Loan Waiver Scheme : ಕರ್ನಾಟಕ ರೈತರ ಸಾಲಮನ್ನಾ ಘೋಷಣೆ 2023

Loan Waiver Scheme : ನಮಸ್ಕಾರ ಸ್ನೇಹಿತರೇ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತವನ್ನು ೫ ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ. ಎನ್ ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿದರದ ಸಾಲವನ್ನ ಮೂರು ಲಕ್ಷ ರೂಪಾಯಿಯಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು.

Whatsapp Group Join
Telegram channel Join

ಅದೇ ರೀತಿ ಶೇ.3 ರ ಬಡ್ಡಿದರದಲ್ಲಿ ನೀಡುವ ಮಧ್ಯಮ ಅವಧಿ ಸಾಲದ ಮೊತ್ತವನ್ನ ೧೦ ಲಕ್ಷ ರೂಪಾಯಿಯಿಂದ ೨೦ ಲಕ್ಷ ರೂಪಾಯಿಯಿಗೆ ಹೆಚ್ಚಳ ಮಾಡಲು ಭರವಸೆ ನೀಡಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಯೇ ಇದನ್ನ ಜಾರಿಗೊಳಿಸಿ, ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ರೈತರಿಗೆ ಗುರಿ ಮೀರಿ ಸಾಲ ನೀಡಲಾಗುತ್ತಿದೆ.

ಇದನ್ನೂ ಕೂಡ ಓದಿ : BPL APL AAY : ಬಿಪಿಎಲ್ ಹಾಗು ಎಪಿಎಲ್ ರೇಶನ್ ಕಾರ್ಡ್ ಇರುವವರಿಗೂ, ಇಲ್ಲದವರಿಗೂ ಬಿಗ್ ಶಾಕ್.!

Whatsapp Group Join
Telegram channel Join

ಕಳೆದ ವರ್ಷ ೧೨,೦೦೦ ಕೋಟಿ ಸಾಲ ನೀಡುವ ಗುರಿ ಹೊಂದಿದ್ದು, ಸುಮಾರು 20,000 ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ. ಅದೇ ರೀತಿ ಈ ವರ್ಷವೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಾಲ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ರೈತರಿಗೆ 50,000 ದಿಂದ 1 ಲಕ್ಷ ರೂಪಾಯಿವರೆಗಿನ ಸಾಲಮನ್ನಾ ಮಾಡುವ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಈ ಬಗ್ಗೆ ಶೀಘ್ರವೇ ಸಭೆ ನಡೆಸಿ ಸಾಲ ಮನ್ನಾ ಯೋಜನೆ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..