Ration Card Update : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್.! ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?

Ration Card Update : ನಮಸ್ಕಾರ ಸ್ನೇಹಿತರೇ, ಹೊಸ ರೇಷನ್ ಕಾರ್ಡ್ ಪಡೆಯಲು ಇಚ್ಚಿಸುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದೆ. ಜೂನ್ ಮೊದಲ ವಾರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ರಾಜ್ಯದ ನಾಗರಿಕ ಆಹಾರ ಮತ್ತು ಸರಬರಾಜು ಇಲಾಖೆಯ ವೆಬ್ ಸೈಟ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇಲಾಖೆಯ ವೆಬ್ ಸೈಟ್ :- ನಾಗರಿಕ ಆಹಾರ ಮತ್ತು ಸರಬರಾಜು ಇಲಾಖೆ

ಕರ್ನಾಟಕ ಪಡಿತರ ಚೀಟಿ(Ration Card) ಪಟ್ಟಿಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.

ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ

ಅಗತ್ಯವಿರುವ ದಾಖಲೆಗಳು :-

  • ಆಧಾರ್ ಕಾರ್ಡ್
  • ಚುನಾವಣಾ ಗುರುತಿನ ಚೀಟಿ
  • ವಯಸ್ಸಿನ ಪ್ರಮಾಣ ಪತ್ರ
  • ಡ್ರೈವಿಂಗ್ ಲೈಸೆನ್ಸ್
  • ಸ್ವಯಂ ಘೋಷಿತ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಫೋಟೋ

ಇಲ್ಲಿ ತಿಳಿಸಲಾದ ದಾಖಲೆಗಳು ನೀವು ಹೊಂದಿದ್ದಲ್ಲಿ, ಆನ್ ಲೈನ್ ಮೂಲಕ ಕೂಡ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಿ.

ನಾಗರಿಕ, ಆಹಾರ ಮತ್ತು ಸರಬರಾಜು ಇಲಾಖೆಯ ಈ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಈ ವೆಬ್ ಸೈಟ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ. ಅಲ್ಲಿ ಕೇಳಿರುವಂತಹ ಎಲ್ಲಾ ಮಾಹಿತಿಗಳನ್ನ ಭರ್ತಿ ಮಾಡಿ. ಅರ್ಜಿಯ ಜೊತೆಗೆ ದಾಖಲೆಯ ಸಾಫ್ಟ್ ಕಾಪಿ ಗಳನ್ನ ಅಪ್ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ.

ಇಲಾಖೆಯ ವೆಬ್ ಸೈಟ್ :- ನಾಗರಿಕ ಆಹಾರ ಮತ್ತು ಸರಬರಾಜು ಇಲಾಖೆ

ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆದರೆ ಪಡಿತರ ಚೀಟಿ ಬಂದ ನಂತರ ಸಂಬಂಧಪಟ್ಟ ಅಧಿಕಾರಿಯಿಂದ ರೇಷನ್ ಕಾರ್ಡ್ ಪಡೆಯಲು ರೂ.100 ಪಾವತಿ ಮಾಡಬೇಕಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply