PM-Kisan Samman Nidhi : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿ ರೈತರ ಗಮನಕ್ಕೆ / ಕೇಂದ್ರ ಸರ್ಕಾರದಿಂದ ಹೊಸ ಬದಲಾವಣೆ ಜಾರಿಗೆ.!

PM-Kisan Samman Nidhi : ನಮಸ್ಕಾರ ಸ್ನೇಹಿತರೇ, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಎಲ್ಲಾ ರೈತ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್.! ಪಿಎಂ ಕಿಸಾನ್ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನ ಮಾಡಿ ಕೇಂದ್ರ ಸರ್ಕಾರದಿಂದ ಆದೇಶ ಜಾರಿಗೆ. ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ವರ್ಷಕ್ಕೆ ₹6,000/- ರೂ.ಗಳನ್ನು ರೈತರ ಖಾತೆಗಳಿಗೆ ನೀಡಲಾಗುತ್ತಿದ್ದು, ಈ ಯೋಜನೆಯಲ್ಲಿ ಕೇಂದ್ರ ಸರ್ಕಾರವು ಹೊಸ ಹೊಸ ಬದಲಾವಣೆಗಳನ್ನ ಜಾರಿಗೊಳಿಸುತ್ತಿದ್ದು, ಅರ್ಹ ರೈತ ಫಲಾನುಭವಿಗಳಿಗೆ ಮಾತ್ರ ಈ ಸೌಲಭ್ಯ ದೊರೆಯಬೇಕು ಎನ್ನುವುದು ಕೇಂದ್ರ ಸರ್ಕಾರದ ಮುಖ್ಯ ಆಶಯವಾಗಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಅಜ್ಜ-ಅಜ್ಜಿಯರು ಇನ್ನು ಪೆನ್ಷನ್ ಬಂದಿಲ್ಲ ಅಂದರೆ ಈ ಕೆಲಸವನ್ನ ಕಡ್ಡಾಯವಾಗಿ ಮಾಡಿಕೊಳ್ಳಬೇಕು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಹಾಗು ಇಲ್ಲಿಯವರೆಗೂ ಈ ಯೋಜನೆಯ 14 ಕಂತುಗಳನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರಲ್ಲಿ ಕಂತಿನ ಹಣವನ್ನು ಅರ್ಹ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಕಳುಹಿಸಲಾಗುತ್ತದೆ. ಪ್ರತೀ ನಾಲ್ಕು ತಿಂಗಳಿಗೊಮ್ಮೆ ತಲಾ ₹2,000/- ರೂ.ಗಳ ಮೂರು ಕಂತುಗಳನ್ನೂ ಅಂದರೆ, ವಾರ್ಷಿಕವಾಗಿ ಒಟ್ಟು ₹6,000/- ರೂ. ಗಳನ್ನು ಪ್ರತೀ ಫಲಾನುಭವಿಗೆ ನೀಡಲಾಗುತ್ತದೆ. ಮಾಧ್ಯಮ ವರದಿಗಳ ಪ್ರಕಾರ ಪಿಎಂ ಕಿಸಾನ್ ಯೋಜನೆಯಡಿ ಪ್ರಯೋಜನೆಗಳನ್ನು ಅನರ್ಹ ಫಲಾನುಭವಿಗಳು ಕೂಡ ಈ ಯೋಜನೆಯ ಲಾಭ ಪಡೆಯುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಕ್ರಮವನ್ನ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಬಂದಿಲ್ವಾ.? 2 ನೇಯ ಕಂತಿನ ಹಣ ಬಿಡುಗಡೆಗೆ ಕ್ಷಣಗಣನೆ.!

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅನೇಕ ಫಲಾನುಭವಿಗಳು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಹಾಗು ಅನೇಕ ಫಲಾನುಭವಿಗಳು ಇತರ ಕಾರಣಗಳಿಗಾಗಿ ವಂಚಿತರಾಗಿದ್ದಾರೆ ಎಂದು ಕೆಲವು ಮಾಧ್ಯಮ ವರದಿಗಳು ಸೂಚಿಸುತ್ತವೆ. ದೊಡ್ಡ ಸಂಖ್ಯೆಯ ಫಲಾನುಭವಿಗಳು ಕಂತಿನ ಲಾಭವನ್ನು ಪಡೆದ ಪ್ರಕರಣ ತಪ್ಪಾಗಿ ಬೆಳಕಿಗೆ ಬಂದ ನಂತರ ಕೇಂದ್ರ ಸರ್ಕಾರವು ಇನ್ನೂ ಹೆಚ್ಚಿನ ಪ್ರಕರಣಗಳ ತನಿಖೆ ನಡುಸುವಂತೆ ಸೂಚಿಸಿದೆ. ರೈತರಿಗಾಗಿ ಜಾರಿಗೆ ತಂದ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ನಿಯಮದ ಅಡಿಯಲ್ಲಿ ಇಂತಹ ಅನರ್ಹ ಫಲಾನುಭವಿಗಳು ಇದುವರೆಗೂ ಪಡೆದ ಪ್ರಯೋಜನೆಗಳನ್ನ ಹಿಂಪಡೆಯಲಾಗುತ್ತದೆ. ಅಂದರೆ ಇದುವರೆಗೆ ಪಡೆದ ಕಂತಿನ ಹಣವನ್ನು ಹಿಂಪಡೆಯಲಾಗುತ್ತದೆಯಂತೆ. ಈ ಯೋಜನೆಯಡಿ ಅನರ್ಹ ರೈತರಿಗೆ ನೋಟಿಸ್ ಕಳುಹಿಸಿ ಹಣವನ್ನು ಹಿಂಪಡೆಯಲಾಗುತ್ತದೆ. ಅನರ್ಹ ರೈತರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗುವುದು ಹಾಗು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply