Gruhalakshmi Payment : ಗೃಹಲಕ್ಷ್ಮಿ ಇನ್ನು ಮುಂದೆ ಪ್ರತಿ ತಿಂಗಳಿಗೆ ₹4000 – ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್

Gruhalakshmi Payment : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ಭಾರಿ ದೊಡ್ಡ ಗುಡ್ ನ್ಯೂಸ್. ಇನ್ನು ಮುಂದೆ ರಾಜ್ಯದ ಮಹಿಳೆಯರ ಖಾತೆಗೆ ಪ್ರತಿ ತಿಂಗಳಿಗೆ ₹4000 ರೂಪಾಯಿ ಹಣ ಜಮಾ. ಈಗಾಗಲೇ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರ ಖಾತೆಗೆ ಪ್ರತಿ ತಿಂಗಳಿಗೆ ಕೇವಲ ₹2000 ಹಣ ಜಮಾ ಆಗುತ್ತಿದೆ. ಈಗ ಇನ್ನು ಮುಂದೆ ಪ್ರತಿ ತಿಂಗಳಿಗೆ ರಾಜ್ಯದ ಮಹಿಳೆಯರ ಖಾತೆಗೆ ₹4000 ಹಣ ನೀಡುವುದಾಗಿ ಹೊಸ ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಲಾಗಿದೆ.

ನಿಮ್ಮ ಮನೆಯಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳಿಗೆ ಹಣ ಪಡೆದುಕೊಳ್ಳುತ್ತಿರುವ ಮಹಿಳೆಯರಿದ್ದರೆ ₹4,000 ಹಣ ಘೋಷಣೆ ಮಾಡಲಾಗಿದ್ದು, ಯಾವಾಗಿನಿಂದ ನಮ್ಮ ಖಾತೆಗೆ ಜಮಾ ಆಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳಲು ಈ ಲೇಖನವನ್ನು ಕೊನೆಯವರೆಗೂ ನೋಡಿ.

ಇದನ್ನೂ ಕೂಡ ಓದಿ : Crop Compensation : ರೈತರ ಬೆಳೆಹಾನಿ, ಬೆಳೆ ಪರಿಹಾರ ಹಣ ಜಮಾ – ನಿಮ್ಮ ಕೃಪೆಗೆ ಹಣ ಬಾರದಿದ್ದರೆ ಹೀಗೆ ಮಾಡಿ ಪಡೆಯಿರಿ! ರೈತರಿಗೆ ಸಿಹಿಸುದ್ದಿ

ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಕೊಟ್ಟ ಮಾತಿನಂತೆ ಹಂತ-ಹಂತವಾಗಿ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗು ಯುವನಿಧಿ ಯೋಜನೆಯನ್ನ ಜಾರಿ ಗೊಳಿಸಿದೆ. ಆದರೆ ಇದೀಗ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ, ಮಹಿಳೆಯರಿಗೆ ಹೊಸ ಗ್ಯಾರಂಟಿಯ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಏರ್ಪಡಿಸಿದ್ದ ಸೋಲೂರು, ತಿಪ್ಪಸಂದ್ರ, ಕುದೂರು ಹೋಬಳಿಗಳ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮಹಿಳಾ ಸಮಾವೇಶ ಉದ್ಘಾಟಿಸಿ ಸಂಸದ ಡಿ ಕೆ ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ರಾಜ್ಯದ ತೆರಿಗೆ ಹಣವನ್ನ ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ. ನಮ್ಮ ತೆರಿಗೆ ಹಣವನ್ನ ವಾಪಾಸ್ ನೀಡಲಿ. ನಮ್ಮ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ನಾನು ಕೇಳಿದರೆ ನನ್ನನ್ನ ವಿಲನ್ ರೀತಿ ನೋಡ್ತೀರಾ? ನೀವುಗಳು ತೆರಿಗೆ ಹಣ ವಾಪಸ್ ಕೊಟ್ಟಿರೇ, ಮಹಿಳೆಯರಿಗೆ ಈಗಿರುವ ಮಾಸಿಕ ₹2000 ರೂಪಾಯಿ ಜೊತೆಗೆ ಮತ್ತೆ ₹2,000 ರೂಪಾಯಿ ಸೇರಿಸಿ ಕೊಡುತ್ತೇವೆ ಎಂದು ಹೇಳಿದರು.

ಇದನ್ನೂ ಕೂಡ ಓದಿ : Ration Card Updates : ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ಅರ್ಜಿ ಸಲ್ಲಿಸಲು ಅವಕಾಶ ನೀಡಿದೆಯಾ ಸರ್ಕಾರ.? ಹೇಗೆ ಅರ್ಜಿ ಸಲ್ಲಿಸುವುದು.?

ನಮ್ಮ ರಾಜ್ಯದ ತೆರಿಗೆ ಹಣವನ್ನ ಉತ್ತರ ಪ್ರದೇಶ, ಬಿಹಾರ, ಒರಿಸ್ಸಾಗೆ ತೆಗೆದುಕೊಂಡು ಹೋದ್ರೆ. ನಮ್ಮವರ ಗತಿಯೇನು? ನಮ್ಮ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದಾಗಿ ಮಹಿಳೆಯರು ಗಂಡಂದಿರಿಗೆ ಊಟ ಹಾಕದೆ ತಿರುಗಾಡುತ್ತಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟೀಕಿಸಿದ್ದರು. ಆದರೆ ಇದುವರೆಗೂ ಯಾವೊಬ್ಬ ಗಂಡಸು ನನ್ನ ಹೆಂಡತಿ ನನಗೆ ಊಟ ಹಾಕುತ್ತಿಲ್ಲ ಎಂದು ಪೊಲೀಸ್ ಠಾಣೆಗೆ ದೂರು ಕೊಟ್ಟ ಉದಾಹರಣೆ ಇಲ್ಲ ಎಂದರು.

ಬಡವರಿಗೆ ಹಣ ನೀಡಿದರೆ ಸರ್ಕಾರ ದಿವಾಳಿ ಆಗುತ್ತೇನ್ರಿ. ರಾಜ್ಯದ ಮಹಿಳೆಯರಿಗೆ ಹಣ ಹಂಚಿದರೆ ಸರ್ಕಾರ ಮುಳುಗಿ ಹೋಗುತ್ತದೆಯಾ.? ಶ್ರೀಮಂತ ಉದ್ಯಮಿಗಳಿಗೆ 15 ಲಕ್ಷ ಕೋಟಿ ಸಾಲ ನೀಡಿ ಅದನ್ನ ಮನ್ನಾ ಮಾಡಿದ್ದೀರಿ. ಆಗ ಸರ್ಕಾರ ದಿವಾಳಿ ಆಗುತ್ತೆ ಅನಿಸಲಿಲ್ವಾ.? ಎಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇದನ್ನೂ ಕೂಡ ಓದಿ : ಪ್ಯಾನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್.! 10ಸಾವಿರ ದಂಡ ಫಿಕ್ಸ್.! ಈ ಕೆಲಸ ಕಡ್ಡಾಯ – ರಾತ್ರೋರಾತ್ರಿ ಹೊಸ ರೂಲ್ಸ್.!

ಶಕಿ ಯೋಜನೆಯಡಿ ಪ್ರತಿನಿತ್ಯ 30 ಲಕ್ಷ ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ. ಇದುವರೆಗೂ 200ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ನಮಗೆ ಮತ ಹಾಕದವರು ಮತ್ತು ನಮ್ಮನ್ನು ನಿತ್ಯ ಬಯ್ಯುವವರು ಕೂಡ ಉಚಿತ ಸೇವೆಗಳನ್ನ ಪಡೆಯುತ್ತಿದ್ದಾರೆ ಎಂದರು. 40% ಹಣ ಪಡೆದು ಆಡಳಿತ ಮಾಡಿದ ಬಿಜೆಪಿ ಸರ್ಕಾರ ಈಗ ನಮ್ಮ ಯೋಜನೆ ಬಗ್ಗೆ ಹೊಟ್ಟೆಯುರಿ ಪಡ್ತಾ ಇದ್ದೀರಾ.? ನಾವು ಆ ಹಣವನ್ನ ಉಳಿಸಿ ಜನರಿಗೆ ಗ್ಯಾರಂಟಿ ಯೋಜನೆ ಮೂಲಕ ಹಣ ತಲುಪಿಸಿದ್ದೇವೆ. ಲಿಂಗಾಯಿತರು, ಒಕ್ಕಲಿಗರು ಅನ್ನದೇ ಯಾರಿಗೂ ಭೇದವಿಲ್ಲದೆ ವಿತರಿಸುತ್ತಿದ್ದೇವೆ ಎಂದು ಹೇಳಿದರು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply