Rain Updates : ಇವತ್ತಿನಿಂದ 2 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.?

Rain Updates : ಸೆಪ್ಟೆಂಬರ್ ತಿಂಗಳು ಶುರುವಾಗಿದೆ. ಆದರೆ ಈಗ ಕರ್ನಾಟಕದಾದ್ಯಂತ ಮತ್ತೆ ಮಳೆರಾಯನ ಅಬ್ಬರ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಿರುವ ಕಾರಣ, ಇನ್ನು ಮುಂದಿನ ೪೮ ಗಂಟೆಗಳ ಕಾಲ ಈ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿದೆ ಹವಾಮಾನ ಇಲಾಖೆ. ಕರ್ನಾಟಕದಲ್ಲಿ ಈ ಚಂಡಮಾರುತದಿಂದ ಭಾರೀ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ. ಇನ್ನು ಈ ಮಳೆಯಿಂದಾಗಿ ಯಾವ ಯಾವ ಜಿಲ್ಲೆಗಳಲ್ಲಿ ಜನರು ಎಚ್ಚರ ವಹಿಸಬೇಕು.? ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಇರುತ್ತಾ.? ಇದರ ಬಗ್ಗೆನೇ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Spandana Vijay : ಡಿಕೆಡಿ ವೇದಿಕೆ ಮೇಲೆ ಸ್ಪಂದನ ನೆನೆದು ಕಣ್ಣೀರಿಟ್ಟ ವಿಜಯ ರಾಘವೇಂದ್ರ.! ಮಗನ ಬಗ್ಗೆ ಹೇಳಿದ್ದೇನು.?

ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಕರ್ನಾಟಕದಲ್ಲಿ ವಾಡಿಕೆಗಿಂತ ೪೦% ಕಡಿಮೆ ಮಳೆಯಾಗಿದೆ. ಇನ್ನು ತಮಿಳುನಾಡಿನವರಂತೂ ಕಾವೇರಿ ನೀರು ಬಿಡಬೇಕೆಂದು ಖ್ಯಾತೆ ತೆಗೆದಿದ್ದು, ಅವರಿಗೆ ನೀರು ಕೊಡುತ್ತಿರುವ ಕಾರಣ ಕೆ ಆರ್ ಎಸ್ ನಲ್ಲಿ ೧೦೦ ಅಡಿಗಿಂತ ಕಡಿಮೆ ನೀರಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ಯಾವ ಡ್ಯಾಮ್ ಗಳು ಕೂಡ ಈ ಬಾರಿ ಭರ್ತಿಯಾಗಿಲ್ಲ. ಇನ್ನು ಆಗಸ್ಟ್ ನಲ್ಲಿ ಬೀಳಬೇಕಿದ್ದ ಮಳೆ ಸೆಪ್ಟೆಂಬರ್ ನಲ್ಲಿ ಶುರುವಾಗಿದೆ. ಇದರಿಂದ ರೈತರ ಮೊಗದಲ್ಲಿ ಸ್ವಲ್ಪ ಮಟ್ಟಿಗೆ ಖುಷಿ ತಂದಿದೆ ಅಂತಾನೆ ಹೇಳಬಹುದು. ಇನ್ನು ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಒಡಿಸ್ಸಾದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಒಡಿಸ್ಸಾದಲ್ಲಿ ಈ ಬಾರಿ ಮಳೆಯಿಂದ ೧೧ ಜನ ಮೃತಪಟ್ಟಿದ್ದಾರೆ. ಇನ್ನು ಉತ್ತರ ಕರ್ನಾಟಕದಲ್ಲಿ ವಿಪರೀತ ಮಳೆಯಾಗುತ್ತಿದೆ. ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಹಾಗು ವಿಜಯಪುರದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Vijay Raghavendra : ತಾಯಿ ಕಳೆದುಕೊಂಡ ಶೌರ್ಯನಿಗೆ ಚಿಕ್ಕಮ್ಮ ಶ್ರೀಮುರಳಿ ಪತ್ನಿ ಎಂತಹ ಕೆಲಸ ಮಾಡಿದ್ದಾರೆ ಗೊತ್ತಾ.? ಕೈ ಮುಗಿದ ವಿಜಯ ರಾಘವೇಂದ್ರ.!

ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ, ಬೆಂಗಳೂರಿನಲ್ಲಿ ಇನ್ನು ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ರೀತಿ ಮಳೆ ಮುಂದುವರಿದರೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುವುದು ಉಪಮುಖ್ಯಮಂತ್ರಿಯವರು ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..