ಗೃಹಲಕ್ಷ್ಮಿ 6ನೇ ಮತ್ತು 7ನೇ ಕಂತಿನ ಹಣಕ್ಕೆ – ಈ ದಾಖಲೆ ಸಲ್ಲಿಸುವುದು ಕಡ್ಡಾಯ – GruhaLakshmi 6th & 7th payment

GruhaLakshmi 6th & 7th payment : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ರಾತ್ರೋರಾತ್ರಿ ಮತ್ತೊಂದು ಹೊಸ ರೂಲ್ಸ್ ಜಾರಿ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಈ ಪ್ರಮಾಣ ಪತ್ರ ನೀಡುವುದು ಕಡ್ಡಾಯ. ಈಗಾಗಲೇ ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗಳಿಗೆ ಐದನೇ ಮತ್ತು ಆರನೇ ಕಂತಿನ ಹಣ ವರ್ಗಾವಣೆಯಾಗಿದೆ. ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳಿಗೆ ₹2000 ಹಣ ನೀಡಲಾಗುತ್ತಿದೆ.

ಕೆಲವು ತಾಂತ್ರಿಕ ತೊಂದರೆಗಳು ಹಾಗು ದೋಷಗಳಿಂದಾಗಿ ಇನ್ನು ಕೂಡ ಸಾಕಷ್ಟು ಅರ್ಹ ಫಲಾನುಭವಿಗಳ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿಲ್ಲ. ರಾಜ್ಯದ ಗೃಹಲಕ್ಷ್ಮಿ ಮಹಿಳಾ ಫಲಾನುಭವಿಗಳು ಕಡ್ಡಾಯವಾಗಿ ಈ ದೃಢೀಕರಣ ಪತ್ರ ನೀಡುವುದು ಅನಿವಾರ್ಯವಾಗಿದೆ. ಬನ್ನಿ ನೀವು ಕೂಡ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ರಿ ಅಥವಾ ನಿಮ್ಮ ಮನೆಯಲ್ಲಿ ತಾಯಿ ಅಥವಾ ತಂಗಿ ಅಥವಾ ಅಕ್ಕ ಹೀಗೆ ಯಾರಾದರೂ ಹಣ ಪಡೆದುಕೊಳ್ಳುತ್ತಿದ್ದರೆ ತಪ್ಪದೆ ಈ ಲೇಖನವನ್ನು ಕೊನೆವರೆಗೂ ನೋಡಿ.

ಇದನ್ನೂ ಕೂಡ ಓದಿ : ಇನ್ನು ಗೃಹಲಕ್ಷ್ಮಿ ಹಣ ಯಾರಿಗೆ ಬಂದಿಲ್ಲವೋ ಅಂತಹವರು ಹೀಗೆ ಮಾಡಿ – ₹2000 ಹಣ ಜಮಾ ಆಗುತ್ತೆ – ಮಹಿಳೆಯರಿಗೆ ಬಂಪರ್ ಗುಡ್ ನ್ಯೂಸ್.!

Gruhalakshmi Scheme
Gruhalakshmi Scheme

ಅರ್ಹ ಫಲಾನುಭವಿ ಗೃಹಲಕ್ಷ್ಮಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬರಬೇಕಾದರೆ ಈ ದಾಖಲೆ ಸಲ್ಲಿಸುವುದು ಕಡ್ಡಾಯ. ಅಂದ್ರೆ ಈ ದೃಢೀಕರಣ ಪತ್ರ ನೀಡುವುದು ಕಡ್ಡಾಯ. ಯಾವ ಧೃಢೀಕರಣ ಪತ್ರ ನೀಡಬೇಕು.? ಹೇಗೆ ಮತ್ತು ಎಲ್ಲಿ ಸಲ್ಲಿಸಬೇಕು.? ಇನ್ಮುಂದೆ ಬರುವ ಹಣ ನಿಲ್ಲುತ್ತದೆಯೇ.? ಅಥವಾ ಮುಂದೆ ಹಣ ಬರುವುದು ಬಂದ್ ಆಗುತ್ತಾ.? ಈ ದೃಢೀಕರಣ ಪ್ರಮಾಣ ಪತ್ರ ಸಲ್ಲಿಸಿದ ನಂತರ ನಮ್ಮ ಖಾತೆಗೆ ಯಾವಾಗಿನಿಂದ ಹಣ ಬರುತ್ತೆ.? ಮತ್ತು ಈ ದೃಢೀಕರಣ ಪತ್ರವು ಯಾರೆಲ್ಲಾ ಸಲ್ಲಿಸಬೇಕು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳಿ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನರಿಗೆ ₹2000 ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ಹಣ ಬಾರದಿರುವ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಹೌದು, ಹಲವು ಅರ್ಹ ಫಲಾನುಭವಿ ಗೃಹಲಕ್ಷ್ಮಿ ಮಹಿಳೆಯರ ಖಾತೆಗೆ ಇನ್ನು ಕೂಡ ಗೃಹಲಕ್ಷ್ಮಿಯ ಹಣ ಬಂದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದೊಂದಿಗೆ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಇದನ್ನೂ ಕೂಡ ಓದಿ : Drought Relief : ಬರಪೀಡಿತ ರೈತರಿಗೆ 2ನೇ ಕಂತಿನ ಹಣ ಬಿಡುಗಡೆ – NDRF ಮತ್ತು SDRF ವರದಿ ₹22,500 ಹಣ

ಗೃಹಲಕ್ಷ್ಮಿಯರಿಗೆ ಐಟಿ ಅಥವಾ ಜಿಎಸ್‌ಟಿ ವ್ಯಾಪ್ತಿಗೆ ಬರುವುದಿಲ್ಲ ಎಂದು ದೃಢೀಕರಣ ಪತ್ರ ನೀಡಲು ಸರ್ಕಾರ ನಿರ್ಧರಿಸಿದೆ. ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿದ್ದು, ವಾಸ್ತವವಾಗಿ ತೆರಿಗೆ ಪಾವತಿಸಿಸದಿದ್ದರೂ ಐಟಿ ಅಥವಾ ಜಿಎಸ್‌ಟಿ ತೆರಿಗೆದಾರರೆಂದು ಪೋರ್ಟಲ್ ನಲ್ಲಿ ತೋರಿಸುತ್ತಿತ್ತು. ಇದರಿಂದಾಗಿ ಯೋಜನೆಗೆ ಫಲಾನುಭವಿಗಳಾಗಲು ನೋಂದಣಿ ಮಾಡಿಸಿ ಆರು ತಿಂಗಳಾಗಿದ್ದರೂ ಬಹಳಷ್ಟು ಮಹಿಳೆಯರು ಸರ್ಕಾರದಿಂದ ಹಣ ಪಡೆಯಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಲಾಖೆ ಯಜಮಾನರಿಗೆ ಐಟಿ ಅಥವಾ ಜಿಎಸ್‌ಟಿ ವ್ಯಾಪ್ತಿಗೆ ಬರುವುದಿಲ್ಲ ಎಂದು ದೃಢೀಕರಣ ಪತ್ರ ನೀಡಲು ಸರ್ಕಾರ ನಿರ್ದೇಶಿಸಿದೆ.

ಅರ್ಹರು ಸಂಬಂಧಪಟ್ಟ ಐಟಿ ಅಥವಾ ಜಿಎಸ್ ಟಿ ಪ್ರಾಧಿಕಾರಗಳಿಂದ ತಾವು ತೆರಿಗೆ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಧೃಢೀಕರಣ ಪತ್ರ ಪಡೆದು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಸಲ್ಲಿಸಬೇಕು. ಈ ಕಚೇರಿಯವರು ತಮ್ಮ ತಾಲೂಕಿಗೆ ಸಂಬಂಧಪಟ್ಟ ಅರ್ಹರ ದಾಖಲೆಗಳನ್ನ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ತಲುಪಿಸಬೇಕಿದೆ. ನಂತರ ಜಿಲ್ಲಾ ಉಪನಿರ್ದೇಶಕರು, ತಮ್ಮ ಜಿಲ್ಲೆಯ ವ್ಯಾಪ್ತಿಯ ಪ್ರಕರಣಗಳ ಮಾಹಿತಿಯನ್ನ ಪ್ರದಾನ ಕಚೇರಿಗೆ ಸಲ್ಲಿಸಬೇಕು. ಇಲ್ಲಿಂದ ಈ-ಆಡಳಿತ ಇಲಾಖೆಯ ಕುಟುಂಬ ತಂತ್ರಾಂಶದ ವಿಭಾಗಕ್ಕೆ ರವಾನೆಯಾಗಲಿದ್ದು, ಅರ್ಜಿಗಳ ಪುನರ್ ಪರಿಶೀಲನೆ ನಡೆಯಲಿದೆ. ನಂತರ ಅರ್ಹರಿಗೆ ಯೋಜನೆಯ ಹಣ ಪಾವತಿಯಾಗಲಿದೆ ಎಂದು ಹೇಳಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply