Gruhalakshmi Scheme : ಗೃಹಲಕ್ಷ್ಮೀ ಬಿಗ್ ಆಫರ್ : ಈ ಬಾರಿ ಒಂದೇ ತಿಂಗಳಿನಲ್ಲಿ 4 ಸಾವಿರ ಜಮಾ.! ಖುಷಿಯಲ್ಲಿ ಮಹಿಳೆಯರು

Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತೀ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಂತಹ (Gruhalakshmi Scheme) ದೊಡ್ಡ ಕೊಡುಗೆಯನ್ನು ನೀಡಿದೆ. ಫಲಾನುಭವಿ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ರೂಪಾಯಿ ಹಣವನ್ನು ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ(DBT) ಮೂಲಕ ಜಮಾ ಮಾಡಲಾಗುತ್ತದೆ. ಈಗಾಗಲೇ 8ನೇ ಕಂತಿನ ಹಣ ನೀಡಲಾಗಿದ್ದು, ಈಗ 9ನೇ ಕಂತಿನ ಸರದಿ. ಈ ಬಾರಿ ₹4,000 ಸಾವಿರ ರೂಪಾಯಿ ಹಣ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಕಳೆದ 8 ತಿಂಗಳುಗಳಿಂದ ತಪ್ಪದೇ ₹2,000 ರೂಪಾಯಿಗಳನ್ನು ಪ್ರತೀ ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ. ಹಲವರ ಖಾತೆಗೆ ಇನ್ನೂ ಹಣ ಬರದೇ ಇರುವ ಕಾರಣ ಅಂತಹವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ(DBT) ಮಾಡುವುದಕ್ಕಾಗಿ ರಾಜ್ಯ ಸರ್ಕಾರವು ಬೇರೆ ಬೇರೆ ಉಪಕ್ರಮಗಳನ್ನು ಕೈಗೊಳ್ಳುತ್ತಿದೆ.

ಇದನ್ನೂ ಕೂಡ ಓದಿ : PM Vishwakarma Scheme : ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಹೊಸ ಅಳವಡಿಕೆ – ಉಚಿತ ಹೊಲಿಗೆ ಯಂತ್ರ ಪಡೆಯಲು ಇಲ್ಲಿದೆ ಡೈರೆಕ್ಟ್ ಲಿಂಕ್

ಈ ಬಾರಿ ಒಂದೇ ತಿಂಗಳಿನಲ್ಲಿ ಗೃಹಲಕ್ಷ್ಮೀ ಯೋಜನೆಯ(Gruhalakshmi Scheme) ನಾಲ್ಕು ಸಾವಿರ ರೂಪಾಯಿ ಹಣ ಬಿಡುಗಡೆ.!

ಗೃಹಲಕ್ಷ್ಮೀ ಯೋಜನೆಯ(Gruhalakshmi Scheme) 8 ಮತ್ತು 9ನೇ ಕಂತಿನ ಹಣ ಒಟ್ಟಿಗೆ ₹4,000 ರೂಪಾಯಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ವರದಿಯಾಗಿದೆ. ಏಪ್ರಿಲ್ ತಿಂಗಳಲ್ಲಿ 8ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಇನ್ನು 9ನೇ ಕಂತಿನ ಹಣವನ್ನು ಮೇ ತಿಂಗಳ ಮೊದಲ ವಾರದಲ್ಲಿ ಜಮಾ ಮಾಡುವ ನಿರೀಕ್ಷೆ ಇತ್ತು. ಆದರೆ ಕೆಲವು ಮಹಿಳೆಯರಿಗೆ ಮೇ ತಿಂಗಳ ಹಣ ಅಂದರೆ 9ನೇ ಕಂತಿನ ಹಣವು ಕೂಡ ಈಗಾಗಲೇ ಜಮಾ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಯನ್ನ(Gruhalakshmi Scheme) ಆಗಸ್ಟ್ 30 2023 ರಂದು ಚಾಲನೆ ನೀಡಲಾಯಿತು. ಅಂದಿನಿಂದ ಪ್ರತಿ ತಿಂಗಳು 20ನೇ ತಾರೀಖಿನ ಒಳಗಡೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಚುನಾವಣೆಯ ಇರುವ ಹಿನ್ನಲೆ ಮಹಿಳೆಯರಿಗೆ ಯಾವುದೇ ತೊಂದರೆ ಆಗಬಾರದೆಂದು ರಾಜ್ಯ ಸರ್ಕಾರವು ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ನಿರೀಕ್ಷೆಗೂ ಮೊದಲೇ ಹಣ ಜಮಾ ಮಾಡಿರುವುದು ಕಂಡು ಬಂದಿದೆ.

ಇದನ್ನೂ ಕೂಡ ಓದಿ : SSLC Result 2024 : ರಾಜ್ಯದ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.! ಯಾವ ದಿನಾಂಕ ಗೊತ್ತಾ.? ಡೈರೆಕ್ಟ್ ಲಿಂಕ್

ಈಗಾಗಲೇ 1.27 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು, ಇಲ್ಲಿಯವರೆಗೆ 3000 ಕೋಟಿಗೂ ಅಧಿಕ ಹಣವನ್ನು ಗೃಹಲಕ್ಷ್ಮೀ ಯೋಜನೆಗೆ(Gruhalakshmi Scheme) ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದು, ಮುಂದಿನ ದಿನದಲ್ಲಿ ಅನುದಾನದ ಹಣವನ್ನು ಇನ್ನಷ್ಟು ಜಾಸ್ತಿ ಮಾಡುವ ಸಾಧ್ಯತೆ ಇದೆ.

ಸಾಕಷ್ಟು ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ(Gruhalakshmi Scheme) ಹಣ ಇನ್ನೂ ಜಮಾ ಆಗಿಲ್ಲ. ಇದಕ್ಕೆ ಮುಖ್ಯ ಕಾರಣವೆಂದರೆ ಬ್ಯಾಂಕಿನ ದಾಖಲೆಗಳು ಸರಿ ಇಲ್ಲದೇ ಇರುವುದು ಎಂದು ರಾಜ್ಯ ಸರ್ಕಾರವು ತಿಳಿಸಿದೆ. ಆದರೆ ಇದಕ್ಕೆ ಸಾಕಷ್ಟು ಪರಿಹಾರವನ್ನು ಕೂಡ ರಾಜ್ಯ ಸರ್ಕಾರವು ಈಗಾಗಲೇ ಸೂಚಿಸಲಾಗಿದೆ.

ಇದನ್ನೂ ಕೂಡ ಓದಿ : Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online

ಅಂಗನವಾಡಿ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರ ಸಹಾಯದಿಂದ ಅರ್ಹ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇದುವರೆಗೆ ನಿಮ್ಮ ಖಾತೆಗೆ ಸಂಬಂಧಪಟ್ಟ ಸಮಸ್ಯೆ ಪರಿಹಾರ ಆಗದಿದ್ದಲ್ಲಿ ಹೊಸದಾಗಿ ಗೃಹಲಕ್ಷ್ಮೀ ಯೋಜನೆಗೆ(Gruhalakshmi Scheme) ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply