಿದೆ. ಹೀಗಾಗಿ ಪರಿಹಾರ ಕೊಡಬೇಕೆಂದು ಸಂಘಟನೆಗಳು ಹೋರಾಟ ನಡೆಸಿದ್ದವು. ಸಾರಿಗೆ ಸಚಿವರು ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದು, ಸಿಎಂ ಜೊತೆ ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಹಾರ ಕ್ರಮಗಳ ಕುರಿತು ಸಾರಿಗೆ ಇಲಾಖೆಗೆ ವರದಿ ನೀಡಲು ಸಿಎಂ ಸೂಚಿಸಿದ್ದಾರೆ. ವರದಿ ಆಧರಿಸಿ ಪರಿಹಾರ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..