Rain Updates : ಮಳೆ.! ಮಳೆ.! ಮುಂದಿನ ಮೂರು ದಿನ ಮಳೆಯಾಗಲಿದೆಯಾ.? ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಸಾಧ್ಯತೆ.!

Rain Updates : ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ್ದು, ಕರ್ನಾಟಕದ ದಕ್ಷಿಣ ಒಳನಾಡು ಕರಾವಳಿ ಭಾಗ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವೇಳೆ ಮಳೆಯಾಗುವ ಪ್ರದೇಶಗಳಲ್ಲಿ ಸುಮಾರು 35 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Darshan Thoogudeepa : ಪವಿತ್ರ ಗೌಡ ಮಗಳ ಜೊತೆ ದರ್ಶನ್ ಸಖತ್ ಡಾನ್ಸ್.! ಪತ್ನಿ ವಿಜಯಲಕ್ಷ್ಮಿ ರಿಯಾಕ್ಷನ್ ಏನು.?

ಕರಾವಳಿಯ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಭಾಗಗಳಲ್ಲಿ ಕನಿಷ್ಠ ತಾಪಮಾನವು ದಾಖಲಾಗಲಿದೆ.

Whatsapp Group Join
Telegram channel Join

ಅಂದರೆ ಸಾಮಾನ್ಯಕ್ಕಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ. ಇನ್ನು ಮೀನುಗಾರಿಕೆಗೆ ತೆರಳುವ ಬಗ್ಗೆ ಯಾವುದೇ ಮುನ್ಸೂಚನೆ ಇಲ್ಲ. ಉತ್ತರ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹಗುರದಿಂದ ಮಳೆಯಾಗಲಿದ್ದು, ಮೀನುಗಾರರಿಗೆ ಯಾವುದೇ ಆತಂಕವಿಲ್ಲವೆಂದು ತಿಳಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರುತ್ತದೆ.

ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.! ಹಣ ಬರದೇ ಇದ್ದರೆ ಈ ಕೆಲಸ ಕಡ್ಡಾಯವಾಗಿ ಮಾಡಿ

ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆಯೆಂದೂ, ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಯಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಯಿದೆ. ಇನ್ನೂ ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಕೇಂದ್ರ ಉಪಗ್ರಹ ಆಧಾರಿತ ಮಳೆ ನಕ್ಷೆಯ ಮಾಹಿತಿಯಂತೆ ನವಂಬರ್ 11 ರಿಂದ 14ರವರೆಗೆ ರಾಜ್ಯದಲ್ಲಿ ಎಲ್ಲೂ ಮಳೆಯಾಗುವುದಿಲ್ಲ ಎಂದು ಹೇಳಿದೆ.

ಆದರೆ ನವಂಬರ್ 18ರಂದು ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರಗಳಲ್ಲಿ ಮಳೆಯಾಗಲಿದ್ದು ಅದರಲ್ಲೂ ವಿಶೇಷವಾಗಿ ಮೈಸೂರು ಚಾಮರಾಜನಗರದಲ್ಲಿ ಗರಿಷ್ಠ 30 ಮೀಟರ್ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಕೂಡ ಓದಿ : 47 ಸಾವಿರ ರೂಪಾಯಿ ದಂಡ ಹಾಕಿದ ಟ್ರಾಫಿಕ್ ಪೊಲೀಸ್… ಅದಕ್ಕೆ ಆಟೋ ಚಾಲಕ ಮಾಡಿದ್ದೇನು ಗೊತ್ತಾ.?

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply