ಇತ್ತೀಚಿಗೆ ನಿಧನರಾದ ಕಾಂಗ್ರೆಸ್ ನಾಯಕ ದಿ.ಆರ್.ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ

ಜಸ್ಟ್ ಕನ್ನಡ ಸುದ್ಧಿ : ಇತ್ತೀಚಿಗಷ್ಟೇ ಹೃದಯಾಘಾತದಿಂದ ವಿಧಿವಶರಾದ ಕಾಂಗ್ರೆಸ್  ಮುಖಂಡ ದಿ.ಆರ್. ಧ್ರುವನಾರಾಯಣ ಅವರ ಪತ್ನಿ ವೀಣಾ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ವೀಣಾ ಅವರು ಕೂಡ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ, ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ

ಕೆಲವು ದಿನಗಳ ಹಿಂದೆಯಷ್ಟೇ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಆ ದುಃಖ ಮಾಸುವ ಮುನ್ನವೇ ಮತ್ತೊಂದು ಆಘಾತ ಕುಟುಂಬಕ್ಕೆ ಎದುರಾಗಿದ್ದು, ಧ್ರುವನಾರಾಯಣ ಅವರ ಧರ್ಮಪತ್ನಿ ಕೂಡ ವಿಧಿವಶರಾಗಿದ್ದಾರೆ.

ಆರ್.ಧ್ರುವನಾರಾಯಣ ಹಾಗು ವೀಣಾ ಅವರ ಪುತ್ರ ಇತ್ತೀಚಿಗೆ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣಾ ಅಖಾಡಕ್ಕಿಳಿದಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply