Gruhalakshmi Scheme : ಗೃಹಲಕ್ಷ್ಮಿ ಬಿಡುಗಡೆಗೆ ದಿನಾಂಕ ಫಿಕ್ಸ್.? ಅರ್ಜಿ ಸಲ್ಲಿಕೆ ಯಾವಾಗ.?

Gruhalakshmi Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯದಾದ್ಯಂತವಿರುವ ಎಲ್ಲಾ ಮಹಿಳೆಯರಿಗೆ ಈಗಾಗಲೇ ಘೋಷಿಸಿರುವ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತೀ ಕುಟುಂಬದ ಯಜಮಾನಿಗೆ ₹2,000/- ರೂಪಾಯಿ ಹಣ ಬಿಡುಗಡೆಗೆ ದಿನಾಂಕ ಘೋಷಣೆ ಮಾಡಿದ್ದು, ಜೊತೆಗೆ ಎರಡು ದೊಡ್ಡ ಘೋಷಣೆ ಮಾಡಿದ್ದಾರೆ.

Whatsapp Group Join
Telegram channel Join

ರಾಜ್ಯದಲ್ಲಿ ಈಗಾಗಲೇ ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ರಾಜ್ಯದ ಎಲ್ಲಾ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತೀ ತಿಂಗಳು ₹2,000/- ರೂಪಾಯಿ ಹಣ ಪಡೆದುಕೊಳ್ಳಲು ಕಾಯುತ್ತಿದ್ದಾರೆ. ಆದರೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವ ರಾಜ್ಯದ ಎಲ್ಲಾ ಮಹಿಳೆಯರು ಅರ್ಜಿ ಸಲ್ಲಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಕೊನೆಗೂ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅರ್ಜಿ ಸಲ್ಲಿಕೆಗೆ ದಿನಾಂಕ ಘೋಷಣೆ ಮಾಡಿದ್ದು, ಜೊತೆಗೆ ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಹೊಸ ಅಪ್ಲಿಕೇಶನ್ ರೆಡಿ ಮಾಡಿದ್ದಾರೆ.

ಇದನ್ನೂ ಕೂಡ ಓದಿ : Free Ration : ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ – ಅಂತ್ಯೋದಯ ಕಾರ್ಡ್ ಇದ್ದವರಿಗೆ ಬಂಪರ್!

Whatsapp Group Join
Telegram channel Join

ಗೂಗಲ್ ಪ್ಲೇ ಸ್ಟೋರ್ ನಿಂದ ನಿಮ್ಮ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹೊಸ ಆಪ್ ದೊರೆಯುತ್ತದೆ. ಆದರೆ ಇದಕ್ಕೂ ಕೂಡ ದಿನಾಂಕ ನಿಗದಿ ಮಾಡಿದ್ದು, ಸಂಪೂರ್ಣ ಉಚಿತವಾಗಿ ಅರ್ಜಿ ಸಲ್ಲಿಸಲು ಪ್ರತಿಯೊಬ್ಬರಿಗೂ ತಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಸಲ್ಲಿಸಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸ್ವಲ್ಪ ಕಾಲಾವಕಾಶ ಪಡೆದುಕೊಂಡಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಕೊನೆಗೂ ಗೃಹ ಲಕ್ಷ್ಮಿ ಯೋಜನೆಗೆ ದಿನಾಂಕ ನಿಗದಿಗೊಳಿಸಿದ್ದು, ಹಾಗು ಹಣ ಪಡೆದುಕೊಳ್ಳುವುದು ಹೇಗೆ.? ಆದೇಶ ಪಾತ್ರದಲ್ಲಿ ಅಲ್ಪಸ್ವಲ್ಪ ಬದಲಾವಣೆಯನ್ನು ಕೂಡ ಮಾಡಲಾಗಿದ್ದು, ಯಾವೆಲ್ಲಾ ದಾಖಲೆಗಳು ಬೇಕು.? ಹಾಗು ಯಾವ ದಿನಾಂಕದಿಂದ ಹೊಸ ಅರ್ಜಿಗಳು ಆರಂಭವಾಗುತ್ತವೆ.? ಎನ್ನುವ ನಿಮ್ಮೆಲ್ಲಾ ಪ್ರಶ್ನೆಗಳಿಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Free Current Scheme : ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ.! ಎಲ್ಲರಿಗು ಉಚಿತ ವಿದ್ಯುತ್!

ಗೃಹ ಲಕ್ಷ್ಮಿ ಯೋಜನೆಗೆ ಆಪ್ ರೆಡಿಯಾಗಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ಜಾರಿ ದಿನಾಂಕ ಘೋಷಣೆ. ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಗ್ರಾಮೀಣ ಅಭಿವೃದ್ಧಿ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು, ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆಯ ಬಳಿಕ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ. ಯೋಜನೆಯ ಅರ್ಜಿ ಸ್ವೀಕಾರಕ್ಕೆ ಆಪ್ ತಯಾರಿಸಲಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಯವರಿಗೆ ಆಪ್ ಬಗ್ಗೆ ಮಾಹಿತಿ ನೀಡಿ ಗೃಹ ಲಕ್ಷ್ಮಿ ಯೋಜನೆಗೆ ಜಾರಿಗೊಳಿಸುವ ಬಗ್ಗೆ ಚರ್ಚಿಸಿ ಘೋಷಣೆ ಮಾಡಲಾಗುವುದು. ಆಗಸ್ಟ್ 17 ಅಥವಾ 18 ರಂದು ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಚರ್ಚೆ ನಡೆದಿದೆ. ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿ ಇಲ್ಲಾ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : Free Ration : ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ – ಅಂತ್ಯೋದಯ ಕಾರ್ಡ್ ಇದ್ದವರಿಗೆ ಬಂಪರ್!

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..