BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಸಿಹಿಸುದ್ಧಿ.! / ಕಾಂಗ್ರೆಸ್ ಗ್ಯಾರಂಟಿ ಮಹಿಮೆ!

ನಮಸ್ಕಾರ ಸ್ನೇಹಿತರೆ, ಬಿಪಿಎಲ್, ಅಂತ್ಯೋದಯ, ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರಧಾನ್ಯ ವಿತರಿಸಲಾಗುವುದು. ಜುಲೈ 1 ರಿಂದ 10 ಕೆಜಿ ಆಹಾರಧಾನ್ಯ ನೀಡಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.

Whatsapp Group Join
Telegram channel Join

ಇದನ್ನೂ ಕೂಡ ಓದಿ : BPL APL AAY : ಬಿಪಿಎಲ್, ಎಪಿಎಲ್ ಹಾಗು ಅಂತ್ಯೋದಯ ರೇಷನ್ ಕಾರ್ಡ್ ಗೆ ಅಕ್ಕಿ, ಗೋಧಿ, ಸಕ್ಕರೆ, ಬೇಳೆ, ಸೀಮೆ ಎಣ್ಣೆ ವಿತರಣೆ.!

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೂರನೇಯ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದರು. ಸದ್ಯ ಎಲ್ಲರಿಗೂ 10 ಕೆಜಿ ಕೊಡುವಷ್ಟು ಸಂಗ್ರಹವಿಲ್ಲದ ಕಾರಣ ಜುಲೈ 1 ರಿಂದ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು. ಈ ಹಿಂದೆ ಇದ್ದ ಬಿಜೆಪಿ ಸರಕಾರ 7 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಕೊಡುತ್ತಿತ್ತು. ಚುನಾವಣಾ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ ಉಚಿತ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆಯನ್ನ ನೀಡಿದ್ದೆವು ಎಂದು ಹೇಳಿದರು. ಅದರಂತೆ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತೀ ಕುಟುಂಬಗಳಿಗೆ 10 ಕೆಜಿ ಆಹಾರಧಾನ್ಯವನ್ನು ಜುಲೈ ೧ ರಿಂದ ಒದಗಿಸಲಾಗುತ್ತಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : BPL APL AAY : ಬಿಪಿಎಲ್, ಎಪಿಎಲ್ ಹಾಗು ಅಂತ್ಯೋದಯ ರೇಷನ್ ಕಾರ್ಡ್ ಗೆ ಅಕ್ಕಿ, ಗೋಧಿ, ಸಕ್ಕರೆ, ಬೇಳೆ, ಸೀಮೆ ಎಣ್ಣೆ ವಿತರಣೆ.!

ಉಚಿತ ಅಕ್ಕಿಯಿಂದ 1400 ಕೋಟಿಯಷ್ಟು ಹೊರೆ ಸಾಧ್ಯತೆ. ಪ್ರತಿಯೊಬ್ಬರಿಗೂ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿವೆ. ಆದರೆ, ಅಕ್ಕಿ ಖರೀದಿಗೆ ಅಂದಾಜು 1400 ಕೋಟಿ ರೂಪಾಯಿಯಷ್ಟು ವ್ಯಯ ಮಾಡಬೇಕಾಗುತ್ತೆ. ಕೇಂದ್ರ ಸರ್ಕಾರ ಕೊಡುತ್ತಿರುವ 5 ಕೆಜಿ ಅಕ್ಕಿಗೆ ಏನಾದರೂ ಕಂಡೀಶನ್ ಹಾಕಿದ್ರೆ, ರಾಜ್ಯ ಸರ್ಕಾರಕ್ಕೆ ಸಮಸ್ಯೆ ಮತ್ತಷ್ಟು ಜಟಿಲವಾಗಬಹುದು. ಅಲ್ಲದೇ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಹೊರತಾಗಿ 10 ಕೆಜಿ ನೀಡುವಂತೆ ವಿಪಕ್ಷ ಪಟ್ಟು ಹಿಡಿದಿತ್ತು. ಬಿಪಿಎಲ್ ಕುಟುಂಬಗಳ ಮಾಹಿತಿ ಆದರಿಸಿ ಅಕ್ಕಿ ನೀಡಲು ಕಾಂಗ್ರೆಸ್ ಲೆಕ್ಕಾಚಾರ ಮಾಡುತ್ತಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply