Rain Alert : ರಾಜ್ಯದಲ್ಲಿ ಮತ್ತೆ ಒಂದು ವಾರಗಳ ಕಾಲ ಭಾರಿ ಮಳೆ.! ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ನೋಡೋಣ.

Rain Alert : ಮೇ 11 ನೇ ತಾರೀಖಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು. ಅದರಂತೆ ಕೆಲವು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡೋಣ.

Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?

ಮೇ 11 ರವರೆಗೆ ಕೂಡ ಬಿಸಿಲಿನ ತಾಪ ಹೆಚ್ಚಾಗಿತ್ತು. ಆದರೆ 11 ರ ಸಂಜೆಯ ನಂತರ ಎಲ್ಲಾ ಕಡೆ ಭಾರೀ ಮಳೆಯಾಗುತ್ತಿದೆ. ಇನ್ನು ಒಂದು ವಾರಗಳ ಕಾಲ ಭಾರಿ ಮಳೆ ಸಂಭವಿಸುತ್ತದೆ. ವರುಣ ದೇವನ ಕೃಪೆಯಿಂದಾಗಿ ಸಾಕಷ್ಟು ರೀತಿಯ ಅನುಕೂಲ ಕೂಡ ಉಂಟಾಗುತ್ತದೆ ಎಂದು ಹೇಳಲಾಗಿದೆ. ಇದು ಬರಗಾಲದಿಂದ ತತ್ತರಿಸಿದ ರೈತರಿಗೆ ಸಂತಸದ ಸುದ್ದಿ ಎಂದೇ ಹೇಳಬಹುದು. ರಾಜ್ಯದ ಬಹುತೇಕ ಜಿಲ್ಲೆಗಳೊಂದಿಗೆ ಈಗಾಗಲೇ ಸಾಧಾರಣವಾಗಿ ಮಳೆ ಸುರಿಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.

ಇದರಿಂದಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ದಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಈ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆ ಆಗುತ್ತಿದೆ.ಮುಂದಿನ ದಿನಗಳಲ್ಲಿ ಅದರಲ್ಲೂ ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಉಡುಪಿ, ಶಿವಮೊಗ್ಗ ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆ ಇದೆ. ಮೇ 11 ನೇ ತಾರೀಖಿನಿಂದ ಹಗುರವಾಗಿ ಮಳೆ ಆಗುತ್ತದೆ ಆದರೆ 12ನೇ ತಾರೀಖಿನಿಂದ 15ನೇ ತಾರೀಖಿನ ವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ(IMD) ನೀಡಿದೆ.

Bara Parihara Status : ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರದ ವಿವರ ಚೆಕ್ ಮಾಡುವುದು ಹೇಗೆ.? ನೋಡೋಣ

ಬೆಂಗಳೂರಿನಲ್ಲಿ ಮುಂದಿನ 4 ದಿನಗಳವರೆಗೆ ಕೂಡ ಮಳೆ ಮುಂದುವರಿಯುತ್ತದೆ. ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಯಿದೆ ಎಂದು ಹವಾಮಾನ ಇಲಾಖೆ(MD) ತಿಳಿಸಿದೆ. ಎಲ್ಲಾ ಜಿಲ್ಲೆಗಳಲ್ಲೂ ಕೂಡ ಮುಂದಿನ ದಿನಗಳಲ್ಲಿ ಭಾರಿ ಮಳೆ ಸಂಭವಿಸುತ್ತದೆ. ಎಲ್ಲಾ ಜಿಲ್ಲೆಗಳಿಗೂ ಕೂಡ ವರುಣನ ಕೃಪೆ ಇರುವುದರಿಂದ ತುಂಬಾ ಅನುಕೂಲ ಕೂಡ ಉಂಟಾಗುತ್ತದೆ. ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರಿ ಮಳೆ ಸಂಭವಿಸುತ್ತದೆ ಎಂದು ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ.

Leave a Reply