ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ

ಬೆಂಗಳೂರು : ರಾಜ್ಯದ ಎಲ್ಲ ಐದು ವರ್ಷದೊಳಗಿನ ಮಕ್ಕಳಿಗೆ ಮತ್ತು ಮಕ್ಕಳ ತಂದೆ-ತಾಯಂದಿರಿಗೆ ರಾಜ್ಯ ಸರ್ಕಾರ ದಿಂದ ಮತ್ತೊಂದು ಸಿಹಿಸುದ್ಧಿ. ಸರ್ಕಾರಿ ಶಾಲೆಗಳಲ್ಲಿ ಇದೇ 2024 ಶೈಕ್ಷಣಿಕ ವರ್ಷದಿಂದಲೇ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆಯು ದೊಡ್ಡ ಕ್ರಮವನ್ನು ಕೈಗೊಂಡಿದೆ. ಈ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿರುವ ಪ್ರಾಥಮಿಕ ಶಿಕ್ಷಣ ಇಲಾಖೆಯು ಬಹಳಷ್ಟು ಪೋಷಕರ ಬೇಡಿಕೆಯಂತೆ ರಾಜ್ಯದಲ್ಲಿ ಇದೇ ವರ್ಷದಿಂದಲೇ ಐದು ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಥಮಿಕ ಪೂರ್ವ ಶಿಕ್ಷಣ ಆರಂಭಿಸಲು ಹೊಸ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ನಾಲ್ಕರಿಂದ ಐದನೇ ವರ್ಷದ ಮಕ್ಕಳಿಗಾಗಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರವು ಈ ವರ್ಷ ಅಕ್ಷರ ಆವಿಷ್ಕಾರದ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಹಾಗೂ ದ್ವಿಭಾಷಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ತರಗತಿಗಳನ್ನ ನಡೆಸುವುದಕ್ಕೆ ಮುಂದಾಗಿದ್ದು, ಮಕ್ಕಳ ವೈಯಕ್ತಿಕ ಬೆಳವಣಿಗೆಯಲ್ಲಿ ಎರಡೂವರೆ ವರ್ಷದಿಂದ 6 ವರ್ಷ ಪ್ರಮುಖ ಪಾತ್ರ ಇರುತ್ತದೆ. ಶಿಕ್ಷಕರು ಅರ್ಹ ಶೈಕ್ಷಣಿಕ ಅರ್ಹತೆ ಮತ್ತು ತರಬೇತಿ ಪಡೆದಿದ್ದಾರೆ. ಖಂಡಿತವಾಗಿಯೂ ಈ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಆಗುತ್ತದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಡುತ್ತಾರೆ.

ಇದನ್ನೂ ಕೂಡ ಓದಿ : PM Suryodaya Yojana : ಉಚಿತ ಸೋಲಾರ್ ಮೆಲ್ಛಾವಣೆ ವಿತರಣೆ.! ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತ ಸೋಲಾರ್ ಮೇಲ್ಚಾವಣಿ ಪಡೆದುಕೊಳ್ಳಿ.!

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ತರಗತಿಗಳು ಹಾಗು ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳು ಆರಂಭಗೊಳ್ಳುತ್ತಿದ್ದು, ಪಾಲಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ಹೊಸ ತರಗತಿಗಳನ್ನ ಆರಂಭಿಸಲು 2024-25ನೇ ಶೈಕ್ಷಣಿಕ ಪ್ರಸಕ್ತ ಆರಂಭಿಕ ವರ್ಷವಾದ ಮೇ 29 ರ ಒಳಗಾಗಿ ಪೂರ್ವ ಸಿದ್ಧತೆಗಳನ್ನ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply