Labour Card : ಲೇಬರ್ ಕಾರ್ಡ್ ವಿದ್ಯಾರ್ಥಿವೇತನ – ಕಾರ್ಮಿಕರ ಮಕ್ಕಳು ಈ ಕೂಡಲೇ ಅರ್ಜಿ ಸಲ್ಲಿಸಿ

Labour Card : ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ ಕಾರ್ಮಿಕರ ಮಕ್ಕಳಿಗೂ ಕೂಡ ಶೈಕ್ಷಣಿಕ ಅರ್ಹತಾ ಸ್ಥಾನಮಾನ ಸಿಗಬೇಕೆನ್ನುವ ಉದ್ದೇಶದಿಂದ ಅರ್ಹ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಕಾರ್ಮಿಕ ಇಲಾಖೆಯು ಇದೀಗ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಹಾಗಾದರೆ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಅರ್ಹ ಕಾರ್ಮಿಕ ಮಕ್ಕಳಿಗೆ ಎಷ್ಟು ವಿದ್ಯಾರ್ಥಿ ವೇತನವನ್ನು ನೀಡುತ್ತದೆ.? ಹಾಗೂ ಈ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.? ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನ ನಿಮಗೆ ಈ ಲೇಖನದಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Ration Card : ರೇಷನ್ ಕಾರ್ಡ್ ಇಲ್ಲದವರಿಗೆ ಗುಡ್ ನ್ಯೂಸ್ – ಏಪ್ರಿಲ್ 1 ರಿಂದ ಬಂಪರ್ – ಹೊಸ ಕಾರ್ಡ್

ಈ ವಿದ್ಯಾರ್ಥಿ ವೇತನಕ್ಕೆ ಬೇಕಾಗಿರುವ ಅರ್ಹತೆಗಳು :-

  • ವಿದ್ಯಾರ್ಥಿ ವೇತನವನ್ನು ಕರ್ನಾಟಕದಲ್ಲಿ ವಾಸ್ತವ್ಯ ಹೊಂದಿರುವ ಕಟ್ಟಡ ನಿರ್ಮಾಣ ಮತ್ತು ಇತರ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತದೆ.
  • ಲೇಬರ್ ಕಾರ್ಡ್ ಹೊಂದಿರುವುದು ವಿದ್ಯಾರ್ಥಿ ವೇತನವನ್ನು ಪಡೆಯಲು ಕಡ್ಡಾಯವಾಗಿದೆ. ಅಂದರೆ ವಿದ್ಯಾರ್ಥಿಯ ಪೋಷಕರು ಲೇಬರ್ ಕಾರ್ಡ್ ಹೊಂದಿರಲೇಬೇಕು.
  • ವಿದ್ಯಾಭ್ಯಾಸವನ್ನು ಕಾರ್ಮಿಕರ ಮಕ್ಕಳು ಶೈಕ್ಷಣಿಕ ವರ್ಷದಲ್ಲಿ ಪಡೆಯುತ್ತಿದ್ದರೆ ಮಾತ್ರವೇ ಈ ಒಂದು ಯೋಜನೆಗೆ ಅರ್ಹರಾಗಿರುತ್ತಾರೆ ಎಂದರ್ಥ.
  • ಒಂದು ಕುಟುಂಬದಲ್ಲಿ ಇಬ್ಬರು ಮಕ್ಕಳಿಗೆ ಮಾತ್ರ ಈ ವಿದ್ಯಾರ್ಥಿ ವೇತನ ಸಿಗುತ್ತದೆ.

ವಿದ್ಯಾರ್ಥಿ ವೇತನದ ಮೊತ್ತ :-

  • 8ನೇ ತರಗತಿಯಿಂದ 10ನೇ ತರಗತಿಯ ಮಕ್ಕಳಿಗೆ ₹3,000/- ಗಳ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
  • ಪಿಯುಸಿ, ಡಿಪ್ಲೋಮಾ ಹಾಗೂ ಟಿಸಿಎಚ್ ಕೋರ್ಸ್ ಗಳಿಗೆ ₹4,000/- ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
  • ಪದವಿ ವ್ಯಾಸಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಲೇಬರ್ ಕಾರ್ಡ್ ನ ಮೂಲಕ ₹5,000/- ವಿದ್ಯಾರ್ಥಿ ವೇತನ ಸಿಗಲಿದೆ.
  • ಇಂಜಿನಿಯರಿಂಗ್ ಹಾಗು ವೈದ್ಯಕೀಯ ಕೋರ್ಸ್ ಮಾಡುತ್ತಿರುವಂತಹ ಕಾರ್ಮಿಕರ ಮಕ್ಕಳಿಗೆ ₹10,000/- ವಿದ್ಯಾರ್ಥಿವೇತನ ನೀಡಲಾಗುತ್ತದೆ.
  • ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರ ಮಕ್ಕಳು ಸ್ನಾತಕೋತರ ಪದವಿ ವ್ಯಾಸಂಗ ಮಾಡುತ್ತಿದ್ದರೆ ₹6,000/- ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
  • ಹೀಗೆ ತರಗತಿಗಳಿಗೆ ಅನುಗುಣವಾಗಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಕಾರ್ಮಿಕ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳೇನು :-

  • ಅಭ್ಯರ್ಥಿಗಳ ಪೋಷಕರಿಗೆ ಕಾರ್ಮಿಕ ಕಾರ್ಡ್ ಹೊಂದಿರಬೇಕು.
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್
  • ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಗೆ – ರಾತ್ರೋರಾತ್ರಿ ಹೊಸ ರೂಲ್ಸ್ – ಎಲ್ಲರಿಗೂ ಈ ಕೆಲಸ ಕಡ್ಡಾಯ

ಅರ್ಜಿ ಸಲ್ಲಿಸುವ ವಿಧಾನ :-

ಕಾರ್ಮಿಕರು ಏನಾದರೂ ಲೇಬರ್ ಕಾರ್ಡನ್ನು ಹೊಂದಿದ್ದರೆ ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಕಾರ್ಮಿಕ ಕಾರ್ಡ್ ನ ಮೂಲಕ ಪಡೆಯಬಹುದಾಗಿದೆ. ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಕೂಡ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಆನ್ಲೈನ್ ಮೂಲಕ ಅರ್ಜುನ್ ಸಲ್ಲಿಸಲು ಎಸ್ ಎಸ್ ಬಿ ಪೋರ್ಟಲ್ನ ಮೂಲಕ ಅವಕಾಶ ಕಲ್ಪಿಸಲಾಗಿದ್ದು ಆಫ್ ಲೈನ್ ಮೂಲಕ ಅರ್ಜಿಯನ್ನು ಕಾರ್ಮಿಕ ಇಲಾಖೆಯ ಭೇಟಿ ನೀಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಈ ವೆಬ್ ಸೈಟ್ ಮೂಲಕ ಕೂಡ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ :- ಕಾರ್ಮಿಕರ ಮಕ್ಕಳಿಗೆ 2023-24ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply