HSRP Number Plate : ನಮಸ್ಕಾರ ಸ್ನೇಹಿತರೇ, ಕಾರು, ಬೈಕು, ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ಸೇರಿದಂತೆ ಇನ್ನಿತರ ವಾಹನಗಳಿಗೆ ಕೇಂದ್ರದಿಂದ ಹೊಸ ನಿಯಮ ಜಾರಿಯಾಗಲಿದೆ. ಇದೇ ಫೆಬ್ರವರಿ ಹದಿನೇಳರ ಒಳಗಾಗಿ ಈ ಕೆಲಸ ಮಾಡುವುದು ಎಲ್ಲ ವಾಹನ ಸವಾರರಿಗೆ ಕಡ್ಡಾಯವಾಗಿದೆ. ಒಂದು ವೇಳೆ ನೀವು ಈ ಕೆಲಸ ಮಾಡದಿದ್ರೆ ಫೆಬ್ರವರಿ ಹದಿನೇಳರ ನಂತರ ₹2000 ದಂಡ ಮತ್ತು ನಿಮ್ಮ ವಾಹನ ಸೀಜ್ ಆಗುವ ಬಹಳಷ್ಟು ಸಾಧ್ಯತೆ ಇದೆ.
ಹಾಗಾದ್ರೆ ಎಂತಹ ವಾಹನಗಳಿಗೆ ಇದು ಅನ್ವಯವಾಗಲಿದೆ.? ಮತ್ತು ಎಲ್ಲಿ.? ಹೇಗೆ ಮಾಡಬೇಕು.? ಮತ್ತು ಎಷ್ಟು ಹಣ ಖರ್ಚಾಗುತ್ತದೆ.? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ನಿಮ್ಮ ಬಳಿಯೂ ಕೂಡ ಸ್ವಂತ ವಾಹನ ಇದ್ದು, ಈ ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳಲು ಈ ಲೇಖನವನ್ನ ಕೊನೆವರೆಗೂ ನೋಡಿ.
ಇದನ್ನೂ ಕೂಡ ಓದಿ : LPG Gas Cylinder : ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಿ!
ಸಾರಿಗೆ ಇಲಾಖೆ ವಾಹನಗಳಿಗೆ ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಸುವಂತೆ ಫೆಬ್ರವರಿ 17 ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಹೌದು, ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನವಾಗಿದ್ದು, ನಿಗದಿತ ದಿನದೊಳಗೆ ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.
ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 1, 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನ ಅಂದರೆ ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ.
ಇದನ್ನೂ ಕೂಡ ಓದಿ : Drought Relief : ಬರಪೀಡಿತ ರೈತರಿಗೆ 2ನೇ ಕಂತಿನ ಹಣ ಬಿಡುಗಡೆ – NDRF ಮತ್ತು SDRF ವರದಿ ₹22,500 ಹಣ
2019 ಏಪ್ರಿಲ್ 1 ಕ್ಕಿಂತ ಹಳೆಯದಾದ ವಾಹನಗಳಿಗೆ ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಹಾಕಿಸಿಕೊಳ್ಳುವಂತೆ ಸಾರಿಗೆ ಇಲಾಖೆ ನೀಡಿರುವ ಗಡುವು ಫೆಬ್ರವರಿ ಹದಿನೇಳುಕ್ಕೆ ಮುಕ್ತಾಯವಾಗಲಿದೆ. ನಂಬರ್ ಪ್ಲೇಟ್ ಬದಲಾವಣೆಗೆ ಹಲವು ವಾಹನ ಮಾಲೀಕರು ಆಸಕ್ತಿ ತೋರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಮೊದಲ ಬಾರಿ ಸಿಕ್ಕಿಬಿದ್ದರೆ ₹1000 ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ ₹2000 ದಂಡ ಹಾಕಲಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!