Ration Card Update : ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ.!‌ ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ

Ration Card Update : ನಮಸ್ಕಾರ ಸ್ನೇಹಿತರೇ, ಹೊಸ ಬಿಪಿಎಲ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವಾಲಯ ಸಾರ್ವಜನಿಕರಿಗೆ ಸೂಚನೆ ನೀಡಿದೆ. ಈ ಲೇಖನದಲ್ಲಿ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಯಾವ ದಿನ ಅರ್ಜಿ ಸಲ್ಲಿಸಬೇಕು.? ಯಾರು ಅರ್ಜಿ ಸಲ್ಲಿಸಲು ಅರ್ಹರು? ನೋಡೋಣ.

WhatsApp Group Join Now
Telegram Group Join Now

ಬಿಪಿಎಲ್(BPL) ಪಡಿತರ ಚೀಟಿಗೆ ಅರ್ಹತೆಯ ಮಾನದಂಡಗಳು ಯಾವುವು?

ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಾರ್ಷಿಕ ಆದಾಯ 1.2 ಲಕ್ಷ ರೂಪಾಯಿಯನ್ನು ಮೀರಬಾರದು. ಅರ್ಜಿದಾರರು 7.5 ಹೆಕ್ಟೇರ್‌ಗಿಂತ ಹೆಚ್ಚು ಭೂಮಿ ಹೊಂದಿರಬಾರದು. ವೈಟ್ ಬೋರ್ಡ್ ಕಾರ್ ಹೊಂದಿರಬಾರದು. ಅರ್ಜಿದಾರರು ಸರ್ಕಾರಿ ನೌಕರರಾಗಿರಬಾರದು. ಅರ್ಜಿದಾರರ ಮನೆಯ ವಿಸ್ತೀರ್ಣವು 1,000 ಚದರ ಅಡಿ ಮೀರಬಾರದು. ವಾಣಿಜ್ಯ ತೆರಿಗೆ, ಆದಾಯ ತೆರಿಗೆ ಹಾಗು ಐಟಿ ರಿಟರ್ನ್ಸ್‌ಗೆ ಪಾವತಿದಾರರಾಗಿರಬಾರದು.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : Gruhalakshmi Updates : ನಿಮಗೆ 7ನೇ ಕಂತಿನ ಹಣ ಜಮಾ ಆಯ್ತಾ.? ಈ ರೀತಿ ನಿಮ್ಮ DBT ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Ration Card Update

ಎಲ್ಲಿ ಅರ್ಜಿ ಸಲ್ಲಿಸಬೇಕು?

WhatsApp Group Join Now
Telegram Group Join Now

ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರ ಗ್ರಾಮ ಒನ್ / ಕರ್ನಾಟಕ ಒನ್ ಕೇಂದ್ರಗಳನ್ನು ಭೇಟಿ ನೀಡಿ ನಿಗದಿಪಡಿಸಿದ ಸಮಯದಲ್ಲಿ ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಬೇಕಾಗುವ ದಾಖಲೆಗಳೇನು.?

ಅರ್ಜಿದಾರರ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್. ಮನೆ ಯಾಜಮನಿ ಮಹಿಳೆಯ ಆದಾಯ ಪ್ರಮಾಣ ಪತ್ರ. ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ಫೋನ್ ಸಂಖ್ಯೆ. ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ಹಾಜರಿರಬೇಕಾಗುತ್ತದೆ. ಮನೆಯ ಕರೆಂಟ್ ಬಿಲ್ ಮತ್ತು ಕಂದಾಯ ರಶೀದಿ (ಬಾಡಿಗೆ ಮನೆ ಆಗಿದ್ದಲ್ಲಿ ಮನೆ ಬಾಡಿಗೆ ಕರಾರು & ಕರೆಂಟ್ ಬಿಲ್).

ಇದನ್ನೂ ಕೂಡ ಓದಿ : Govt New Scheme : ಮೋದಿಯ ಹೊಸ ಗ್ಯಾರಂಟಿ ಸ್ಕೀಮ್.! ಹೇಗೆ ಅರ್ಜಿ ಸಲ್ಲಿಸುವುದು.? ಇಲ್ಲಿದೆ ಡೀಟೇಲ್ಸ್

ಪಡಿತರ ಚೀಟಿ ತಿದ್ದುಪಡಿಗೂ ಅವಕಾಶ ನೀಡಲಾಗಿದೆ :-

ಹೊಸದಾಗಿ ಪಡಿತರ ಚೀಟಿ(Ration Card) ಪಡೆಯಲು ಅರ್ಜಿ ಸಲ್ಲಿಸುವುದರ ಜೊತೆಗೆ ಪಡಿತರ ಚೀಟಿ ತಿದ್ದುಪಡಿಗೂ ಅವಕಾಶ ನೀಡಲಾಗಿದ್ದು, ಅವಶ್ಯವಿರುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಹಾರ ಹಾಗು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿ ತಿದ್ದುಪಡಿ ಹಾಗು ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶವಲ್ಲ. ಮುಂಬರುವ ದಿನಗಳಲ್ಲಿ ಮತ್ತೆ ಅರ್ಜಿ ಸಲ್ಲಿಸಲು ಸರ್ಕಾರವು ಅವಕಾಶ ನೀಡಲಾಗುವುದು. ಹಾಗಾಗಿ ಸದ್ಯ ಬಿಪಿಎಲ್ ಪಡಿತರ ಚೀಟಿ ಪಡೆಯಲು ಇಚ್ಛಿಸುವವರು ಆದಷ್ಟು ಬೇಗ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ

ಆನ್ ಲೈನ್ ನಲ್ಲಿ ಕೂಡ ನೀವು ಅರ್ಜಿ ಸಲ್ಲಿಸಬಹುದು : ಆಹಾರ ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರಗಳ ಇಲಾಖೆ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply