Free Current Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಇದೀಗ ಎಲ್ಲಾ ವಿದ್ಯುತ್ ಬಳಕೆದಾರರಿಗೆ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದ್ದು, ಹಾಗು ಯಾರು ಇದುವರೆಗೂ ಇನ್ನೂ ಕೂಡ ತಮ್ಮ ಮನೆಯಲ್ಲಿ ವಿದ್ಯುತ್ ಸಂಪರ್ಕವನ್ನ ಪಡೆದುಕೊಂಡಿಲ್ಲವೋ, ಅಂತಹವರಿಗೂ ಕೂಡ ಬಂಪರ್ ಗುಡ್ ನ್ಯೂಸ್ ನ್ನ ಇದೀಗ ವಿದ್ಯುತ್ ಸರಬರಾಜು ಕಂಪನಿಗಳು ನೀಡಿವೆ.
ಇದನ್ನೂ ಕೂಡ ಓದಿ : BPL APL AAY : ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಸಿಹಿಸುದ್ಧಿ // ಅಕ್ಕಿಯ ಜೊತೆಗೆ ಹಣ, ರಾಗಿ, ಜೋಳ, ಗೋಧಿ ವಿತರಣೆ.!
ಹೌದು, ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಉಚಿತ ವಿದ್ಯುತ್ ಯೋಜನೆ ಅಡಿಯಲ್ಲಿ ಇದೀಗ ಇನ್ನೂರು ಯೂನಿಟ್ ಉಚಿತ ವಿದ್ಯುತ್ ಗೃಹಜ್ಯೋತಿ ಯೋಜನೆಯನ್ನ ಈಗಾಗಲೇ ಈ ಪ್ರಸಕ್ತ ಜುಲೈ ತಿಂಗಳಿನಿಂದಲೇ ಜಾರಿಗೆಯಾಗಿದ್ದು, 12 ತಿಂಗಳ ಬಿಲ್ ಸರಾಸರಿ ಬಳಕೆ 200 ಯೂನಿಟ್ ಇದ್ದರೆ, ನಿಮಗೆ ಉಚಿತ ವಿದ್ಯುತ್ ಸಿಗಲಿದೆ. ಒಂದು ವೇಳೆ 200 ಯೂನಿಟ್ ಗಿಂತ ಹೆಚ್ಚು ಬಳಸಿದರೆ ಪೂರ್ತಿ ಬಿಲ್ ಬರಲಿದೆ ಎಂದು ವಿದ್ಯುತ್ ಸರಬರಾಜು ಕಂಪನಿಗಳು ಮಾಹಿತಿ ನೀಡಿದೆ.
ಇದನ್ನೂ ಕೂಡ ಓದಿ : Revenue Department : ಜಮೀನಿನ ಪಹಣಿಯಲ್ಲಿ ತಂದೆ, ತಾಯಿ, ಮುತ್ತಾತನ ಹೆಸರಿನಲ್ಲಿದ್ದರೆ / ದಾಖಲೆಗಳು ಇಲ್ಲದೆ ರೈತನ ಹೆಸರಿಗೆ ವರ್ಗಾವಣೆ
ಇನ್ನು ಇದುವರೆಗೂ ಯಾರೂ ತಮ್ಮ ಮನೆಯಲ್ಲಿ ವಿದ್ಯುತ್ ಸಂಪರ್ಕವನ್ನ ಹೊಂದಿಲ್ಲವೋ, ಅಂತಹವರು ಭಾಗ್ಯಜ್ಯೋತಿ, ಕುಟೀರಜ್ಯೋತಿ, ಹಾಗು ಅಮೃತಜ್ಯೋತಿ ಯೋಜನೆ ಅಡಿಯಲ್ಲಿ ಉಚಿತವಾಗಿ ತಮ್ಮ ಮನೆಯಲ್ಲಿ ವಿದ್ಯುತ್ ಸಂಪರ್ಕವನ್ನ ಪಡೆದುಕೊಳ್ಳಲು ಇದೀಗ ವಿದ್ಯುತ್ ಸರಬರಾಜು ಕಂಪನಿಗಳು ಎಲ್ಲಾ ಗ್ರಾಹಕರಿಗೆ ಅನುಕೂಲ ಮಾಡಿಕೊಟ್ಟಿದೆ. ತಮ್ಮ ಆಧಾರ್ ಕಾರ್ಡ್ ಹಾಗು ರೇಶನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿ ಸೇರಿದಂತೆ ಇತರೆ ದಾಖಲಾತಿಗಳನ್ನ ತೆಗೆದುಕೊಂಡು ನಿಮಗೆ ಸಂಬಂಧ ಪಡುವ ವಿದ್ಯುತ್ ಸರಬರಾಜು(KEB) ಘಟಕಕ್ಕೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್ ಸಂಪರ್ಕ ಪಡೆದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..