Leelavathi : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಟ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ. ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಗೆ ಅವರು ನಿಧನರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ವಿನೋದ್ ರಾಜ್ ಕುಸಿದು ಬಿದ್ದಿದ್ದಾರೆ.
ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದ ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ನೆಲಮಂಗಲದ ಬಳಿ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟಿ ಲೀಲಾವತಿ ಆರೋಗ್ಯ ಹದಗೆಟ್ಟಿತ್ತು. ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ.
ಪ್ರಸ್ತುತ ತಾಯಿ ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಇದೀಗ ವಿನೋದ್ ರ ತಾಯಿ ಕಳೆದುಕೊಂಡು ಒಬ್ಬಂಟಿಯಾಗಿದ್ದಾರೆ. ವಿನೋದ್ ರಾಜ್ ಅವರು ತಾಯಿ ಲೀಲಾವತಿ ಅವರನ್ನ ಕಳೆದುಕೊಂಡು ದಿಕ್ಕು ಕಾಣದೇ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಅಮ್ಮ ಎದ್ದೇಳು ಅಮ್ಮ ಪ್ಲೀಸ್ ಮಾತಾಡು ಅಮ್ಮ ಅಂತ ಗೋಳಾಡುವ ದೃಶ್ಯ ನೋಡುವವರಿಗೆ ಕರುಳು ಹಿಂಡುತ್ತೆ. ಲೀಲಾವತಿ ಅವರ ಆತ್ಮ ಕ್ಕೆ ಶಾಂತಿ ಸಿಗಲಿ ಎಂದು ನೀವು ಕೂಡ ಕಮೆಂಟ್ ಮಾಡಿ ತಿಳಿಸಿ.