ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024

PM Awas Yojana 2024 : ನಮಸ್ಕಾರ ಸ್ನೇಹಿತರೇ, ಇರಲು ಸ್ವಂತ ಮನೆ ಇಲ್ಲದವರಿಗೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ ನೂತನವಾಗಿ ಮೂರನೇ ಬಾರಿ ದೇಶದ ಪ್ರಧಾನಮಂತ್ರಿ ಗದ್ದುಗೆ ಏರಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಇರುವ ಗ್ರಾಮೀಣ ಮತ್ತು ನಗರ ಭಾಗದ ನಿವೇಶನ ರಹಿತ ಬಡ ಕುಟುಂಬಗಳಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ನೀವು ಕೂಡ ಸ್ವಂತ ಮನೆ ಇಲ್ಲದವರಾಗಿದ್ದಾರೆ ಅಥವಾ ಸ್ವಂತ ಜಾಗ ಇಲ್ಲದವರು ಆಗಿದೆ ಅಥವಾ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಾ ಇದ್ದರೆ ತಪ್ಪದೇ ಈ ಲೇಖನವನ್ನ ಕೊನೆಯವರಿಗೂ ನೋಡಿ.

ಕೇಂದ್ರ ಸರ್ಕಾರದಿಂದ ಯಾವಾಗ ಗ್ರಾಮೀಣ ಬಡವರಿಗೆ ಮತ್ತು ನಗರ ಪ್ರದೇಶದ ಬಡವರಿಗೆ ಮನೆಗಳು ಸಿಗುತ್ತವೆ. ಮತ್ತು ಕೇಂದ್ರ ಸರ್ಕಾರದಿಂದ ಯಾವಾಗ ಮನೆಗಳು ಬಿಡುಗಡೆಯಾಗುತ್ತವೆ? ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು? ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Bara Parihara : ರೈತರಿಗೆ ಎಕರೆಗೆ ₹28,000 ಎರಡನೇ ಹಂತದ ಬೆಳೆವಿಮೆ ಹಣ ಬಿಡುಗಡೆ.! ಈ ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿ

ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದು, ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ. ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನ ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿಯೇ ಸಂಪುಟ ಸಭೆ ನಡೆದಿದ್ದು, 30 ಸಂಪುಟ ದರ್ಜೆಯ ಸಚಿವರು ಐವರು ಸ್ವತಂತ್ರ ಖಾತೆ ನಿರ್ವಹಣೆ ಹಾಗು 31 ರಾಜ್ಯ ಖಾತೆ ಸಚಿವರು ಪಾಲ್ಗೊಂಡಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ದಿಸೆಯಲ್ಲಿ ನಿರ್ಧಾರವನ್ನ ಕೈಗೊಳ್ಳಲಾಗಿದ್ದು, ಇದಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದರು. ಇದರೊಂದಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಬಡವರಿಗೆ ಅನುಕೂಲವಾಗುವ ತೀರ್ಮಾನವನ್ನ ತೆಗೆದುಕೊಂಡಂತಾಗಿದೆ.

ಇದನ್ನೂ ಕೂಡ ಓದಿ : Crop Insurance : ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶ.! ಹೇಗೆ ಅರ್ಜಿ ಸಲ್ಲಿಸುವುದು.? ಡೈರೆಕ್ಟ್ ಲಿಂಕ್

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರು ಸ್ವಂತ ಮನೆ ಕನಸನ್ನ ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತಂದಿದೆ. ಯೋಜನೆಯಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು ₹1.20 ಲಕ್ಷ ರೂಪಾಯಿಯನ್ನ ನೀಡಲಾಗುತ್ತದೆ. ಇನ್ನು ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು ₹1.30 ಲಕ್ಷ ರೂಪಾಯಿ ಸಹಾಯಧನವನ್ನ ನೀಡಲಾಗುತ್ತದೆ.

ಕಳೆದ 10 ವರ್ಷಗಳಲ್ಲಿ ಕೇಂದ್ರ ಸರಕಾರವು ಸುಮಾರು 4.21 ಕೋಟಿ ಮನೆಗಳನ್ನ ನಿರ್ಮಿಸಿಕೊಟ್ಟಿದೆ. ಪಿಎಂ ಕಿಸಾನ್ ನಿಧಿಯ ಹದಿನೇಳನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೂ ಕೂಡ ಅವರು ಸಹಿ ಹಾಕಿದ್ದರು. ಇದರಿಂದ 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂಪಾಯಿ ಬಿಡುಗಡೆಯಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply