ಸಿಎಂ ಅವರನ್ನು ಭೇಟಿಮಾಡಿ ಈ ಮನವಿ ಮಾಡಿದ ರಿಷಬ್ ಶೆಟ್ಟಿ ! ಕಾರಣವೇನು.?

ಇದೀಗ ನಟ ರಿಯಲ್ನಲ್ಲಿ ಕಾಡು ಸುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಅಲ್ಲಿನ ವಾಸ್ತವತೆಯನ್ನು ಹತ್ತಿರದಿಂದ ನೋಡಿ ತಿಳಿದುಕೊಂಡಿದ್ದಾರೆ. ರಿಷಬ್ ಅವರು ತಮ್ಮ ಮನವಿಯನ್ನು ಸಿಎಂ ಕೈಗೆ ಹಸ್ತಾಂತರಿಸುವ ಫೋಟೋ ಶೇರ್ ಮಾಡಿದ್ದಾರೆ.

ಇದನ್ನು ಕೂಡ ಓದಿ : ದರ್ಶನ್ ಸರ್ ಗೆ ಸಿನಿಮಾ ನಿರ್ದೇಶನ ಮಾಡುತ್ತೇನೆ, ಮಗಳ ಮುಂದೆ ಮಾತು ಕೊಟ್ಟರಾ ರಿಷಬ್.!

WhatsApp Group Join Now
Telegram Group Join Now

ಕಾಡು ಸುತ್ತಿ, ಅಡವಿ ಅಂಚಿನ ಜನರ ಜತೆ ಮಾತಾಡಿ, ಅರಣ್ಯ ಇಲಾಖೆ ಸಿಬ್ಬಂದಿಗಳ ಜತೆ ಚರ್ಚಿಸಿ ಕಲೆಹಾಕಿದ ಅಂಶಗಳನ್ನು ಮಾನ್ಯ ಮುಖ್ಯಮಂತ್ರಿಗಳ ಮುಂದಿಟ್ಟಾಗ ಅವರು ತಕ್ಷಣವೇ ಪರಿಹರಿಸುವುದಾಗಿ ಹೇಳಿದ್ದಾರೆ. ಸಮಸ್ಯೆಗೆ ಸ್ಪಂದಿಸಿದ ಶ್ರೀ ಬಸವರಾಜ ಬೊಮ್ಮಾಯಿಯವರಿಗೆ ಧನ್ಯವಾದಗಳು ಎಂದು ನಟ ಪೋಸ್ಟ್ ಮಾಡಿದ್ದಾರೆ. ನಟನ ಕಾರ್ಯಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ, ‘ಕಾಂತಾರ ಸಿನಿಮಾದ ಬಳಿಕ ನಾನು ಹೆಚ್ಚೆಚ್ಚು ಕಾಡು ಮತ್ತು ಕಾಡಂಚಿನ ಪ್ರದೇಶಗಳಲ್ಲಿ ಸುತ್ತಾಡಿದೆ. ಅರಣ್ಯ ಇಲಾಖೆಯ ಜೊತೆ ಕೆಲಸ ಮಾಡುತ್ತಾ ಅರಣ್ಯ ರಕ್ಷಣೆಯ ವೇಳೆ ಇಲಾಖೆಯ ಮಂದಿ ಮತ್ತು ಕಾಡಂಚಿನ ಪ್ರದೇಶಗಳ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅರಿತುಕೊಂಡೆ. ಸುಮಾರು 20 ಅಂಶಗಳ ವಿವರವಾದ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, ಅವರು ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. 

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.?

Leave a Comment