New Ration Card : ರೇಷನ್ ಕಾರ್ಡ್ ಗೆ ಕಾಯುತ್ತಿದ್ದವರಿಗೆ ಖುಷಿಸುದ್ದಿ.! ಹೊಸ ಪಡಿತರ ಚೀಟಿ ವಿತರಣೆಗೆ ನಿರ್ಧಾರ ಕೈಗೊಂಡ ಸರ್ಕಾರ!

New Ration Card : ನಮಸ್ಕಾರ ಸ್ನೇಹಿತರೆ, ನಿಮಗೆ ಹೊಸ ಪಡಿತರ ಚೀಟಿ ಬೇಕಾ.? ಪಡಿತರ ಚೀಟಿಯ ಎಲ್ಲಾ ಸೌಲಭ್ಯಗಳು ನಿಮಗೆ ಸರ್ಕಾರದಿಂದ ಸಿಗಬೇಕಾ.? ಇಲ್ಲಿದೆ ನಿಮಗೆಲ್ಲರಿಗೂ ಒಂದು ಗುಡ್ ನ್ಯೂಸ್, ಹೊಸ ಪಡಿತರ ಚೀಟಿಯನ್ನು ಹೇಗೆ ವಿತರಣೆ ಮಾಡುತ್ತಾರೆ ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ಇಲ್ಲಿ ನೀಡಲಾಗಿದೆ.

Whatsapp Group Join
Telegram channel Join

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರಿಗೆ ನೀಡಲಾಗುತ್ತಿರುವ ಗೃಹಲಕ್ಷ್ಮಿ ಯೋಜನೆಯ ಲಾಭವು ಪಡೆಯಲು ಮತ್ತು ಸರ್ಕಾರದ ಹೊಸ ಹೊಸ ಯೋಜನೆಗಳ ಸೌಲಭ್ಯವನ್ನು ಪಡೆಯುವುದಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಮಹಿಳೆಯರು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಕೂಡ ಓದಿ : Health Tips : ವೀರ್ಯಾಣುಗಳ ಸಂಖ್ಯೆಯನ್ನು ನೈಸರ್ಗಿಕವಾಗಿ ಹೆಚ್ಚಿಸುವ ಆಹಾರ ಪದಾರ್ಥಗಳು

Whatsapp Group Join
Telegram channel Join

ಆದರೆ, ಹೊಸ ಪಡಿತರ ಚೀಟಿಯನ್ನು ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀಡುವುದನ್ನು ಸ್ಥಗಿತ ಮಾಡಲಾಗಿತ್ತು. ಸರ್ಕಾರ ಇದೀಗ ಹೊಸ ರೇಷನ್ ಕಾರ್ಡ್ ನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲು ನಿರ್ಧರಿಸಿದೆ. ಇದು ಇಲ್ಲಿಯವರೆಗೂ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಬಡ ಜನರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಪಡೆಯಲು ಇನ್ನು ಅನುಕೂಲವಾಗಲಿದೆ. ಇದರಿಂದಾಗಿ ಬಡ ಜನರಿಗೆ ಸರ್ಕಾರ ಜಾರಿಗೆ ತಂದ ಯೋಜನೆಯಲ್ಲಿ ಲಾಭ ಸಿಗಲಿದೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 2.90 ಲಕ್ಷ ಫಲಾನುಭವಿಗಳು ಹೊಸ ಪಡಿತರ ಚೀಟಿಯನ್ನು ಪಡೆಯಲು ಅರ್ಜಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಸರ್ಕಾರ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆ ಇರುವ ಜನರಿಗೆ ಮಾತ್ರ ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ ಎಚ್ ಮುನಿಯಪ್ಪನವರು ಮಾಹಿತಿಯನ್ನು ನೀಡಿದ್ದಾರೆ.

ಇದನ್ನೂ ಕೂಡ ಓದಿ : Ration Card Updates : ರೇಷನ್ ಕಾರ್ಡ್ ರದ್ದು.! ಬಿಪಿಎಲ್ ಕಾರ್ಡ್ ಇದ್ದವರು ಈ ಕೆಲಸವನ್ನ ಕಡ್ಡಾಯವಾಗಿ ಮಾಡಿಕೊಳ್ಳಿ

ಹೊಸ ಪಡಿತರ ಚೀಟಿಯನ್ನ 2.9 ಲಕ್ಷ ಅರ್ಹ ಕುಟುಂಬಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಬಡವರಿಗೆ ಬರಗಾಲದಲ್ಲಿ ತುಂಬಾ ಸಹಾಯವಾಗುತ್ತದೆ. ಸರ್ಕಾರ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಹಾಗೂ ಅಂತ್ಯದ ಕಾರ್ಡ್ ಹೊಂದಿದ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿ ಮತ್ತು ಬಾಕಿ 5 ಕೆಜಿ ಅಕ್ಕಿಯ ಬದಲಿಗೆ 170/- ರೂ. ಹಣವನ್ನು ನೇರವಾಗಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡುತ್ತಿದ್ದಾರೆ.

ಹೊಸ ಪಡಿತರ ಚೀಟಿ ಪಡೆದರೆ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ₹2,000/- ರೂ. ಹಣವನ್ನು ಪಡೆಯಬಹುದು. ಹಾಗು ಇದು ಬಡ ಕುಟುಂಬಗಳ ಈ ಬರಗಾಲದ ಸಂದರ್ಭದಲ್ಲಿ ಮನೆಯ ಸಣ್ಣ ಪುಟ್ಟ ಖರ್ಚು ವೆಚ್ಚಕ್ಕೆ ಇದು ಸಹಾಯವಾಗಲಿದೆ.

ಇದನ್ನೂ ಕೂಡ ಓದಿ : 47 ಸಾವಿರ ರೂಪಾಯಿ ದಂಡ ಹಾಕಿದ ಟ್ರಾಫಿಕ್ ಪೊಲೀಸ್… ಅದಕ್ಕೆ ಆಟೋ ಚಾಲಕ ಮಾಡಿದ್ದೇನು ಗೊತ್ತಾ.?

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply