Rain Updates : ಇಂದು ರಾತ್ರಿಯಿಂದ ರಣ ಭಯಂಕರ ಮಳೆ.! ಮಳೆ.! | 5 ದಿನ ಸತತ ಮಿಂಚು ಗುಡುಗು ಸಹಿತ ಮಳೆ.!

Rain Updates : ನಮಸ್ಕಾರ ಸ್ನೇಹಿತರೇ, ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಈ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಬಿಸಿಲು ಹೆಚ್ಚಳದಿಂದ ಭಾರಿ ಮುನ್ನೆಚ್ಚರಿಕೆಯನ್ನು ನೀಡಿದೆ ಹಾಗೂ ರಾಜ್ಯದಲ್ಲಿ ಸಾವಿರಕ್ಕೂ ಅಧಿಕ ಕೇಸ್‌ಗಳು ಬಿಸಿಲಿನ ತಾಪಕ್ಕೆ ಆಸ್ಪತ್ರೆಗೆ ದಾಖಲಾಗಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ರಣ ಭಯಂಕರ ಮಳೆ ಸುರಿಯಲಿದ್ದು, ಮಳೆರಾಯ ತಂಪೆರೆಯಲು ಬರುತ್ತಿದ್ದಾನೆ ಹಾಗು ಕೆಲವು ಜಿಲ್ಲೆಗಳಲ್ಲಿ ಇನ್ನು ಕೂಡ ಬಿಸಿಲು ತಾಪಮಾನ ಏರಿಕೆಯಿಂದ ಜನ ಕಂಗಾಲಾಗಿ ಹೋಗಿತ್ತು. ಬಿಸಿ ಗಾಳಿ ಹಾಗೂ ಒಣ ಹವೆಯಿಂದ ರಾಜ್ಯದಲ್ಲಿರುವ ಗರ್ಭಿಣಿ ಮಹಿಳೆಯರಿಗೆ ಹಾಗೂ ವೃದ್ಧರಿಗೆ ರಾಜ್ಯ ಆರೋಗ್ಯ ಇಲಾಖೆಯು ಖಡಕ್ ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಕೂಡ ಓದಿ : Govt Scheme : ಸರ್ಕಾರದ ಭರ್ಜರಿ ಆಫರ್.!!‌ ಹಸು, ಕುರಿ, ಕೋಳಿ ಹಂದಿ ಸಾಕಾಣಿಕೆಗೆ ಸಿಗಲಿದೆ 50%ರಷ್ಟು ಸಹಾಯಧನ.!

ರಾಜ್ಯದಲ್ಲಿ ಅತ್ಯಧಿಕ ಬಿಸಿಲಿಗೆ ಹೆಸರಾಗಿರುವ ಜಿಲ್ಲೆಗಳಲ್ಲಿ ರಾಯಚೂರು ಮತ್ತು ಕಲಬುರ್ಗಿ ಜಿಲ್ಲೆಗಳ ಜನತೆಗೆ ಮತ್ತಷ್ಟು ಸಂಕಷ್ಟ ಎದುರಾಗುವಷ್ಟರ ಮಟ್ಟಕ್ಕೆ ಇನ್ನೂ ಕೂಡ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಅಂದರೆ 14 ಜಿಲ್ಲೆಗಳಿಗೆ ಭಯಂಕರ ಗಾಳಿ, ಸುಳಿ ಗಾಳಿಯಿಂದ ಕೂಡಿದ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಸುಮಾರು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ನಂತರದ 3 ದಿನ ರಾಜ್ಯದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕ್ರಮೇಣ ಎರಡು ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಗದಗ, ಕಲಬುರ್ಗಿ. ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹೀಟ್‌ವೇವ್ ಅಂದ್ರೆ ಉಷ್ಣ ಅಲೆ ಹೆಚ್ಚಾಗುವ ಸಾಧ್ಯತೆಯಿದೆ. ಅಲ್ಲದೆ ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಆರ್ದ್ರತೆ ಯ ಅಂಶಗಳು ಪರಿಣಾಮ ಬೀರಲಿವೆ. ಹಾಗೆಯೇ ಬೆಳಗಾವಿ, ಬೀದರ್, ಬಾಗಲಕೋಟೆ, ರಾಯಚೂರು ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಸೆಕೆಯೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಇದನ್ನೂ ಕೂಡ ಓದಿ : LPG Gas Cylinder : ಗ್ಯಾಸ್ ಬಳಕೆದಾರರಿಗೆ ಬಂಪರ್ ಗುಡ್ ನ್ಯೂಸ್ – 2024 ಲೋಕಸಭೆ ಚುನಾವಣೆ ಭರ್ಜರಿ!!

ಇನ್ನೊಂದು ವಾರ ಎಲ್ಲೆಲ್ಲಿ ಮಳೆ ಸಾಧ್ಯತೆ ಅನ್ನೋದನ್ನ ನೋಡುವುದಾದ್ರೆ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾನುವಾರ ಹಾಗು ಸೋಮವಾರ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ಬೀದರ್, ಕಲಬುರ್ಗಿ, ಕೊಡಗು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಬಹುದು ಅಂತ ಅಂದಾಜಿಸಲಾಗಿದೆ.

ಅದೇ ರೀತಿಯಾಗಿ ಏಪ್ರಿಲ್ 12 ರವರೆಗೆ ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ – ಈ ಜಿಲ್ಲೆಗಳ ಮಹಿಳೆಯರಿಗೆ – ಇನ್ನು ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ.!

ಬೆಂಗಳೂರಲ್ಲಿ 37 ರ ಗಡಿ ದಾಟಲಿದೆ. ಗರಿಷ್ಠ ಉಷ್ಣಾಂಶ ರಾಜಧಾನಿ ಬೆಂಗಳೂರಲ್ಲಿ ತಾಪಮಾನ ಏರಿಕೆ ಆಗುತ್ತಲೇ ಇದೆ. ಶನಿವಾರ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಭಾನುವಾರ 38 ಡಿಗ್ರಿ ಸೆಲ್ಸಿಯಸ್ ದಾಟುವ ನಿರೀಕ್ಷೆ ಇದೆ. ಆದರೆ, ಬಿಸಿಲಿನ ತೀವ್ರತೆ ಹೆಚ್ಚಾಗಿ ಇರಲಿದ್ದು, ರಾತ್ರಿ ವೇಳೆಯು ತಂಪಿನ ವಾತಾವರಣ ಮರೀಚಿಕೆಯಾಗಿದೆ. ಆದರೆ ಯುಗಾದಿ ತರುವಾಯ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಹೇಳಿದ್ದು, ಜನರು ಮಳೆ ನಿರೀಕ್ಷೆಯಲ್ಲಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply