Rain News Today : ಇಂದು ಭಾರೀ ಮಳೆ.! // ಯಾವ ಜಿಲ್ಲೆಗಳಲ್ಲಿ ಮಳೆ ಜಾಸ್ತಿ ಬೀಳಲಿದೆ .?

Rain News Today : ಹವಾಮಾನ ವರದಿ :- ದಕ್ಷಿಣ ಒಳನಾಡು ಕರ್ನಾಟಕ, ತಮಿಳು ನಾಡು, ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಪ್ರದೇಶಗಳಲ್ಲಿ ಜುಲೈ ಗಿಂತ ಸಾಮಾನ್ಯಕಿಂತ ಕಡಿಮೆ ಮಳೆ ಬೀಳುವ ಸಾಧ್ಯತೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Departmen) ತಿಳಿಸಿದೆ. ಆದರೆ ಇಡೀ ದೇಶಕ್ಕೆ ಸಾಮಾನ್ಯ ಮಾನ್ಸೂನ್ ಮುನ್ಸೂಚನೆ ನೀಡಿದೆ.

Whatsapp Group Join
Telegram channel Join

ರಾಜ್ಯದ ಹಲವು ಭಾಗಗಳಲ್ಲಿ ಇಂದು ಹಗುರ ಮತ್ತು ಸಾಧಾರಣ ಮಳೆಯಾಗುವ ಮುನ್ಸೂಚನೆಯಿದ್ದು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಬಾರಿ ಮಳೆಯಾಗುವ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ. ಕಳೆದ ೨೪ ಗಂಟೆಗಳ ಅವಧಿಯಲ್ಲಿ ನೋಡುವುದಾದರೆ, ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಹಾಗು ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಜುಲೈ 5 ರ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ನೀಡಿರುವ ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ 1 ರಿಂದ 3 ರ ವರೆಗೆ ಯಲ್ಲೋ ಅಲ್ಲರ್ಟ್ 4 ಮತ್ತು 5 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಕೂಡ ಓದಿ : IAS ಇಂಟರ್ವ್ಯೂ ನಲ್ಲಿ ಈ ಮಹಿಳೆ ಕೊಟ್ಟ ಉತ್ತರ ಈಗ ಎಲ್ಲಾ ಕಡೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ

Whatsapp Group Join
Telegram channel Join

ಕಲಬುರುಗಿ, ರಾಯಚೂರ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿವೆ. ಅಷ್ಟೇ ಅಲ್ಲದೇ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ. ಅತ್ತ ದಕ್ಷಿಣ ಒಳನಾಡಿನಲ್ಲಿಯೂ ಹಗುರ ಹಾಗು ಸಾಧಾರಣ ಮಳೆಯಾಗಲಿದ್ದು, ಗುಡುಗು ಮಿಂಚು ಹಾಗು ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಇನ್ನು ದೇಶದ ವಾಣಿಜ್ಯ ರಾಜಧಾನಿ ಮುಂಬೈ ನಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಮುಂಗಾರು ಮಳೆಯ ಹೊಡೆತಕ್ಕೆ ವಾಣಿಜ್ಯ ನಗರಿಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸ್ಥಳೀಯ ರೈಲುಗಳ ಸಂಚಾರಕ್ಕೂ ಅಡ್ಡಿ ಆತಂಕ ಎದುರಾಗಿದ್ದು, ಹಲವು ರೈಲುಗಳ ಸಂಚಾರ ನಿಲ್ಲಿಸಲಾಗಿದೆ. ಮತ್ತು ಕೆಲವು ರೈಲುಗಳು ನಿಧಾನವಾಗಿ ಚಲಿಸುವಂತೆ ಸೂಚನೆ ನೀಡಲಾಗಿದೆ.

ಈ ನಡುವೆ ಹವಾಮಾನ ಇಲಾಖೆಯು ಮುಂದಿನ 3 ರಿಂದ 4 ಗಂಟೆಗಳ ಕಾಲ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ(India Meteorological Departmen) ಹೇಳಿದೆ. ಸಾಧಾರಣದಿಂದ ಭಾರೀ ಮಳೆ ಮುಂಬೈ ನಗರದಾದ್ಯಂತ ಆಗಲಿದ್ದು, ಮುಂಬೈ ಮಾತ್ರವಲ್ಲ ಅಕ್ಕ ಪಕ್ಕದ ಥಾಣೆ, ಪಾಲ್ಗರ್ ಜಿಲ್ಲೆಗಳಲ್ಲೂ ಕೂಡ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(India Meteorological Departmen) ತಿಳಿಸಿದೆ.

ಇದನ್ನೂ ಕೂಡ ಓದಿ : BPL APL AAY : ರೇಶನ್ ಕಾರ್ಡ್ ದಾರರಿಗೆ ಭರ್ಜರಿ ಸಿಹಿಸುದ್ಧಿ // ಅಕ್ಕಿಯ ಜೊತೆಗೆ ಹಣ, ರಾಗಿ, ಜೋಳ, ಗೋಧಿ ವಿತರಣೆ.!

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..