Free Ration : ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ – ಅಂತ್ಯೋದಯ ಕಾರ್ಡ್ ಇದ್ದವರಿಗೆ ಬಂಪರ್!

Free Ration : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದಾದ್ಯಂತ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಪ್ರತೀ ತಿಂಗಳು ರೇಷನ್ ಅಂಗಡಿಯಿಂದ ಆಹಾರ ಧಾನ್ಯ ಪಡೆಯುತ್ತಿರುವ ರಾಜ್ಯದ ಪ್ರತಿಯೊಂದು ಬಡ ಕುಟುಂಬಗಳಿಗೆ ನೂತನ ಸರ್ಕಾರದಿಂದ ಮತ್ತೊಂದು ಸಿಹಿಸುದ್ಧಿ. ನಿಮ್ಮ ಬಳಿ ಈಗಾಗಲೇ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ಇದ್ದರೆ ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ.

Whatsapp Group Join
Telegram channel Join

ರಾಜ್ಯದ ನೂತನ ಸರ್ಕಾರವು ಮತ್ತೆ ಬಡಕುಟುಂಬಗಳಿಗೆ ಭಾರೀ ದೊಡ್ಡ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡಿದ್ದು ರಾಜ್ಯದ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯನವರು ಅಧಿಕಾರದ ಚುಕ್ಕಾಣಿಯನ್ನ ಹಿಡಿದಿದ್ದು, ಪಡಿತರ ಚೀಟಿದಾರರಿಗೆ ರಾಜ್ಯ ಆಹಾರ ಇಲಾಖೆಯು ಭಾರೀ ದೊಡ್ಡ ಸಿಹಿ ಸುದ್ಧಿ ನೀಡಿದೆ. ರಾಜ್ಯದ ಆಹಾರ ಖಾತೆಯ ಸಚಿವರಾದ ಕೆ. ಎಚ್ ಮುನಿಯಪ್ಪ ಇನ್ನು ಮುಂದೆ ಪ್ರತೀ ತಿಂಗಳು ರೇಷನ್ ಅಂಗಡಿಯಿಂದ ಆಹಾರ ಧಾನ್ಯ ಪಡೆದುಕೊಳ್ಳುತ್ತಿರುವ ಪ್ರತೀ ಕುಟುಂಬಗಳಿಗೆ ನೂತನ ಸಚಿವರಿಂದ ಹಾಗು ಆಹಾರ ಇಲಾಖೆ ಹಾಗು ರಾಜ್ಯ ಸರ್ಕಾರದಿಂದ ಈ ಮಾಹಿತಿ ಹೊರಬಿದ್ದಿದೆ.

ಇದನ್ನೂ ಕೂಡ ಓದಿ : LPG Gas Scheme : ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಬಂಪರ್.! 500 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಲಭ್ಯ.!

Whatsapp Group Join
Telegram channel Join

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಆಹಾರ ಧಾನ್ಯ ವಿತರಣೆಯನ್ನ ಮಾಡಲಾಗುತ್ತಿದೆ. ಪ್ರತೀ ಅಂತ್ಯೋದಯ ಪಡಿತರ ಚೀಟಿಗೆ 35 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿಗೆ ಪ್ರತೀ ಸದಸ್ಯರಿಗೆ 6 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಅನುಗುಣವಾಗಿ ಹಂಚಿಕೆಯಾಗಿರುವ ಆಹಾರಧಾನ್ಯದ ಪ್ರಮಾಣವನ್ನ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವುದು. ಪಡಿತರ ಕಾರ್ಡ್ ದಾರರಿಗೆ ತಮಗೆ ಹಂಚಿಕೆಯಾದ ಪಡಿತರವನ್ನ ಜೂನ್ 20 ರೊಳಗೆ ಸಂಬಂದಿಸಿದ ನ್ಯಾಯಬೆಲೆ ಅಂಗಡಿಯಿಂದ ಪಡೆಯಬಹುದಾಗಿದೆ. ಆಹಾರಧಾನ್ಯ ಕಡಿಮೆ ಪ್ರಮಾಣದಲ್ಲಿ ನ್ಯಾಯಬೆಲೆ ಅಂಗಡಿದಾರರು ನೀಡಿದ್ದಲ್ಲಿ, ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡ ತಾಲೂಕಿನ ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : LPG Gas Price : ಎಲ್ ಪಿಜಿ ಗ್ಯಾಸ್ ಬೆಲೆ ಇಳಿಕೆಯತ್ತ.? ಜುಲೈ 1 ರಿಂದ ಪ್ರಾರಂಭ.!

೧೦ ಕೆಜಿ ಅನ್ನಭಾಗ್ಯದಲ್ಲಿ 8 ಕೆಜಿ ಅಕ್ಕಿ ಜೊತೆಗೆ 2 ಕೆಜಿ ರಾಗಿ ಅಥವಾ ಜೋಳ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ದಕ್ಷಿಣ ಕರ್ನಾಟಕದಲ್ಲಿ 8 ಕೆಜಿ ಅಕ್ಕಿ ಜೊತೆಗೆ 2 ಕೆಜಿ ರಾಗಿ ಹಾಗು ಉತ್ತರ ಕರ್ನಾಟಕದಲ್ಲಿ 2 ಕೆಜಿ ಜೋಳ ನೀಡುವ ಬಗ್ಗೆ ಚಿಂತನೆ ನಡೆದಿದೆ. ಯಾವುದೇ ಅಡಚಣೆ ಎದುರಾದರೂ ಕೂಡ ಅನ್ನಭಾಗ್ಯ ಯೋಜನೆ ಜಾರಿಗೆ ಬರುವುದನ್ನ ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ ಬಿಪಿಎಲ್ ಕುಟುಂಬದ ಪ್ರತೀ ಸದಸ್ಯರಿಗೂ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಸರ್ಕಾರ ಹೇಳಿದೆ. ಈ ಯೋಜನೆಯು ಜುಲೈ 1 ರಿಂದಲೇ ಜಾರಿಗೆ ಬರಲಿದ್ದು, ಯೋಜನೆಯಡಿ 10 ಕೆಜಿ ಅಕ್ಕಿ ನೀಡುವ ಬದಲು 8 ಕೆಜಿ ಅಕ್ಕಿ ಜೊತೆಗೆ 2 ಕೆಜಿ ರಾಗಿ ಅಥವಾ ಜೋಳ ನೀಡಲು ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..