Ration Card Benefits : ಎಲ್ಲಾ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಖಾಸಗಿ ಆಸ್ಪತ್ರೆ ಬಿಲ್ ಇನ್ಮುಂದೆ ಕಟ್ಟುವಂತಿಲ್ವಾ.!

Ration Card Benefits : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮತ್ತೊಂದು ಹೊಸ ಯೋಜನೆಗೆ ಚಾಲನೆ ನೀಡಲು ಎಲ್ಲಾ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಇರುವ ಎಲ್ಲಾ ಪಡಿತರ ಚೀಟಿದಾರರಿಗೆ ಭಾರೀ ದೊಡ್ಡ ಗುಡ್ ನ್ಯೂಸ್ ನೀಡಿದ್ದಾರೆ.

Whatsapp Group Join
Telegram channel Join

ರಾಜ್ಯದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಹೊಸ ಯೋಜನೆ ಘೋಷಣೆ ಮಾಡಿದೆ. ನಿಮ್ಮ ಬಳಿ ಈಗಾಗಲೇ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ಇದ್ದರೆ ರಾಜ್ಯ ಸರ್ಕಾರ ಭಾರೀ ದೊಡ್ಡ ಗುಡ್ ನ್ಯೂಸ್ ನೀಡಿದ್ದು, ರಾಜ್ಯದಲ್ಲಿ ಸಾಕಷ್ಟು ಬಡ ಜನರು ದಿನೇ ದಿನೇ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ರಾಜ್ಯ ಸರ್ಕಾರವು ಬಡ ಜನರಿಗಾಗಿ ಮತ್ತೊಂದು ಹೊಸ ಯೋಜನೆ ಘೋಷಣೆ ಮಾಡಿ ಬಡವರಿಗೆ ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಹಾಗು ಆಸ್ಪತ್ರೆಗಳಿಗೆ ಬಡವರು ಕೂಡಿಟ್ಟ ಸಂಪೂರ್ಣ ಹಣ ಹಾಕಿ ಬಡವರು ಬಡವರಾಗಿ ಉಳಿದು ಸಾಲದ ಸುಳಿಯಲ್ಲಿ ಬೀಳುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ದಾರರಿಗೆ ಹೊಸ ಯೋಜನೆ ಮೂಲಕ ಸಹಾಯ ಮಾಡಲು ಮುಂದಾಗಿದೆ.

ಇದನ್ನೂ ಕೂಡ ಓದಿ : Ration Card Updates : ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೆ 3 ಸಿಹಿ ಸುದ್ದಿ ಕೊಟ್ಟ ಸರ್ಕಾರ : ನ.1ರಿಂದ ಹೊಸ ಬದಲಾವಣೆ ಜಾರಿ

Whatsapp Group Join
Telegram channel Join

ರಾಜ್ಯ ಸರ್ಕಾರವು ಬಿಪಿಎಲ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ಧಿ ನೀಡಿದ್ದು, ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವ ಉದ್ದೇಶದಿಂದ ‘ಡಾಕ್ಟರ್ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ’ ಯೋಜನೆಯನ್ನು ನವೆಂಬರ್ ನಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನವಂಬರ್ ಅಂತ್ಯಕ್ಕೆ ‘ಪುನೀತ್ ರಾಜಕುಮಾರ್ ಹೃದಯ ಜ್ಯೋತಿ’ ಯೋಜನೆಗೆ ಚಾಲನೆ ನೀಡಲಿದ್ದು, ರಾಜ್ಯದ 16 ಸೂಪರ್ ಸ್ಪೆಷಾಲಿಟಿ, 85 ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಯೋಜನೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಿಸಿರುವ ‘ಡಾಕ್ಟರ್ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ’ ಯೋಜನೆ ಜಾರಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. 85 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನು ಸ್ಪೋಕ್ ಕೇಂದ್ರಗಳಾಗಿ, 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಹಬ್ ಗಳನ್ನಾಗಿ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : Gruhalakshmi Scheme : ಅಂತೂ ಬಂದೇ ಬಿಡ್ತು.. ಗೃಹಲಕ್ಷ್ಮೀ 2ನೇ ಕಂತಿನ ಹಣ! | ನಿಮಗೂ ಬಂತಾ.?

ಎದೆನೋವು ಕಾಣಿಸಿಕೊಂಡವರು ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದ ಕೂಡಲೇ ಅವರಿಗೆ ಇಸಿಜಿ ಮಾಡಿಸಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಪರಿಸ್ಥಿತಿ ಅವಲೋಕಿಸಿ ಗಂಭೀರ ಪರಿಸ್ಥಿತಿ ಇದ್ದರೆ, ಟೆನೆಟ್ ಪ್ಲಸ್ ಇಂಜೆಕ್ಷನ್ ನೀಡಲಾಗುವುದು. ಅಲ್ಲಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ಕೊಡಲಾಗುತ್ತದೆ.
ಟೆನೆಟ್ ಪ್ಲಸ್ ಇಂಜೆಕ್ಷನ್ ಗೆ 35 ರಿಂದ 40 ಸಾವಿರ ರೂಪಾಯಿ ಖರ್ಚಾಗಲಿದ್ದು, ಸ್ಪೋಕ್ ಕೇಂದ್ರಗಳಲ್ಲಿ ಇದನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply