Gruhalakshmi Updates : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ(Gruhalakshmi) ಯೋಜನೆಗೆ ನೀವು ಅರ್ಜಿ ಸಲ್ಲಿಸಿದ್ದೀರಿ ತಾನೇ? ಗೃಹಲಕ್ಷ್ಮೀ 7 ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಯಾವಾಗ ಜಮೆಯಾಗಲಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಸ್ನೇಹಿತರೇ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಜನ ಮೆಚ್ಚಿದ ಐದು ಗ್ಯಾರಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಮಹಿಳಾ ಸಬಲೀಕರಣದ ದೃಷ್ಠಿಯಿಂದ ಸಿದ್ದರಾಮಯ್ಯನವರು ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದಾರೆ.
ಇದನ್ನೂ ಕೂಡ ಓದಿ : LPG Gas : ಎಲ್ಪಿಜಿ ಗ್ಯಾಸ್ ಗ್ರಾಹಕರಿಗೆ ಗುಡ್ ನ್ಯೂಸ್ – ರಾತ್ರೋರಾತ್ರಿ ಪಾತಾಳಕ್ಕೆ ಕುಸಿತ – ಕೇಂದ್ರ ದಿಂದ ಬಂಪರ್ ಗಿಫ್ಟ್.!
ನಗರ ಹಾಗು ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿ ಬಡ ಕುಟುಂಬಗಳಿಗೆ ಬರಗಾಲ ಮತ್ತು ಬೆಲೆ ಏರಿಕೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ 2,000 ರೂ. ವರದಾನವಾಗಿದೆ. ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಅರ್ಹ ಫಲಾನುಭವಿಗಳ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತಿದೆ.
ಗೃಹಲಕ್ಷ್ಮೀ(Gruhalakshmi) ಯೋಜನೆಯ 7 ನೇ ಕಂತು ಬಂತಾ.?
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಗೃಹಲಕ್ಷ್ಮೀ(Gruhalakshmi) ಯೋಜನೆಯನ್ನು 2023 ರ ಆಗಸ್ಟ್ 30 ರಿಂದ ಅನುಷ್ಠಾನಕ್ಕೆ ತರಲಾಗಿದ್ದು, ಇದುವರೆಗೂ 6 ಕಂತುಗಳ ಒಟ್ಟು 12,000 ರೂಪಾಯಿ ಹಣವನ್ನು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯನ್ನು ಮಾಡಲಾಗಿದೆ. ಇನ್ನು 7 ನೇ ಕಂತಿನ 2,000 ರೂ. ಹಣವನ್ನು ಕೂಡ ಡಿಬಿಟಿ(DBT) ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ಹಣವನ್ನ ಜಮಾ ಮಾಡಲಾಗುತ್ತದೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಹಿಂದೆ ಹೇಳಿದಂತೆ ಗೃಹಲಕ್ಷ್ಮೀ(Gruhalakshmi) ಯೋಜನೆಯ ಹಣವನ್ನು ಪ್ರತಿ ತಿಂಗಳ 20 ತಾರೀಖಿನ ಒಳಗಾಗಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ. ಅದರಂತೆ ಬಹುತೇಕ ಅರ್ಹ ಫಲಾನುಭವಿ ಮಹಿಳೆಯರಿಗೆ 6 ಕಂತುಗಳ ಒಟ್ಟು 12,000 ರೂ. ಹಣ ಜಮೆಯಾಗಿದೆ.
ಇದನ್ನೂ ಕೂಡ ಓದಿ : Ration Card Status Check : ಪಡಿತರ ಚೀಟಿ ತಿದ್ದುಪಡಿ ಸ್ಟೇಟಸ್ ಹೇಗೆ ಚೆಕ್ ಮಾಡುವುದು.? ಆದಷ್ಟು ಬೇಗ ನೋಡಿ
ಇದೇ ಮಾರ್ಚ್ ತಿಂಗಳ ಗೃಹಲಕ್ಷ್ಮೀ(Gruhalakshmi) ಯೋಜನೆಯ ಹಣವನ್ನು 2ನೇ ಅಥವಾ 3ನೇ ವಾರದಲ್ಲಿ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ DBT ಮೂಲಕ ನೇರ ವರ್ಗಾವಣೆ ಮಾಡಲಾಗುವುದು.
ನಿಮಗೆ ಇದುವರೆಗೂ ಕೂಡ ಹಣ ಬರದೇ ಇದ್ದಲ್ಲಿ ತಕ್ಷಣ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಆದಷ್ಟು ಬೇಗ ಭೇಟಿ ಮಾಡಿ. ನಿಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.
ಗೃಹಲಕ್ಷ್ಮಿ(Gruhalakshmi) DBT ಸ್ಟೇಟಸ್ ಚೆಕ್ ಮಾಡಲು ಈ ಲಿಂಕನ್ನು ಒತ್ತಿ :- Download Now
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..