Free Current Scheme : ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ.! ಎಲ್ಲರಿಗು ಉಚಿತ ವಿದ್ಯುತ್!

Free Current Scheme : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರಿಗೆ 200ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹ ಜ್ಯೋತಿ ಯೋಜನೆಯ ನೋಂದಣಿಯೂ ಸೇವಾ ಸಿಂಧು ಪೋರ್ಟಲ್ ನಲ್ಲಿ ಭಾನುವಾರ ಜೂನ್ 18 ರಂದು ಆರಂಭಗೊಂಡಿದ್ದು, ಭಾನುವಾರ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55,000 ಸಾವಿರ ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್, ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭಗೊಂಡಿದ್ದು, ಯೋಜನೆಗೆ ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಮಾಡಲಾಯಿತು.

Whatsapp Group Join
Telegram channel Join

ಇದನ್ನೂ ಕೂಡ ಓದಿ : Free Ration : ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ – ಅಂತ್ಯೋದಯ ಕಾರ್ಡ್ ಇದ್ದವರಿಗೆ ಬಂಪರ್.!

ನೋಂದಣಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದೆ. ಆಡಳಿತ ಇಲಾಖೆ ನೋಂದಣಿ ಪ್ರಕ್ರಿಯೆಯನ್ನ ಸರಳೀಕರಣಗೊಳಿಸಿದ್ದು, ಗ್ರಾಹಕರು ವಿದ್ಯುತ್ ಬಿಲ್ ನಲ್ಲಿರುವ ಖಾತೆ ಸಂಖ್ಯೆ, ತಮ್ಮ ಆಧಾರ್ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನ ನಮೂದಿಸಿ ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಭಾನುವಾರ ರಜಾ ದಿನವಾದರೂ ಎಲ್ಲಾ ಎಸ್ಕಾಂ ಗಳ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ಯೋಜನೆ ನೋಂದಣಿಯ ಮೇಲುಸ್ತುವಾರಿ ವಹಿಸಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಂಡರು.

Whatsapp Group Join
Telegram channel Join

ಗ್ರಾಹಕರು ಯೋಜನೆ ನೋಂದಣಿಗೆ ಯಾವುದೇ ದಾಖಲೆಗಳನ್ನ ಸಲ್ಲಿಸಬೇಕಾಗಿಲ್ಲ ಎಂದು ಇಂಧನ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಗ್ರಾಹಕರು ಮೊಬೈಲ್, ಲ್ಯಾಪ್ ಟಾಪ್ ಅಥವಾ ಸೈಬರ್ ಸೆಂಟರ್ ಗಳಿಗೆ ಹೋಗಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಈ ಯೋಜನೆ ಕುರಿತು ಮಾಹಿತಿಗಾಗಿ ನಿಮ್ಮ ಸಮೀಪದ ವಿದ್ಯುತ್ ಕಚೇರಿಯನ್ನ ಸಂಪರ್ಕಿಸಿ. ಇಲ್ಲವೇ 24/7 ಸಹಾಯವಾಣಿ ಸಂಖ್ಯೆ 1912 ಗೆ ಕರೆ ಮಾಡಿ ಮನವಿ ಮಾಡಿಕೊಳ್ಳಬಹುದು.

ನೋಂದಣಿ ಮಾಡುವುದು ಹೇಗೆ.?

ರಾಜ್ಯ ಸರ್ಕಾರದ ಸೇವಾಸಿಂಧು ವೆಬ್ ಸೈಟ್, ಆಪ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸರ್ಕಾರ ನೀಡಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಸುಲಭವಾಗಿ ನೋಂದಣಿ ಮಾಡಬಹುದು. ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ನಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ನಾಡ ಕಚೇರಿ, ಇಂಧನ ಇಲಾಖೆ ಕಚೇರಿಗಳಲ್ಲಿ ಕೂಡ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಜನರು ಆಧಾರ್ ಸಂಖ್ಯೆ, ವಿದ್ಯುತ್ ಖಾತೆ ಸಂಖ್ಯೆ, ಹಾಗು ಮೊಬೈಲ್ ಸಂಖ್ಯೆಯನ್ನ ನೀಡಬೇಕಾಗುತ್ತದೆ.

ಇದನ್ನೂ ಕೂಡ ಓದಿ : Aadhar Card Update : ಈ ಕೆಲಸ ಮಾಡಿಲ್ಲಾಂದ್ರೆ ನಿಮ್ಮ ಆಧಾರ್ ಕಾರ್ಡ್ ಬಂದ್.! ದಂಡ ಕಟ್ಟಬೇಕಾ.?

ನೀವು ಬಾಡಿಗೆದಾರರಾಗಿದ್ದರೆ, ಮನೆ ವಾಸ ಕರಾರು ಪತ್ರ, ಆಧಾರ್ ಅಥವಾ ವೋಟರ್ ಐಡಿ ನೀಡಿ. ಅರ್ಜಿ ಸಲ್ಲಿಕೆ ಬಗ್ಗೆ ಗೊಂದಲವಿದ್ದರೆ 1912 ಸಹಾಯವಾಣಿಗೆ ಕರೆ ಮಾಡಬಹುದು. ನೋಂದಣಿ ಮಾಡುವಾಗ ಆಧಾರ್ ಸಂಖ್ಯೆ, ವಿದ್ಯುತ್ ಬಿಲ್ ನಲ್ಲಿ ನೀಡಲಾದ ವಿದ್ಯುತ್ ಖಾತೆ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನ ನಮೂದಿಸಬೇಕು. ಆಯ್ಕೆಗಳ ವೇಳೆ ಸ್ವಂತ ಮನೆ ಅಥವಾ ಬಾಡಿಗೆದಾರ ಎನ್ನುವ ಆಯ್ಕೆ ಬರುತ್ತದೆ. ಬಾಡಿಗೆದಾರರಾಗಿದ್ದಲ್ಲಿ ಬಾಡಿಗೆ ಮನೆ ವಾಸ ದೃಢೀಕರಿಸುವ ಆಧಾರ್ ಅಥವಾ ಮತದಾರರ ಗುರುತಿನ ಚೀಟಿ ವಿವರಗಳನ್ನ ನೀಡಬೇಕು. ಹಿಂದಿನ ವರ್ಷದ ಸರಾಸರಿ ಬಳಕೆಯ ಶೇಕಡಾ 10 ರಷ್ಟು ಹೆಚ್ಚುವರಿ ವಿದ್ಯುತ್ ಉಚಿತವಾಗಿ ಬಳಸಬಹುದು. ಗರಿಷ್ಟ ವಿದ್ಯುತ್ ಬಳಕೆ ಮಿತಿ 200 ಯೂನಿಟ್ ದಾಟಿದರೆ ಪೂರ್ಣ ಶುಲ್ಕ ಪಾವತಿಸಬೇಕು ಎಂದು ಇಂಧನ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಅರ್ಜಿ ಸ್ವೀಕಾರಕ್ಕೆ ಕೊನೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..