Vahical New Rules : ಎಲ್ಲಾ ವಾಹನ ಮಾಲೀಕರಿಗೆ – ರಾತ್ರೋರಾತ್ರಿ ಹೊಸ ರೂಲ್ಸ್ – ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ!

Vahical New Rules : ನಮಸ್ಕಾರ ಸ್ನೇಹಿತರೇ, ಸ್ವಂತ ವಾಹನ ಹೊಂದಿರುವ ರಾಜ್ಯದ ಎಲ್ಲ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ರೂಲ್ಸ್ ಜಾರಿ. ಇನ್ನು ಮುಂದೆ ಟ್ರಾಫಿಕ್ ಪೊಲೀಸರು ನಿಮ್ಮ ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದು ಗ್ಯಾರಂಟಿ. ಅಂತಹ ದೊಡ್ಡ ರೂಲ್ಸ್ ಜಾರಿಗೊಳಿಸಲಾಗಿದ್ದು, ಪ್ರತಿಯೊಬ್ಬ ವಾಹನ ಮಾಲೀಕರು ಕೂಡ ಕಡ್ಡಾಯವಾಗಿ ವಿಷಯ ತಿಳಿದುಕೊಳ್ಳುವುದು ಅತ್ಯಗತ್ಯವಾಗಿದೆ. ನಿಮ್ಮ ಬಳಿ ಯಾವುದೇ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಅಥವಾ ಟ್ಯಾಕ್ಸಿ ಹೀಗೆ ಯಾವುದೇ ಬೈಕು, ಕಾರು ಇದ್ದರೂ ಕೂಡ ತಪ್ಪದೆ ಪ್ರತಿಯೊಬ್ಬರಿಗೂ ಕೂಡ ಈ ಲೇಖನವನ್ನು ಕೊನೆವರೆಗೂ ನೋಡಿ.

ಇದನ್ನೂ ಕೂಡ ಓದಿ : SSLC Result 2024 : ಪರೀಕ್ಷಾ ಫಲಿತಾಂಶ ದಿನಾಂಕ ಗೊಂದಲ.! ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ

WhatsApp Group Join Now
Telegram Group Join Now

ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್(HSRP Number Plate) ಅಳವಡಿಕೆಗೆ ಮೇ 31ರ ವರೆಗೆ ಅವಕಾಶ ನೀಡಲಾಗಿದ್ದು, ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ವಿಧಿಸುವ ಸಾಧ್ಯತೆ ಇದೆ. 2019 ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಹೆಚ್ಎಸ್ಆರ್ ಪಿ(HSRP Number Plate) ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಗತ್ಯವಿದೆ ಎಂದು ಸಾರಿಗೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಎರಡು ಗಡುವಿನ ವಿಸ್ತರಣೆಗಳ ಹೊರತಾಗಿಯೂ ರಾಜ್ಯದಲ್ಲಿ ಕೇವಲ 34 ಹೆಚ್ಎಸ್ಆರ್ ಪಿ(HSRP Number Plate) ಮಾತ್ರ ನೋಂದಾಯಿಸಲ್ಪಟ್ಟಿದೆ. ಹೆಚ್ಚುವರಿ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ್ ಮಾತನಾಡಿ, ಫೆಬ್ರವರಿಯಿಂದ ಸುಮಾರು 18 ಲಕ್ಷ ನೋಂದಣಿ ನಡೆದಿದೆ. ಮತ್ತು ಹೆಚ್ಚಿನ ವಾಹನಗಳು ಇನ್ನು ಹೆಚ್ಎಸ್ಆರ್ ಪಿ(HSRP Number Plate) ಆಯ್ಕೆಯನ್ನು ಮಾಡಿಸಿಕೊಳ್ಳಬೇಕಾಗಿದೆ. ಕರ್ನಾಟಕದಲ್ಲಿ 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿ ಚಕ್ರ, ಲಘು ಮೋಟಾರು ವಾಹನಗಳು ಪ್ರಯಾಣಿಕರ ಕಾರು, ಮಧ್ಯಮ ಹಾಗು ಭಾರೀ ವಾಣಿಜ್ಯ ವಾಹನಗಳು, ಟ್ರೈಲರ್ ಮತ್ತು ಟ್ರಾಕ್ಟರ್ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್‌ವೆಲ್‌ ನೀಡಲು ನಿರ್ಧಾರ.!

ರಾಜ್ಯ ಸರ್ಕಾರವು ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಲು ಮೇ 31 ರವರೆಗೆ ಅವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31 ರವರೆಗೆ ಹೆಚ್ಎಸ್ಆರ್ ಪಿ(HSRP Number Plate) ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಅದಾದ ನಂತರ ಜೂನ್ ಒಂದರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ₹500 ರೂಪಾಯಿಯಿಂದ ₹1000 ರೂಪಾಯಿಗಳವರೆಗೆ ದಂಡವನ್ನು ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!

WhatsApp Group Join Now
Telegram Group Join Now

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿರುವ ಸುಮಾರು 2 ಕೋಟಿ ದ್ವಿಚಕ್ರ ತ್ರಿಚಕ್ರ, ಲಘು ಮೋಟಾರು ವಾಹನ, ಪ್ರಯಾಣಿಕರ ಕಾರುಗಳು, ವಾಣಿಜ್ಯ ವಾಹನ, ಟ್ರ್ಯಾಕ್ಟರ್, ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ. ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ವಾಹನ ಮಾಲೀಕತ್ವ, ವಿಳಾಸ ವರ್ಗಾವಣೆ, ಕಂತು-ಕರಾರು ನಮೂದು ರದ್ಧತಿ, ಅರ್ಹತಾ ಪತ್ರ ನವೀಕರಣ ಸೇವೆಗೆ ಅನುಮತಿ ಇರುತ್ತಿರಲಿಲ್ಲ. ಹಾಗೆ ಇದರ ಜೊತೆಗೆ ಭಾರಿ ಪ್ರಮಾಣದ ದಂಡ ಕೂಡ ಮಾರ್ಗಸೂಚಿ ಪಾಲಿಸದ ವಾಹನ ಮಾಲೀಕರಿಗೆ ತಟ್ಟುತ್ತಿತ್ತು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply