Ration Card : ರೇಷನ್ ಕಾರ್ಡ್ ಇಲ್ಲದವರಿಗೆ ಗುಡ್ ನ್ಯೂಸ್ – ಏಪ್ರಿಲ್ 1 ರಿಂದ ಬಂಪರ್ – ಹೊಸ ಕಾರ್ಡ್

Ration Card : ಕರ್ನಾಟಕ ರಾಜ್ಯದಾದ್ಯಂತ ಬಿಪಿಎಲ್ ರೇಷನ್ ಕಾರ್ಡ್ ಇಲ್ಲದವರಿಗೆ ಗುಡ್ ನ್ಯೂಸ್ ಅಂತವರಿಗೆ ಇನ್ನು ಮುಂದೆ ಇದೇ ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು. ರಾಜ್ಯದಲ್ಲಿ ಹೊಸದಾಗಿ ಮದುವೆಯಾಗಿರುವ ನವಜೋಡಿಗಳಿಗೂ ಕೂಡ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ವಿತರಿಸಲು ನಿರ್ಧರಿಸಲಾಗಿದೆ ಮತ್ತು ಒಂದೇ ಕುಟುಂಬದಲ್ಲಿ ಮಗ ಮತ್ತು ಸೊಸೆ ಇರುವುದು ಅದನ್ನು ಬೇರ್ಪಡಿಸಿ ಅವರಿಗೂ ಕೂಡ ಪ್ರತ್ಯೇಕವಾಗಿ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಲು ಬಯಸುವವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್ ನೀಡಿದೆ.

ಹಾಗಿದ್ರೆ ಇದೇ ಏಪ್ರಿಲ್ ಒಂದರಿಂದ ಯಾರು ಅರ್ಜಿ ಸಲ್ಲಿಸಬಹುದು.? ಮತ್ತು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಯಾವೆಲ್ಲಾ ದಾಖಲೆಗಳು ನಮ್ಮ ಬಳಿ ಇರಬೇಕು.? ಮತ್ತು ಹೇಗೆ ನಾವು ಹೊಸ ಬಿಪಿಎಲ್ ರೇಶನ್ ಕಾರ್ಡ್ ಮಾಡಿಸಿಕೊಳ್ಳಬಹುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : Veterinary Department : ಕುರಿ, ಮೇಕೆ, ಹಸು, ಎಮ್ಮೆ ಆಕಸ್ಮಿಕ ಸಾವಿಗೆ ₹10,000/- ಗಳಷ್ಟು ಸಹಾಯಧನ – ಅನುಗ್ರಹ ಯೋಜನೆ ಜಾರಿಗೆ.!

ಇಂತಹವರು ಮಾತ್ರ ಎಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. ಸದ್ಯ ರಾಜ್ಯದಲ್ಲಿ ಪಡಿತರ ಚೀಟಿಗೆ ಸಂಬಂಧಪಟ್ಟಂತೆ ಹೊಸ ಹೊಸ ಅಪ್ ಡೇಟ್ ಹೊರಬಿದ್ದಿದೆ. ಜನಸಾಮಾನ್ಯರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಪಡಿತರ ಚೀಟಿಗಾಗಿ ಕಾಯುತ್ತಿದ್ದಾರೆ. ಇನ್ನು ಮಾರ್ಚ್ 31 ರ ಒಳಗಡೆ ಎಲ್ಲ ಅರ್ಜಿಯನ್ನ ಪರಿಶೀಲಿಸಿ, ಏಪ್ರಿಲ್ 1 ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ. ಸದ್ಯ ಇದೀಗ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಅಹ್ವಾನ ಮಾಡಲಾಗಿದೆ.

ಈ ದಿನಾಂಕದಿಂದ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಹೊಸ ಆದ್ಯತಾ ಪಡಿತರ ಚೀಟಿಗಾಗಿ ಬಂದಿರುವಂತಹ 2,95,986 ಅರ್ಜಿಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ. ಇದುವರೆಗೆ 57,651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 774 ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಯನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ ಅಥವಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿ ಮಾಡಿಸಲು ಅರ್ಜಿ ಸ್ವೀಕಾರ.! ಹೊಸ ರೇಷನ್ ಕಾರ್ಡ್ ಕಾಯುತ್ತಿರುವವರಿಗೆ ಸರ್ಕಾರದಿಂದ ಬಿಗ್ ಅಪ್ಡೇಟ್.!

ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಚುನಾವಣೆ ಮತ್ತಿತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳ ವಿಲೇವಾರಿ ಪ್ರಗತಿಯಲ್ಲಿದೆ. ಅವುಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡಲಿದ್ದು, ಏಪ್ರಿಲ್ 1 ರಿಂದ ಹೊಸ ಅರ್ಜಿಗಳನ್ನ ಆಹ್ವಾನಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಹೊಸ ಪಡಿತರ ಚೀಟಿ ಸಲ್ಲಿಸಲು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನ ನಿರ್ಧರಿಸಲಾಗುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply