Gruhalakshmi Scheme : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.! ಹಣ ಬರದೇ ಇದ್ದರೆ ಈ ಕೆಲಸ ಕಡ್ಡಾಯವಾಗಿ ಮಾಡಿ

Gruhalakshmi Scheme : ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್. ಇಲ್ಲಿಯವರೆಗೂ ಮೊದಲನೇ ಕಂತಿನ ಹಣ ಬರದೇ ಇದ್ದವರಿಗೆ ಅಥವಾ ಒಂದೇ ಕಂತಿನ ಹಣ ಬಂದು, ಎರಡನೇ ಕಂತಿನ ಹಣ ಬರದೇ ಇದ್ದವರಿಗೆ ಮತ್ತು ಒಂದು ಮತ್ತು ಎರಡನೇ ಕಂತಿನ, ಎರಡೂ ಹಣ ಬರದೇ ಇದ್ದವರಿಗೆ ರಾಜ್ಯ ಸರ್ಕಾರ ಭಾರೀ ದೊಡ್ಡ ಗುಡ್ ನ್ಯೂಸ್ ನೀಡಿದೆ. ರಾಜ್ಯದಾದ್ಯಂತ ಇರುವ ಎಲ್ಲಾ ಮಹಿಳೆಯರು ಹಣ ಬರದೇ ಇದ್ದರೆ, ತಪ್ಪದೇ ಈ ಲೇಖನವನ್ನ ಸಂಪೂರ್ಣವಾಗಿ ಕೊನೆವರೆಗೂ ನೋಡಿ.

Whatsapp Group Join
Telegram channel Join

ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತಹ ಯೋಜನೆಗಳಲ್ಲಿ ಒಂದು ಈ ಗೃಹಲಕ್ಷ್ಮಿ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು ₹2,000/- ಹಣವನ್ನು ಡಿಬಿಟಿ ಮೂಲಕ ನೇರವಾಗಿ ನೊಂದಾಯಿತ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ.

ಇದನ್ನೂ ಕೂಡ ಓದಿ : New Ration Card : ರೇಷನ್ ಕಾರ್ಡ್ ಗೆ ಕಾಯುತ್ತಿದ್ದವರಿಗೆ ಖುಷಿಸುದ್ದಿ.! ಹೊಸ ಪಡಿತರ ಚೀಟಿ ವಿತರಣೆಗೆ ನಿರ್ಧಾರ ಕೈಗೊಂಡ ಸರ್ಕಾರ!

Whatsapp Group Join
Telegram channel Join

ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೆ, ಈ-ಕೆವೈಸಿ ಅಪ್ಡೇಟ್ ಆಗದೇ ಇರುವುದರಿಂದ ಹಣ ಜಮೆ ಆಗದೇ ಇರಬಹುದು. ತಮ್ಮ ಖಾತೆ ಹೊಂದಿರುವ ಬ್ಯಾಂಕುಗಳಿಗೆ ಭೇಟಿ ನೀಡಿ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ. ಆಧಾರ್ ಜೋಡಣೆ ಮತ್ತು ಈ-ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳುವುದು ಹಾಗೂ ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್ ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಕೊಳ್ಳುವಂತೆ, ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೂಚಿಸಿದೆ.

ನಿಮ್ಮ ಖಾತೆಗೆ ಆಧಾರ್ ಸೀಡಿಂಗ್ ಆಗಿದೆಯೋ, ಇಲ್ಲವೋ ಎನ್ನುವುದನ್ನು ಚೆಕ್ ಮಾಡಿಕೊಳ್ಳಿ. ಇನ್ನು ಬ್ಯಾಂಕಿನಲ್ಲಿ ನಿಮ್ಮ ಸಾಲ ಪಡೆದುಕೊಂಡ ಖಾತೆಯನ್ನು ಗೃಹಲಕ್ಷ್ಮಿ ಯೋಜನೆಗೆ ಕೊಟ್ಟಿದ್ರೆ, ಹಣ ನಿಮ್ಮ ಸಾಲಕ್ಕೆ ಜಮಾ ಆಗಿರಬಹುದು. ರೇಷನ್ ಕಾರ್ಡ್ ತಿದ್ದುಪಡಿ ಆಗಿದೆಯಾ ಎಂದು ಆನ್ಲೈನಲ್ಲಿ ತಿಳಿದುಕೊಳ್ಳಿ. ದೀಪಾವಳಿಯ ಸಮಯದಲ್ಲಿ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಎರಡು ಕಂತಿನ ಹಣ ಜಮಾ ಮಾಡಲಾಗುತ್ತದೆ. ಹೀಗಾಗಿ ಹಣ ಬಾರದೇ ಇರುವ ಫಲಾನುಭವಿಗಳು ತಪ್ಪದೇ ಈ ಕೆಲಸವನ್ನು ಪೂರ್ಣಗೊಳಿಸಿ.

ಇದನ್ನೂ ಕೂಡ ಓದಿ : Scholarship Apply : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.!

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಒಂದು ಕಂತಿನ ಹಣ ಕೂಡ ಪಡೆಯದವರು ತಮ್ಮ ತಾಲೂಕು ವ್ಯಾಪ್ತಿಗೆ ಬರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಅಧಿಕಾರಿಗೆ ದಾಖಲೆಗಳನ್ನು ನೀಡಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿ ಸ್ವೀಕ್ರತ ಪ್ರತಿಗಳನ್ನು ಸಲ್ಲಿಸಬೇಕು. ಅಧಿಕಾರಿಗಳ ಬಳಿ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಇರುವುದರಿಂದ ಅವರು ಏನು ಸಮಸ್ಯೆಯಾಗಿದೆ ಎನ್ನುವುದನ್ನು ಹೇಳುತ್ತಾರೆ.

ನಿಮ್ಮ ರೇಷನ್ ಕಾರ್ಡ್ ಗೆ ಈ-ಕೆವೈಸಿ ಅಪ್ಡೇಟ್ ಆಗಿದೆಯಾ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ ಈ-ಕೆವೈಸಿಯನ್ನ ಅಪ್ಡೇಟ್ ಮಾಡಿಸಿಕೊಳ್ಳಿ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನ ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲವೋ ಅಂತವರು ತಮ್ಮ ಬ್ಯಾಂಕುಗಳಲ್ಲಿ ಈ-ಕೆವೈಸಿ ಅಥವಾ ಆಧಾರ್ ಜೋಡಣೆ ಮಾಡಿಸಿಕೊಂಡರೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಲಿದೆ.

ಇದನ್ನೂ ಕೂಡ ಓದಿ : ರೇಷನ್ ಕಾರ್ಡ್ ಇಲ್ಲದವರಿಗೆ ಬಂಪರ್ / ಹೊಸ ಬಿಪಿಎಲ್ Ration Card ಪ್ರಕ್ರಿಯೆ ಆರಂಭ / ಆಹಾರ ಸಚಿವರ ಆದೇಶ.!

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply